AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಟ್ರಿಕ್ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್

Vijay Hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ತಂಡವು ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿರುವ 4 ಪಂದ್ಯಗಳಲ್ಲೂ ಜಯ ಸಾಧಿಸಿರುವ ಕರ್ನಾಟಕ ಗ್ರೂಪ್-ಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಕರ್ನಾಟಕ 300 ಕ್ಕೂ ಅಧಿಕ ರನ್ ಕಲೆಹಾಕಿ ಗೆಲುವಿನ ನಿರೀಕ್ಷೆಯಲ್ಲಿದೆ.

ಹ್ಯಾಟ್ರಿಕ್ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್
Mayank Agarwal
ಝಾಹಿರ್ ಯೂಸುಫ್
|

Updated on:Dec 31, 2024 | 12:54 PM

Share

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಅವರ ಸಿಡಿಲಬ್ಬರ ಮುಂದುವರೆದಿದೆ. ಪಂಜಾಬ್ ಮತ್ತು ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಮಯಾಂಕ್ ಇದೀಗ ಮೂರನೇ ಸೆಂಚುರಿ ಬಾರಿಸಿದ್ದಾರೆ. ಅಹಮಾದಾಬಾದ್​ನಲ್ಲಿ ನಡೆಯುತ್ತಿರುವ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ಅನುಭವಿ ಆಟಗಾರ 2 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 112 ಎಸೆತಗಳಲ್ಲಿ 124 ರನ್ ಬಾರಿಸಿದರು. ಈ ಮೂಲಕ ಪ್ರಸ್ತುತ ವಿಜಯ ಹಝಾರೆ ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಶತಕ ಸಿಡಿಸಿದ ಹಿರಿಮೆಗೆ ಪಾತ್ರರಾದರು.

ಇದಕ್ಕೂ ಮುನ್ನ ಪಂಜಾಬ್ ವಿರುದ್ಧ 127 ಎಸೆತಗಳಲ್ಲಿ 139 ರನ್ ಬಾರಿಸಿದ್ದರು. ಇನ್ನು ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 45 ಎಸೆತಗಳಲ್ಲಿ ಅಜೇಯ 100 ರನ್ ಚಚ್ಚಿದ್ದರು. ಇದೀಗ ಹೈದರಾಬಾದ್ ವಿರುದ್ಧ ಕೂಡ ಮೂರಂಕಿ ಮೊತ್ತ ಕಲೆಹಾಕಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್​ಗೆ ಉತ್ತಮ ಸಾಥ್ ನೀಡಿದ ಸ್ಮರಣ್ 75 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 83 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 320 ರನ್ ಕಲೆಹಾಕಿದೆ. ಈ ಮೂಲಕ ಹೈದರಾಬಾದ್ ತಂಡಕ್ಕೆ 321 ರನ್​​ಗಳ ಗುರಿ ನೀಡಿದೆ.

ಹೈದರಾಬಾದ್ ಪ್ಲೇಯಿಂಗ್ 11: ತನ್ಮಯ್ ಅಗರ್ವಾಲ್ , ತಿಲಕ್ ವರ್ಮಾ (ನಾಯಕ) , ಕೋಡಿಮೇಲ ಹಿಮತೇಜ , ಅರವಲ್ಲಿ ಅವನೀಶ್ (ವಿಕೆಟ್ ಕೀಪರ್) , ಕೆ ನಿತೇಶ್ ರೆಡ್ಡಿ , ತನಯ್ ತ್ಯಾಗರಾಜನ್ , ರೋಹಿತ್ ರಾಯುಡು , ಏಲ್ಗಾನಿ ವರುಣ್ ಗೌಡ್ , ಚಾಮ ವಿ ಮಿಲಿಂದ್ , ಮೊಹಮ್ಮದ್ ಮುದ್ದಸ್ಸಿರ್ , ಅನಿಕೇತ್ ರೆಡ್ಡಿ.

ಇದನ್ನೂ ಓದಿ: ಬುಮ್ರಾ ಬೂಮ್ ಬೂಮ್​ಗೆ ಪಾಕ್ ವೇಗಿಯ ಸರ್ವಶ್ರೇಷ್ಠ ದಾಖಲೆ ಶೇಕಿಂಗ್..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಅಭಿನವ್ ಮನೋಹರ್ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಶ್ರೇಯಸ್ ಗೋಪಾಲ್ , ಅನೀಶ್ ಕೆ ವಿ , ಅಭಿಲಾಷ್ ಶೆಟ್ಟಿ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

Published On - 12:53 pm, Tue, 31 December 24

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ