AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ

India-Pakistan T20 World Cup 2026 : 2026ರ ಟಿ20 ವಿಶ್ವಕಪ್‌ನಲ್ಲಿ ಫೆಬ್ರವರಿ 15ರಂದು ನಡೆಯಬೇಕಿರುವ ಭಾರತ-ಪಾಕಿಸ್ತಾನ ಪಂದ್ಯ ರದ್ದಾಗುವ ಸಾಧ್ಯತೆಯಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಚಿಂತನೆಯಲ್ಲಿದೆ. ಈ ನಿರ್ಧಾರದಿಂದ ಐಸಿಸಿ ಮತ್ತು ಪ್ರಸಾರಕರಿಗೆ ಭಾರಿ ಆರ್ಥಿಕ ನಷ್ಟವಾಗಲಿದ್ದು, ಪಾಕಿಸ್ತಾನ ತಂಡದ ಮೇಲೂ ನಕಾರಾತ್ಮಕ ಪರಿಣಾಮ ಬೀಳಲಿದೆ. ಮಾಜಿ ಆಟಗಾರರು ಸಹ ಬಹಿಷ್ಕಾರಕ್ಕೆ ಒತ್ತಾಯಿಸಿದ್ದಾರೆ.

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ
Ind Vs Pak
ಪೃಥ್ವಿಶಂಕರ
|

Updated on:Jan 26, 2026 | 4:58 PM

Share

2026ರ ಟಿ20 ವಿಶ್ವಕಪ್ (T20 World Cup 2026) ಇದೇ ಫೆಬ್ರವರಿ 9 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 15 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ನಡುವೆ ನಡೆಯಲಿದೆ. ಆದಾಗ್ಯೂ ಈ ಪಂದ್ಯ ನಡೆಯುವುದು ಅನುಮಾನ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವಂತೆ, ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡವನ್ನು ಕಣಕ್ಕಿಳಿಸದಿರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಚಿಂತಿಸುತ್ತಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಮತ್ತು ಪ್ರಧಾನಿ ಶಹಬಾಜ್ ಷರೀಫ್ ನಡುವೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಭೆ ನಡೆಯಲಿದೆ. ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಸಮಾಧಾನಗೊಂಡಿದ್ದು, ಟೀಂ ಇಂಡಿಯಾ ವಿರುದ್ಧ ತನ್ನ ಪಂದ್ಯವನ್ನು ಬಹಿಷ್ಕರಿಸಲು ಪಿಸಿಬಿ ಯೋಚಿಸುತ್ತಿದೆ.

ಪಂದ್ಯ ರದ್ದಾದರೆ ಏನಾಗುತ್ತದೆ?

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ರದ್ದಾದರೆ, ಅದು ಐಸಿಸಿಗೆ ಸಾಕಷ್ಟು ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ. ಟಿ20 ವಿಶ್ವಕಪ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳ ಜೊತೆಗೆ, ಭಾರತ-ಪಾಕಿಸ್ತಾನ ಪಂದ್ಯವು ವಿಶ್ವದಲ್ಲೇ ಅತಿ ಹೆಚ್ಚು ರೇಟಿಂಗ್ ಪಡೆದ ಪಂದ್ಯವಾಗಿದೆ. ಹೀಗಾಗಿ ಒಂದು ವೇಳೆ ಪಾಕಿಸ್ತಾನ ಈ ಪಂದ್ಯದಿಂದ ಹಿಂದೆ ಸರಿದರೆ ಐಸಿಸಿ ಮತ್ತು ಪ್ರಸಾರಕರಿಗೆ ಗಮನಾರ್ಹ ನಷ್ಟಕ್ಕೆ ಕಾರಣವಾಗಬಹುದು. ಆದಾಗ್ಯೂ, ಇದು ಪಾಕಿಸ್ತಾನದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ, ಏಕೆಂದರೆ ಐಸಿಸಿ ಪಾಕ್ ತಂಡದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದು.

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್

ಬಹಿಷ್ಕಾರಕ್ಕೆ ಮಾಜಿ ಆಟಗಾರರ ಒತ್ತಾಯ

ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದ ಹೊರಬಿದ್ದ ನಂತರ, ಪಾಕಿಸ್ತಾನದ ಮಾಜಿ ಆಟಗಾರರು ವಿಲಕ್ಷಣ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಾಜಿ ನಾಯಕ ರಶೀದ್ ಖಾನ್ ಅವರು ಪಾಕಿಸ್ತಾನ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಅನ್ನು ಬಹಿಷ್ಕರಿಸಬೇಕೆಂದಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಆಡದಿರುವುದು ಭಾರತ ಮತ್ತು ಐಸಿಸಿಗೆ ಗಮನಾರ್ಹ ಹೊಡೆತವಾಗಲಿದೆ ಎಂಬುದು ಅವರ ಅಭಿಪ್ರಾಯವಾಗಿದೆ. ಪ್ರಸ್ತುತ ಭಾರತದ ವಿರುದ್ಧದ ಪಂದ್ಯವನ್ನು ಪಾಕ್ ತಂಡ ಬಹಿಷ್ಕರಿಸುವ ವರದಿಗಳು ಪಾಕಿಸ್ತಾನಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಆದಾಗ್ಯೂ ಶಹಬಾಜ್ ಷರೀಫ್ ಮತ್ತು ಮೊಹ್ಸಿನ್ ನಖ್ವಿ ನಡುವಿನ ಸಭೆಯ ನಂತರ ಈ ಸುದ್ದಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Mon, 26 January 26