
ಕಳೆದ ಬಾರಿಯ ಪ್ರದರ್ಶನ ಹಾಗೂ ಈ ಸಲದ ಪ್ರದರ್ಶನಗಳ ಒಟ್ಟಾರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಪ್ರಸ್ತುತ ಟಾಪ್ 4 ನಲ್ಲಿರುವ ಮೂರು ತಂಡಗಳೇ ಗೆಲ್ಲುವ ಹಾಟ್ ಫೇವರೇಟ್ ಎನಿಸಿಕೊಂಡಿದೆ. ಅದರಂತೆ ಯುಎಇನಲ್ಲಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್ಸಿಬಿ ಬಲಿಷ್ಠ ಎನ್ನಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಎಲ್ಲ ತಂಡಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇದರ ಸಲುವಾಗಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಲಿಕಾನ್ ಸಿಟಿಗೆ ಬಂದಿಳಿದಿದೆ. ಆಗಸ್ಟ್ 29 ರಂದು ದುಬೈ ಪ್ಲೈಟ್ ಏರಲಿದ್ದಾರೆ.

ಅದರಂತೆ ಆ್ಯಡಂ ಝಂಪಾ ಬದಲಿಗೆ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಬಂದಿದ್ದಾರೆ. ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಸ್ಪಿನ್ ಮೋಡಿ ಮಾಡಿದ್ದ ವನಿಂದು ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ಅವಕಾಶ ಪಡೆದಿದ್ದಾರೆ.

ಇನ್ನು ಕೇನ್ ರಿಚರ್ಡ್ಸನ್ ಸ್ಥಾನದಲ್ಲಿ ಮತ್ತೋರ್ವ ಶ್ರೀಲಂಕಾ ಆಟಗಾರ ದುಷ್ಮಂತ ಚಮೀರಾ ಸ್ಥಾನ ಪಡೆದಿದ್ದಾರೆ. ಚಮೀರಾ ಕೂಡ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಚೊಚ್ಚಲ ಬಾರಿ ಐಪಿಎಲ್ ಅವಕಾಶ ಪಡೆದಿದ್ದಾರೆ.

ಹಾಗೆಯೇ ಫಿನ್ ಅಲೆನ್ ಬದಲಾಗಿ ಆಸ್ಟ್ರೇಲಿಯಾ ಮೂಲದ ಸಿಂಗಪೂರ್ ಕ್ರಿಕೆಟಿಗ ಟಿಮ್ ಡೇವಿಡ್ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಬಿಗ್ ಬ್ಯಾಶ್ ಲೀಗ್ನಲ್ಲಿ ಮಿಂಚಿದ್ದ ಡೇವಿಡ್ ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ 2021ರ ಆರ್ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾಬಾಜ್ ಅಹ್ಮದ್, ವನಿಂದು ಹಸರಂಗ, ದುಷ್ಮಂತ ಚಮೀರಾ, ಗ್ಲೆನ್ ಮ್ಯಾಕ್ಸ್ ವೆಲ್, ಟಿಮ್ ಡೇವಿಡ್, ಕೈಲಿ ಜೇಮಿಸನ್, ಮೊಹಮ್ಮದ್ ಅಜರುದ್ದೀನ್, ರಜತ್ ಪಾಟೀದಾರ್, ಸಚಿನ್ ಬೇಬಿ, ಡೇನಿಯಲ್ ಕ್ರಿಶ್ಚಿಯನ್.