AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಟು ಪುಣೆ: ಅತೀ ವೇಗದಲ್ಲಿ ಕಾರು ಚಲಾಯಿಸಿದ ರೋಹಿತ್ ಶರ್ಮಾಗೆ 3 ಬಾರಿ ದಂಡ..!

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಮುಂಬೈ ಟು ಪುಣೆ: ಅತೀ ವೇಗದಲ್ಲಿ ಕಾರು ಚಲಾಯಿಸಿದ ರೋಹಿತ್ ಶರ್ಮಾಗೆ 3 ಬಾರಿ ದಂಡ..!
Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: Oct 18, 2023 | 9:54 PM

Share

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಗಂಟೆಗಳ ಒಳಗೆ ಮೂರು ಬಾರಿ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಮುಂಬೈನಿಂದ ಪುಣೆಗೆ ಪ್ರಯಾಣಿಸುವಾಗ ಹಿಟ್​ಮ್ಯಾನ್ ಅತೀ ವೇಗದಲ್ಲಿ ಕಾರು ಚಲಾಯಿಸಿದ್ದು, ಹೀಗಾಗಿ ಮೂರು ಬಾರಿ ಫೈನ್ ಹಾಕಲಾಗಿದೆ ಎಂದು ವರದಿಯಾಗಿದೆ.

ತಮ್ಮ ನೀಲಿ ಬಣ್ಣದ ಲಂಬೋರ್ಗಿನಿಯಲ್ಲಿ ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ತೆರಳಿದ್ದರು. ಈ ವೇಳೆ ಗಂಟೆಗೆ 200 ಕಿ.ಮೀ ಕಾರು ಚಲಾಯಿಸಿದ್ದರು. ಇದು ಕೆಲವೊಮ್ಮೆ ಕೆಲವೊಮ್ಮೆ ಗಂಟೆಗೆ 215 ಕಿಮೀ ತಲುಪಿತ್ತು. ಪರಿಣಾಮವಾಗಿ, ಅವರ ವಾಹನದ ನಂಬರ್ ಪ್ಲೇಟ್‌ಗೆ ಮೂರು ಆನ್‌ಲೈನ್ ಟ್ರಾಫಿಕ್ ಚಲನ್‌ಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಬಳಿಕ ರೋಹಿತ್ ಶರ್ಮಾ ಹೆಲಿಕಾಪ್ಟರ್ ಮೂಲಕ ಅಹಮದಾಬಾದ್‌ನಿಂದ ನೇರವಾಗಿ ಮುಂಬೈಗೆ ತೆರಳಿದ್ದರು. ಕುಟುಂಬದೊಂದಿಗೆ ಎರಡು ದಿನಗಳನ್ನು ಕಳೆದ ನಂತರ, ಭಾರತೀಯ ನಾಯಕ ಪುಣೆಗೆ ತೆರಳಲು ನಿರ್ಧರಿಸಿದ್ದರು. ಅದರಂತೆ ತಮ್ಮ ಕಾರಿನಲ್ಲಿ ಅತೀ ವೇಗವಾಗಿ ಡ್ರೈವ್ ಮಾಡಿ ಇದೀಗ ತೊಂದರೆಗೆ ಸಿಲುಕಿದ್ದಾರೆ.

ಇದಾಗ್ಯೂ ರೋಹಿತ್ ಶರ್ಮಾ ಬಾಂಗ್ಲಾದೇಶ್ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಟ್ರಾಫಿಕ್ ಅಧಿಕಾರಿಯ ಮಾಹಿತಿ ಪ್ರಕಾರ, ಮೂರು ಚಲನ್​ಗೆ ವಿಧಿಸಲಾದ ದಂಡವನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತ-ಬಾಂಗ್ಲಾ ಪಂದ್ಯ:

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 40 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 31 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ತಂಡ 8 ಬಾರಿ ಗೆಲುವು ಕಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಬಾಂಗ್ಲಾದೇಶ್ ತಂಡ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ ರಿಯಾದ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಝ್, ಮಹೇದಿ ಹಸನ್, ತಂಝಿಮ್ ಸಾಕಿಬ್, ನಸುಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

ಇದನ್ನೂ ಓದಿ: ಹಳೆಯ ದಾಖಲೆಗಳು ಉಡೀಸ್: ಹೊಸ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?