AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯವನ್ನೇ ಆಡದೆ ಏಷ್ಯನ್ ಗೇಮ್ಸ್​ನಿಂದ ಹೊರಬಿದ್ದ ಚೀನಾ; ಸೆಮೀಸ್​ಗೇರಿದ ಬಾಂಗ್ಲಾ, ಪಾಕ್

2026ರ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್ ಪಂದ್ಯಗಳು ಆರಂಭವಾಗಿವೆ. ಮಳೆಯಿಂದಾಗಿ ಬಾಂಗ್ಲಾದೇಶ-ಚೀನಾ ಪಂದ್ಯ ರದ್ದಾಗಿದ್ದು, ರ್ಯಾಂಕಿಂಗ್ ಕಾರಣ ಚೀನಾ ಹೊರಬಿದ್ದಿದೆ. ಬಾಂಗ್ಲಾದೇಶ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮತ್ತೊಂದೆಡೆ, ಮಳೆಯಿಂದಾಗಿ 11 ಓವರ್‌ಗಳಿಗೆ ಸೀಮಿತಗೊಂಡ ಪಾಕಿಸ್ತಾನ-ಥೈಲ್ಯಾಂಡ್ ಪಂದ್ಯದಲ್ಲಿ ಪಾಕಿಸ್ತಾನ ರೋಚಕ ಜಯ ಸಾಧಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಪಂದ್ಯವನ್ನೇ ಆಡದೆ ಏಷ್ಯನ್ ಗೇಮ್ಸ್​ನಿಂದ ಹೊರಬಿದ್ದ ಚೀನಾ; ಸೆಮೀಸ್​ಗೇರಿದ ಬಾಂಗ್ಲಾ, ಪಾಕ್
ಬಾಂಗ್ಲಾದೇಶ, ಪಾಕಿಸ್ತಾನ್Image Credit source: ACC X
ಪೃಥ್ವಿಶಂಕರ
|

Updated on:Sep 17, 2026 | 6:11 PM

Share

2026 ರ ಏಷ್ಯನ್ ಗೇಮ್ಸ್ ಇದೇ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಕ್ರಿಕೆಟ್​ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಸುತ್ತಿಗೆ ಇಂದಿನಿಂದ ಚಾಲನೆ ಸಿಕ್ಕಿದೆ. ಅದರಂತೆ ಇಂದು ಬಾಂಗ್ಲಾದೇಶ ಮತ್ತು ಚೀನಾ ನಡುವೆ ಮೊದಲ ಕ್ವಾರ್ಟರ್ ಫೈನಲ್‌ ಪಂದ್ಯ ನಡೆಯಬೇಕಿತ್ತು. ಆದರೆ ಈ ಪಂದ್ಯ ನಡೆಯಲಿಲ್ಲ. ಪರಿಣಾಮವಾಗಿ, ಚೀನಾದ ಮಹಿಳಾ ಕ್ರಿಕೆಟ್ ತಂಡವು ಒಂದು ಪಂದ್ಯವನ್ನೂ ಆಡದೆ ಏಷ್ಯನ್ ಕ್ರೀಡಾಕೂಟದಿಂದ ಹೊರಬಿತ್ತು. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಪಂದ್ಯ ರದ್ದಾದ ಕಾರಣ ರ್ಯಾಂಕಿಂಗ್​ನಲ್ಲಿ ಮೇಲಿದ್ದ ಬಾಂಗ್ಲಾದೇಶ ಸೆಮಿಫೈನಲ್​ಗೇರಿದರೆ, ಚೀನಾ ಮಹಿಳಾ ತಂಡ ಕ್ರೀಡಾಕೂಟದಿಂದ ಹೊರಬಿತ್ತು.

ಪಂದ್ಯಾವಳಿಯಿಂದ ಚೀನಾ ಹೊರಬಿದ್ದಿದ್ದೇಕೆ?

ಏಷ್ಯನ್ ಗೇಮ್ಸ್ ಕ್ರಿಕೆಟ್‌ನ ನಿಯಮ 16.10.2(b) ಪ್ರಕಾರ, ಒಂದು ಪಂದ್ಯ ಮಳೆಯಿಂದ ರದ್ದಾದರೆ, ರ್ಯಾಂಕಿಂಗ್​ನಲ್ಲಿ ಮೇಲಿದ್ದ ತಂಡವು ಮುಂದಿನ ಸುತ್ತಿಗೆ ಮುನ್ನಡೆಯುತ್ತದೆ. ಅದರಂತೆ ಈ ಎರಡೂ ತಂಡಗಳಲ್ಲಿ, ಬಾಂಗ್ಲಾದೇಶವು ಐಸಿಸಿ ಶ್ರೇಯಾಂಕದಲ್ಲಿ ಚೀನಾಕ್ಕಿಂತ ಮುಂದಿತ್ತು. ಅದಕ್ಕಾಗಿಯೇ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆದರೆ, ಇತ್ತ ಚೀನಾ ನಿರಾಶೆಯಿಂದಲೇ ಟೂರ್ನಿಯಿಂದ ಹೊರನಡೆಯಿತು.

ಕೊನೆಯ ಓವರ್​ನಲ್ಲಿ ಗೆದ್ದ ಪಾಕಿಸ್ತಾನ

ಇತ್ತ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಥೈಲ್ಯಾಂಡ್ ತಂಡವನ್ನು ಕೊನೆಯ ಓವರ್​ನಲ್ಲಿ ಮಣಿಸಿದ ಪಾಕಿಸ್ತಾನ ಮಹಿಳಾ ತಂಡ ಸೆಮಿಫೈನಲ್‌ಗೆ ಟಿಕೆಟ್ ಪಡೆದುಕೊಂಡಿತು. ಮಳೆಯಿಂದಾಗಿ ಪಾಕಿಸ್ತಾನ ಮತ್ತು ಥೈಲ್ಯಾಂಡ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ತಲಾ 11 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಪಾಕಿಸ್ತಾನ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿತು.

ಏಷ್ಯನ್ ಗೇಮ್ಸ್​ಗೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ

ಮೊದಲು ಬ್ಯಾಟಿಂಗ್ ಮಾಡಿದ ಥೈಲ್ಯಾಂಡ್, ಪಾಕಿಸ್ತಾನಕ್ಕೆ 11 ಓವರ್‌ಗಳಲ್ಲಿ 92 ರನ್‌ಗಳ ಗುರಿ ನೀಡಿತು. ಥೈಲ್ಯಾಂಡ್‌ಗೆ ಹೋಲಿಸಿದರೆ, ಪಾಕಿಸ್ತಾನ ತಂಡ ಬಲಿಷ್ಠವಾಗಿ ಕಾಣುತ್ತಿತ್ತು. ಆದರೆ ಥೈಲ್ಯಾಂಡ್ ಸುಲಭವಾಗಿ ಸೋಲೊಪ್ಪಿಕೊಳ್ಳದೆ ಕೊನೆಯ ಓವರ್​ವರೆಗೂ ಪಂದ್ಯವನ್ನು ಕೊಂಡೊಯ್ಯಿತು. ಆದಾಗ್ಯೂ ಪಾಕಿಸ್ತಾನ ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Thu, 17 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ