
2026 ರ ಟಿ20 ವಿಶ್ವಕಪ್‌ನ (T20 World Cup 2026) ಆರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ( Sri Lanka vs Ireland) ನಡುವೆ ನಡೆಯಿತು. ಈ ಪಂದ್ಯವು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ, ಐರ್ಲೆಂಡ್ ತಂಡವನ್ನು 20 ರನ್‌ಗಳಿಂದ ಸೋಲಿಸಿ ತವರಿನಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 163 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ 143 ರನ್ ಕಲೆಹಾಕಲಷ್ಟೇ ಶಕ್ತವಾಗಿ 20 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ತವರು ನೆಲದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. ಒಂದು ಹಂತದಲ್ಲಿ ಲಂಕಾ ತಂಡ 86 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತ್ತು. ಆದರೆ ಕಮಿಂದು ಮೆಂಡಿಸ್ ಐರಿಶ್ ಬೌಲರ್ಗಳ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೊನೆಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಕಮಿಂದು 19 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 44 ರನ್ ಗಳಿಸಿದರು. ಕುಶಾಲ್ ಮೆಂಡಿಸ್ ಕೂಡ ಅದ್ಭುತ ಪ್ರದರ್ಶನ ನೀಡಿ 43 ಎಸೆತಗಳಲ್ಲಿ 5 ಬೌಂಡರಿ ಸೇರಿದಂತೆ ಅಜೇಯ 56 ರನ್ ಗಳಿಸಿದರು. ಹೀಗಾಗಿ ಶ್ರೀಲಂಕಾ 163 ರನ್‌ಗಳ ಸ್ಕೋರ್ ಗಳಿಸಿತು. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಮತ್ತು ಜಾರ್ಜ್ ಡಾಕ್ರೆಲ್ ತಲಾ 2 ವಿಕೆಟ್ ಪಡೆದರು.
T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ
164 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಐರ್ಲೆಂಡ್ ತಂಡವು ಕಳಪೆ ಆರಂಭವನ್ನು ಪಡೆಯಿತು. ಐರ್ಲೆಂಡ್ ಪರ ರಾಸ್ ಅಡೈರ್ 34 ರನ್ ಗಳಿಸಿದರೆ, ಹ್ಯಾರಿ ಟೆಕ್ಟರ್ ಕೂಡ 40 ರನ್ ಗಳಿಸಿದರು. ಉಳಿದ ಐರಿಶ್ ಬ್ಯಾಟ್ಸ್‌ಮನ್‌ಗಳಿಗೆ ಲಂಕಾ ಸ್ಪಿನ್ ದಾಳಿಯ ಮುಂದೆ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲುನ ಸಾಕಾಗಲಿಲ್ಲ. ಪರಿಣಾಮವಾಗಿ ಐರ್ಲೆಂಡ್ ತಂಡವು 19.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 143 ರನ್‌ಗಳನ್ನು ಗಳಿಸಿತು. ಶ್ರೀಲಂಕಾ ತಂಡದ ಮಹೀಶ್ ತೀಕ್ಷಣ ಮತ್ತು ವನಿಂದು ಹಸರಂಗ ತಲಾ ಮೂರು ವಿಕೆಟ್‌ಗಳನ್ನು ಪಡೆದರೆ ಮತೀಶ ಪತಿರಾನ ಕೂಡ ಎರಡು ವಿಕೆಟ್‌ಗಳನ್ನು ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:11 pm, Sun, 8 February 26