AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು

Women's T20 World Cup 2026: 2026ರ ಟಿ20 ವಿಶ್ವಕಪ್‌ಗೆ ಭಾರತ ಮಹಿಳಾ ತಂಡ ಸಿದ್ಧತೆ ನಡೆಸುತ್ತಿದ್ದು, ಇಂಗ್ಲೆಂಡ್ ವಿರುದ್ಧ ಸರಣಿ ಹಾಗೂ ಅಭ್ಯಾಸ ಪಂದ್ಯಗಳಲ್ಲಿ ಸೋಲು ಕಂಡಿದೆ. ತಂಡದ ಉಪನಾಯಕಿ ಸ್ಮೃತಿ ಮಂಧನಾ ಅವರ ಕಳಪೆ ಫಾರ್ಮ್ ನಿರ್ವಹಣೆಯ ಚಿಂತೆ ಹೆಚ್ಚಿಸಿದೆ. ವಿಶ್ವಕಪ್‌ಗೂ ಮುನ್ನವೇ ಮಂಧನಾ ಲಯಕ್ಕೆ ಮರಳದಿದ್ದರೆ, ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯ ಸೇರಿದಂತೆ ಟೀಂ ಇಂಡಿಯಾಕ್ಕೆ ಸಮಸ್ಯೆಗಳು ಎದುರಾಗಬಹುದು. ಈ ಸವಾಲು ತಂಡದ ವಿಶ್ವಕಪ್ ಆಕಾಂಕ್ಷೆಗಳಿಗೆ ಅಡ್ಡಿಯಾಗಿದೆ.

ಇಂಗ್ಲೆಂಡ್​ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು
Smriti Mandhana
ಪೃಥ್ವಿಶಂಕರ
|

Updated on: Jun 11, 2026 | 5:08 PM

Share

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಇಂಗ್ಲೆಂಡ್​ನಲ್ಲಿ ಆರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಭಾರತ ವನಿತಾ ಪಡೆ, ಆತಿಥೇಯ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತು. ಆದರೆ ಆ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿತು. ಇದಾದ ನಂತರ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತು. ಅದರಲ್ಲಿ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿತು. ಆ ಒಂದು ಸೋಲು ಇಂಗ್ಲೆಂಡ್ ತಂಡದ ವಿರುದ್ಧವೇ ಬಂದಿತು. ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ವನಿತಾ ಪಡೆ ಸೋಲುಗಳಿಗೆ ಕೊರಳೊಡ್ಡಿರುವುದು ಆಡಳಿತ ಮಂಡಳಿಯ ಚಿಂತೆ ಹೆಚ್ಚಿಸಿದೆ. ಅದರಲ್ಲೂ ತಂಡದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಅವರ ಕಳಪೆ ಫಾರ್ಮ್​ ಮ್ಯಾನೇಜ್​ಮೆಂಟ್​ನ ನಿದ್ದೆಗೆಡಿಸಿದೆ.

2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಅದಕ್ಕೂ ಮೊದಲು, ಮಂಧಾನ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿರುವುದು ಹೊಸ ತಲೆನೋವು ತಂದಿದೆ. ಇಂಗ್ಲೆಂಡ್ ಪ್ರವಾಸದಿಂದ ಅಭ್ಯಾಸ ಪಂದ್ಯಗಳವರೆಗೆ, ಸ್ಮೃತಿ ಮಂಧಾನ ಪ್ರತಿ ರನ್‌ಗೂ ಕಷ್ಟಪಡುತ್ತಿರುವುದು ಕಂಡುಬಂದಿದೆ, ಇದು ಟೀಂ ಇಂಡಿಯಾಕ್ಕೆ ಎಚ್ಚರಿಕೆಯ ಸಂಕೇತವಾಗಿದೆ.

ಇಂಗ್ಲೆಂಡ್ ಪ್ರವಾಸದಲ್ಲಿ ಮಂಕಾದ ಮಂಧಾನ

ವಾಸ್ತವವಾಗಿ ಟಿ20 ವಿಶ್ವಕಪ್‌ಗೆ ಸಿದ್ಧರಾಗಲು ಮತ್ತು ಅಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಹರ್ಮನ್‌ಪ್ರೀತ್ ಪಡೆ ಸಾಕಷ್ಟು ಮುಂಚಿತವಾಗಿಯೇ ಇಂಗ್ಲೆಂಡ್‌ಗೆ ತಲುಪಿತ್ತು. ಆದಾಗ್ಯೂ, ಈ ಪ್ರವಾಸ ಮಂಧಾನಾಗೆ ದುಃಸ್ವಪ್ನವಾಗಿ ಪರಿಣಮಿಸಿದೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಖಾತೆ ತೆರೆಯದೆ ಪೆವಿಲಿಯನ್‌ ಸೇರಿದ್ದ ಮಂಧಾನ, ಎರಡನೇ ಪಂದ್ಯದಲ್ಲಿ 32 ರನ್ ಗಳಿಸುವ ಮೂಲಕ ಹಳೆಯ ಫಾರ್ಮ್​ಗೆ ಮರಳುವ ಭರವಸೆಯನ್ನು ಮೂಡಿಸಿದ್ದರು. ಆದರೆ ಮೂರನೇ ಮತ್ತು ಅಂತಿಮ ಟಿ20ಯಲ್ಲಿ ಕೇವಲ 8 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಇದರ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್‌ನ ಮೊದಲ ಅಭ್ಯಾಸ ಪಂದ್ಯದಲ್ಲಿ 39 ರನ್ ಬಾರಿಸಿದ್ದ ಸ್ಮೃತಿ, ಇಂಗ್ಲೆಂಡ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೇವಲ 1 ರನ್ ಗಳಿಸುವ ಮೂಲಕ ಮತ್ತೆ ನಿರಾಶೆ ಮೂಡಿಸಿದರು.

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ

ತಂಡಕ್ಕೆ ತಲೆನೋವಾದ ಮಂಧಾನ ಕಳಪೆ ಫಾರ್ಮ್​

ಮಂಧಾನ ಅವರನ್ನು ಭಾರತೀಯ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದೇ ಪರಿಗಣಿಸಲಾಗಿದೆ. ಪವರ್‌ಪ್ಲೇನಲ್ಲಿ ತಂಡಕ್ಕೆ ಆಕ್ರಮಣಕಾರಿ ಮತ್ತು ಬಲವಾದ ಆರಂಭ ನೀಡುವ ಜವಾಬ್ದಾರಿ ಅವರ ಮೇಲಿದೆ. ಮಂಧಾನ ಒಂದೇ ಒಂದು ಅರ್ಧಶತಕ ಗಳಿಸದಿರುವುದು ಕ್ರೀಸ್‌ನಲ್ಲಿ ಸಮಯ ಕಳೆದರೂ ದೊಡ್ಡ ಇನ್ನಿಂಗ್ಸ್‌ಗಳನ್ನು ಪರಿವರ್ತಿಸುವಲ್ಲಿ ಅವರು ವಿಫಲರಾಗುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಮಂಧಾನ ಅವರ ಫಾರ್ಮ್ ಇದೇ ರೀತಿ ಮುಂದುವರಿದರೆ, ಟೀಂ ಇಂಡಿಯಾದ ಸಮಸ್ಯೆಗಳು ಹೆಚ್ಚಾಗಬಹುದು. ಹೀಗಾಗಿ ಮಂಧಾನ ಬೇಗನೇ ತಮ್ಮ ಹಳೆಯ ಲಯಕ್ಕೆ ಬರಲಿ, ತಂಡಕ್ಕೆ ಮತ್ತೊಂದು ವಿಶ್ವಕಪ್ ಗೆಲ್ಲಿಸಿಕೊಡಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!