AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು

India vs Pakistan 2026 Women's T20 World Cup: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ T20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನವನ್ನು 64 ರನ್‌ಗಳಿಂದ ಭರ್ಜರಿಯಾಗಿ ಸೋಲಿಸಿತು. ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ ಭಾರತ 170 ರನ್ ಗಳಿಸಿತು. ಈ ಗೆಲುವಿನೊಂದಿಗೆ ಭಾರತವು T20 ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದ್ದು, ಪಾಕಿಸ್ತಾನದ ವಿರುದ್ಧ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು
India Women
ಪೃಥ್ವಿಶಂಕರ
|

Updated on:Jun 14, 2026 | 11:11 PM

Share

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ (2026 Women’s T20 World Cup) ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ (India vs Pakistan) ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ದೀಪ್ತಿ ಶರ್ಮಾ ಅವರ ಸ್ಪಿನ್ ಮ್ಯಾಜಿಕ್ ಮುಂದೆ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ 106 ರನ್​ಗಳಿಗೆ ಆಲೌಟ್ ಆಗುವ ಮೂಲಕ 64 ರನ್​ಗಳ ಹೀನಾಯ ಸೋಲು ಕಂಡಿತು.

ಪಾಕ್ ವಿರುದ್ಧ ಮತ್ತೆ ಅಬ್ಬರಿಸಿದ ಸ್ಮೃತಿ

ನಾಲ್ಕು ವರ್ಷಗಳ ಹಿಂದೆ ಅಂದರೆ, 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎಡ್ಜ್‌ಬಾಸ್ಟನ್‌ನಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು ಇದೇ ರೀತಿ ಏಕಪಕ್ಷೀಯವಾಗಿ ಸೋಲಿಸಿತ್ತು. ಆ ಪಂದ್ಯದಲ್ಲೂ ಸ್ಟಾರ್ ಓಪನರ್ ಸ್ಮೃತಿ ಮಂಧಾನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿಯೂ ಕಥೆ ಭಿನ್ನವಾಗಿರಲಿಲ್ಲ. ಈ ಟಿ20 ವಿಶ್ವಕಪ್ ಪಂದ್ಯದಲ್ಲಿ, ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 170 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ತಂಡದ ಪರ ಮಂಧಾನ 68 ರನ್ ಗಳಿಸಿದರು, ಇದು ಪಾಕಿಸ್ತಾನ ವಿರುದ್ಧ ಅವರ ಅತ್ಯಧಿಕ ಸ್ಕೋರ್. ರಿಚಾ ಘೋಷ್ ಕೂಡ ಸ್ಫೋಟಕ 34 ರನ್​ಗಳ ಇನ್ನಿಂಗ್ಸ್ ಆಡಿದರು.

IND vs PAK: ಪಾಕಿಸ್ತಾನ್ ವಿರುದ್ಧ ನಿರ್ಣಾಯಕ ಅರ್ಧಶತಕ ಚಚ್ಚಿದ ಸ್ಮೃತಿ ಮಂಧಾನ

5 ವಿಕೆಟ್​ಗಳ ಗೊಂಚಲು ಪಡೆದ ದೀಪ್ತಿ

ಇದಕ್ಕೆ ಪ್ರತಿಕ್ರಿಯೆಯಾಗಿ ಈ ಗುರಿ ಬೆನ್ನಟ್ಟಿದ ಪಾಕಿಸ್ತಾನಕ್ಕೆ ಆರಂಭಿಕ ಆಟಗಾರ್ತಿಯರು ಉತ್ತಮ ಆರಂಭವನ್ನು ನೀಡಿದರು. ಪವರ್‌ಪ್ಲೇನಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 50 ರನ್‌ ಕಲೆಹಾಕಿದರು. ಆದಾಗ್ಯೂ, ಅನುಭವಿ ಸ್ಪಿನ್ನರ್ ದೀಪ್ತಿ ಶರ್ಮಾ ದಾಳಿಗಿಳಿದ ಕೂಡಲೇ ಪಾಕಿಸ್ತಾನದ ಪೆವಿಲಿಯನ್‌ ಪರೇಡ್ ಶುರುವಾಯಿತು. ಇತ್ತ ಶ್ರೀ ಚರಣಿ ಮತ್ತು ಶಫಾಲಿ ವರ್ಮಾ ಕೂಡ ಪಾಕಿಸ್ತಾನಕ್ಕೆ ಹೊಡೆತ ನೀಡಿದರು, ಶಫಾಲಿ ಪಾಕಿಸ್ತಾನದ ನಾಯಕಿ ಫಾತಿಮಾ ಸನಾ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಅತಿದೊಡ್ಡ ವಿಕೆಟ್ ಪಡೆದರು. ನಂತರ, 17 ನೇ ಓವರ್‌ನಲ್ಲಿ, ದೀಪ್ತಿ ಮೂರು ವಿಕೆಟ್‌ಗಳನ್ನು ಕಬಳಿಸಿ ಪಾಕಿಸ್ತಾನವನ್ನು 106 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Sun, 14 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!