ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್: ಆಸೀಸ್ ಪಡೆಗೆ ನಡುಕ ಶುರು

India vs Australia: ಈ ಮೂಲಕ ಟೀಮ್ ಇಂಡಿಯಾ 8ನೇ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳನ್ನು ಬಳಿಸಿಕೊಳ್ಳಬಹುದು. ಹಾಗೆಯೇ ಮೂವರು ಪರಿಪೂರ್ಣ ಬೌಲರ್​ಗಳಾಗಿ ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಕಣಕ್ಕಿಳಿಸಬಹುದು.

ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್: ಆಸೀಸ್ ಪಡೆಗೆ ನಡುಕ ಶುರು
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 07, 2023 | 9:22 PM

ಏಕದಿನ ವಿಶ್ವಕಪ್​ನ 5ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಈ ಮೂಲಕ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಇದಕ್ಕಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸ್ಪಿನ್ ಅಸ್ತ್ರ ಪ್ರಯೋಗಿಸುವ ಇರಾದೆಯಲ್ಲಿದೆ. ಅಂದರೆ ಮೊದಲ ಪಂದ್ಯದಲ್ಲೇ ಭಾರತ ಮೂವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ ಚೆನ್ನೈನ ಚೆಪಾಕ್ ಪಿಚ್​ನಲ್ಲಿ ಸ್ಪಿನ್ ಬೌಲರ್​ಗಳಿಗೆ ಸಹಕಾರಿ.

ಹಾಗಾಗಿ ಟೀಮ್ ಇಂಡಿಯಾ ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿದೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್​ಗೆ ಚಾನ್ಸ್​ ಸಿಗುವ ಸಾಧ್ಯತೆಯಿದೆ.

ಇನ್ನು ಮೂವರು ಸ್ಪಿನ್ನರ್ಸ್​ನ ಆಡಿಸಿದ್ರೆ ಇಬ್ಬರು ವೇಗಿಗಳನ್ನು ಕಣಕ್ಕಿಳಿಸಬಹುದು. ಇಲ್ಲಿ ಸ್ಪೀಡ್ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್​ಗೆ ಚಾನ್ಸ್​ ಸಿಗಬಹುದು. ಇನ್ನು ಮೂರನೇ ವೇಗಿಯಾಗಿ ಹಾರ್ದಿಕ್ ಪಾಂಡ್ಯ ತಂಡದಲ್ಲಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ 8ನೇ ಕ್ರಮಾಂಕದವರೆಗೆ ಬ್ಯಾಟ್ಸ್​ಮನ್​ಗಳನ್ನು ಬಳಿಸಿಕೊಳ್ಳಬಹುದು. ಹಾಗೆಯೇ ಮೂವರು ಪರಿಪೂರ್ಣ ಬೌಲರ್​ಗಳಾಗಿ ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಕಣಕ್ಕಿಳಿಸಬಹುದು.

ಈ ಪ್ಲ್ಯಾನ್​ನೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸಿದರೆ ಆಸ್ಟ್ರೇಲಿಯಾ ತಂಡ ಇಕ್ಕಟಿಗೆ ಸಿಲುಕುವುದು ಖಚಿತ. ಏಕೆಂದರೆ ಸ್ಪಿನ್ನರ್​ಗಳ ವಿರುದ್ಧ ಆಡಲು ಆಸ್ಟ್ರೇಲಿಯಾ ಬ್ಯಾಟರ್​ಗಳು ತಡಕಾಡುತ್ತಾರೆ. ಈ ದೌರ್ಬಲ್ಯವನ್ನೇ ಬಳಸಿಕೊಳ್ಳಲು ಇದೀಗ ಟೀಮ್ ಇಂಡಿಯಾ ಯೋಜನೆ ರೂಪಿಸುತ್ತಿರುವುದು ವಿಶೇಷ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ತೂಫಾನ್ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ