AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ ಮೂವರು ದಿಗ್ಗಜ ಬೌಲರ್‌ಗಳು ಯಾರು ಗೊತ್ತಾ?

ಇದುವರೆಗೆ ಅನೇಕ ಬೌಲರ್‌ಗಳು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ವಾಸಿಂ ಅಕ್ರಮ್, ಕರ್ಟ್ನಿ ವಾಲ್ಷ್, ವಕಾರ್ ಯೂನಿಸ್, ಶೋಯೆಬ್ ಅಖ್ತರ್, ಜಹೀರ್ ಖಾನ್, ಅನಿಲ್ ಕುಂಬ್ಳೆ, ಶೇನ್ ವಾರ್ನ್, ಮುತ್ತಯ್ಯ ಮುರಳೀಧರನ್, ಗ್ಲೆನ್ ಮೆಗ್ರಾತ್, ಬ್ರೆಟ್ ಲೀ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಸಾಧನೆ ಮಾಡಿದ ಹೆಸರುಗಳಾಗಿವೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ ಮೂವರು ದಿಗ್ಗಜ ಬೌಲರ್‌ಗಳು ಯಾರು ಗೊತ್ತಾ?
ಅನಿಲ್ ಕುಂಬ್ಳೆ, ಶೇನ್ ವಾರ್ನರ್ ಮತ್ತು ಮುತ್ತಯ್ಯ ಮುರಳೀಧರನ್
TV9 Web
| Updated By: ಪೃಥ್ವಿಶಂಕರ|

Updated on: Jul 24, 2022 | 4:39 PM

Share

ಕ್ರಿಕೆಟ್‌ನ ಯಾವುದೇ ಸ್ವರೂಪದಲ್ಲಿ ಬೌಲಿಂಗ್ ಬಹಳ ಮುಖ್ಯ. ಟೆಸ್ಟ್, ODI ಅಥವಾ T20 ಕ್ರಿಕೆಟ್ (T20 cricket) ಆಗಿರಲಿ ಪ್ರತಿಯೊಂದು ಸ್ವರೂಪದಲ್ಲೂ ತಂಡವು ಬೌಲರ್‌ಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ನೀವು ಪಂದ್ಯವನ್ನು ಗೆಲ್ಲಬೇಕಾದರೆ, ಬ್ಯಾಟ್ಸ್‌ಮನ್ ಅಬ್ಬರಿಸಬೇಕು ಎಂದು ಹೇಳಲಾಗುತ್ತದೆ. ಆದರೆ ನೀವು ಸರಣಿ ಅಥವಾ ದೊಡ್ಡ ಪಂದ್ಯಾವಳಿಯನ್ನು ಗೆಲ್ಲಬೇಕಾದರೆ, ಬೌಲರ್‌ಗಳು ಉತ್ತಮ ಪ್ರದರ್ಶನ ನೀಡುವುದು ಅವಶ್ಯಕ. ಉತ್ತಮವಾಗಿ ಬೌಲಿಂಗ್ ಮಾಡದೆ ದೊಡ್ಡ ಪಂದ್ಯಾವಳಿಯನ್ನು ಗೆಲ್ಲಲು ಸಾಧ್ಯವಿಲ್ಲ. ಇದುವರೆಗೆ ಅನೇಕ ಬೌಲರ್‌ಗಳು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ವಾಸಿಂ ಅಕ್ರಮ್, ಕರ್ಟ್ನಿ ವಾಲ್ಷ್, ವಕಾರ್ ಯೂನಿಸ್, ಶೋಯೆಬ್ ಅಖ್ತರ್, ಜಹೀರ್ ಖಾನ್, ಅನಿಲ್ ಕುಂಬ್ಳೆ, ಶೇನ್ ವಾರ್ನ್, ಮುತ್ತಯ್ಯ ಮುರಳೀಧರನ್, ಗ್ಲೆನ್ ಮೆಗ್ರಾತ್, ಬ್ರೆಟ್ ಲೀ (Wasim Akram, Courtney Walsh, Waqar Younis, Shoaib Akhtar, Zaheer Khan, Anil Kumble, Shane Warne, Muttiah Muralitharan, Glenn McGrath, Brett Lee) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಸಾಧನೆ ಮಾಡಿದ ಹೆಸರುಗಳು. ಈ ಬೌಲರ್‌ಗಳು ತಮ್ಮ ವೃತ್ತಿಜೀವನದಲ್ಲಿ ಅನೇಕ ವಿಕೆಟ್‌ಗಳನ್ನು ಪಡೆದಿದ್ದಾರೆ.

ಮುತ್ತಯ್ಯ ಮುರಳೀಧರನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಆದರೆ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಯಾವ ಬೌಲರ್ ಅತಿ ಹೆಚ್ಚು ಎಸೆತಗಳನ್ನು ಬೌಲ್ ಮಾಡಿದ್ದಾರೆ ಗೊತ್ತಾ? ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ 3 ಬೌಲರ್‌ಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತೇವೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಎಸೆದ 3 ದಿಗ್ಗಜ ಬೌಲರ್‌ಗಳು

ಇದನ್ನೂ ಓದಿ
Image
ಗಂಡು ಮಗುವಿಗೆ ತಂದೆಯಾದ ಕೃನಾಲ್ ಪಾಂಡ್ಯ, ಚಿಕ್ಕಪ್ಪನಾಗಿ ಬಡ್ತಿ ಪಡೆದ ಹಾರ್ದಿಕ್; ಮಗುವಿನ ಹೆಸರೇನು ಗೊತ್ತಾ?
Image
Sam Northeast: ಏಕಾಂಗಿಯಾಗಿ 410 ರನ್ ಗಳಿಸಿದ ಇಂಗ್ಲೆಂಡ್‌ ಬ್ಯಾಟರ್! 18 ವರ್ಷಗಳ ನಂತರ ಲಾರಾ ದಾಖಲೆ ನೆನಪು
Image
Hardik Pandya: ಏಕದಿನ ಕ್ರಿಕೆಟ್​ಗೆ ಹಾರ್ದಿಕ್ ಪಾಂಡ್ಯ ನಿವೃತ್ತಿ! ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಕೋಚ್ ರವಿಶಾಸ್ತ್ರಿ

3. ಶೇನ್ ವಾರ್ನ್

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ಮೂರನೇ ಸ್ಥಾನದಲ್ಲಿದ್ದಾರೆ. ಮುತ್ತಯ್ಯ ಮುರಳೀಧರನ್ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದರು. ಶೇನ್ ವಾರ್ನ್ ತಮ್ಮ ಕ್ರಿಕೆಟ್ ಜೀವನದಲ್ಲಿ ಟೆಸ್ಟ್ ಮತ್ತು ಏಕದಿನ ಸೇರಿದಂತೆ ಒಟ್ಟು 339 ಪಂದ್ಯಗಳನ್ನು ಆಡಿದ್ದಾರೆ ಮತ್ತು ಈ ಅವಧಿಯಲ್ಲಿ 1001 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ 339 ಪಂದ್ಯಗಳಲ್ಲಿ ಶೇನ್ ವಾರ್ನ್ ಒಟ್ಟು 51,347 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಅವರು 25,536 ರನ್ ಕೂಡ ನೀಡಿದರು. 38 ಬಾರಿ 5 ವಿಕೆಟ್ ಹಾಗೂ 10 ಬಾರಿ 10 ವಿಕೆಟ್ ಪಡೆದಿದ್ದಾರೆ.

2. ಅನಿಲ್ ಕುಂಬ್ಳೆ

ಈ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ಅನಿಲ್ ಕುಂಬ್ಳೆ ಎರಡನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮುತ್ತಯ್ಯ ಮುರಳೀಧರನ್ ಮತ್ತು ಶೇನ್ ವಾರ್ನ್ ನಂತರ ಅನಿಲ್ ಕುಂಬ್ಳೆ ಮೂರನೇ ಅತಿ ಹೆಚ್ಚು ವಿಕೆಟ್ (619) ಪಡೆದಿದ್ದಾರೆ. ಅನಿಲ್ ಕುಂಬ್ಳೆ ಅವರು 1990 ರಿಂದ 2008 ರವರೆಗೆ ಒಟ್ಟು 403 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ ಮತ್ತು ಈ ಅವಧಿಯಲ್ಲಿ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 956 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ ಕುಂಬ್ಳೆ 55,346 ಎಸೆತಗಳನ್ನು ಎಸೆದು 28,767 ರನ್ ನೀಡಿದ್ದಾರೆ. ಅವರು ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 37 ಬಾರಿ 5 ವಿಕೆಟ್ ಮತ್ತು 8 ಬಾರಿ 10 ವಿಕೆಟ್ಗಳನ್ನು ಪಡೆದರು.

1. ಮುತ್ತಯ್ಯ ಮುರಳೀಧರನ್

ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ (800) ಪಡೆದ ಬೌಲರ್ ಆಗಿದ್ದಾರೆ. ಇದಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಬೌಲ್ ಮಾಡಿದ ಸಾಧನೆ ಮಾಡಿದ್ದಾರೆ. ಮುತ್ತಯ್ಯ ಮುರಳೀಧರನ್ 1992 ರಿಂದ 2011 ರವರೆಗೆ ಒಟ್ಟು 495 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ ಮತ್ತು 63,132 ಎಸೆತಗಳನ್ನು ಬೌಲ್ ಮಾಡಿದ್ದಾರೆ. ಈ ಅವಧಿಯಲ್ಲಿ ಮುತ್ತಯ್ಯ ಮುರಳೀಧರನ್ 30,803 ರನ್ ನೀಡಿ ಒಟ್ಟು 1,347 ವಿಕೆಟ್ ಪಡೆದಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 77 ಬಾರಿ 5 ವಿಕೆಟ್ ಮತ್ತು 22 ಬಾರಿ 10 ವಿಕೆಟ್ಗಳನ್ನು ಪಡೆದರು.

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್