ಭಾರತ- ಪಾಕ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ರದ್ದಾದರೆ ಯಾರಿಗೆ ಚಿನ್ನದ ಪದಕ?

2026 ರ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಚಿನ್ನದ ಪದಕಕ್ಕಾಗಿ ಸೆಣಸಲಿವೆ. ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ ಫೈನಲ್ ತಲುಪಿದೆ. ಈ ಬಹುನಿರೀಕ್ಷಿತ ಪಂದ್ಯಕ್ಕೆ ಮಳೆಯ ಆತಂಕವಿದ್ದು, ಪಂದ್ಯ ರದ್ದಾದರೆ ಎರಡು ತಂಡಗಳಿಗೂ ಚಿನ್ನದ ಪದಕ ನೀಡುವ ಹೊಸ ನಿಯಮವಿದೆ. ಇದು ಏಷ್ಯನ್ ಗೇಮ್ಸ್‌ನಲ್ಲಿ ಇತ್ತಂಡಗಳ ಮೊದಲ ಮುಖಾಮುಖಿಯಾಗಿದೆ.

ಭಾರತ- ಪಾಕ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ರದ್ದಾದರೆ ಯಾರಿಗೆ ಚಿನ್ನದ ಪದಕ?
ಭಾರತ Vs ಪಾಕಿಸ್ತಾನ್

Updated on: Oct 02, 2026 | 10:37 PM

2026 ರ ಏಷ್ಯನ್ ಗೇಮ್ಸ್‌ ಪುರುಷರ ಕ್ರಿಕೆಟ್​ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಚಿನ್ನದ ಪದಕ್ಕಾಗಿ ಸೆಣಸಾಡಲಿವೆ. ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು 124 ರನ್‌ಗಳಿಂದ ಸೋಲಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡ ಶನಿವಾರ ನಡೆಯಲಿರುವ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ. ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 10:00 ಗಂಟೆಗೆ ಪ್ರಾರಂಭವಾಗಲಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಟಾಸ್ ನಡೆಯಲಿದೆ. ಆದಾಗ್ಯೂ ಈ ಪಂದ್ಯಕ್ಕೆ ಮಳೆಯ ಆತಂಕವಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಪಂದ್ಯದ ದಿನ ಮಳೆಯಾಗುವ ಸಾಧ್ಯತೆ

ಜಪಾನ್‌ನ ನಿಶಿನ್‌ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಹವಾಮಾನವು ಪ್ರಮುಖ ಪಾತ್ರ ವಹಿಸುತ್ತದೆ. ಅಕ್ಯೂವೆದರ್ ಪ್ರಕಾರ, ಪಂದ್ಯದ ಬೆಳಿಗ್ಗೆ ಮಳೆಯಾಗುವ ಸಾಧ್ಯತೆ 62% ರಷ್ಟಿದ್ದು, ಮಧ್ಯಾಹ್ನದ ವೇಳೆಗೆ ಅದು 25% ಕ್ಕೆ ಇಳಿಯಬಹುದು. ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 37% ಮೋಡ ಕವಿದ ವಾತಾವರಣವಿರಲಿದೆ. ಆದ್ದರಿಂದ, ಮಳೆಯು ಪಂದ್ಯಕ್ಕೆ ಅಡ್ಡಿಯನ್ನುಂಟು ಮಾಡಬಹುದು.

ಎರಡು ತಂಡಗಳಿಗೂ ಪದಕ

ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದರೆ, ಹೊಸ ನಿಯಮದ ಪ್ರಕಾರ ಎರಡು ತಂಡಗಳಿಗೆ ಚಿನ್ನದ ಪದಕ ನೀಡಲಾಗುತ್ತದೆ. 2023 ರ ಹ್ಯಾಂಗ್‌ಝೌ ಏಷ್ಯನ್ ಕ್ರೀಡಾಕೂಟದಲ್ಲಿ, ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ, ಭಾರತಕ್ಕೆ ಟಿ20 ಶ್ರೇಯಾಂಕದ ಆಧಾರದ ಮೇಲೆ ಚಿನ್ನದ ಪದಕವನ್ನು ನೀಡಲಾಗಿತ್ತು. ಆದಾಗ್ಯೂ, ಈ ಬಾರಿ ಪಂದ್ಯಾವಳಿಯ ಪ್ರಸ್ತುತ ನಿಯಮಗಳ ಪ್ರಕಾರ, ಪಂದ್ಯವು ಮಳೆಯಿಂದಾಗಿ ಡ್ರಾ ಆಗಿದ್ದರೆ, ಭಾರತ ಮತ್ತು ಪಾಕಿಸ್ತಾನ ಎರಡಕ್ಕೂ ಜಂಟಿಯಾಗಿ ಚಿನ್ನದ ಪದಕವನ್ನು ನೀಡಲಾಗುತ್ತದೆ.

ಭಾರತ- ಪಾಕ್ ಮೊದಲ ಮುಖಾಮುಖಿ

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಏಷ್ಯನ್ ಗೇಮ್ಸ್ ವೇದಿಕೆಯಲ್ಲಿ ಮೊದಲ ಬಾರಿಗೆ ಪರಸ್ಪರ ಎದುರಾಗಲಿವೆ. 2023 ರ ಹ್ಯಾಂಗ್‌ಝೌ ಕ್ರೀಡಾಕೂಟದ ನಂತರ ಭಾರತವು ಏಷ್ಯನ್ ಗೇಮ್ಸ್‌ನಲ್ಲಿ ಐದು ಪಂದ್ಯಗಳನ್ನು ಆಡಿದೆಯಾದರೂ ಎಂದಿಗೂ ಪಾಕಿಸ್ತಾನವನ್ನು ಎದುರಿಸಿಲ್ಲ. ಇತ್ತೀಚೆಗೆ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಿನ್ನದ ಪದಕ ಗೆದ್ದ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ತಂಡವು ಪಾಕಿಸ್ತಾನವನ್ನು ಎದುರಿಸಿಲ್ಲ.

ಫೈನಲ್ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us