ವಿಶ್ವಕಪ್ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ಆಟಗಾರ..!

Gurkeerat Singh Retirement: 2016ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದ ಗುರುಕೀರತ್ ಸಿಂಗ್ ಮಾನ್ ಶುಕ್ರವಾರ ಅಂತಾರಾಷ್ಟ್ರೀಯ ಮತ್ತು ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಪರ ಈ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದಲ್ಲದೆ, ಗುರುಕೀರತ್ ಆಫ್ ಸ್ಪಿನ್ನರ್ ಆಗಿ 10 ಓವರ್ ಕೂಡ ಬೌಲ್ ಮಾಡಿದ್ದರು.

ವಿಶ್ವಕಪ್ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ಆಟಗಾರ..!
ಗುರುಕೀರತ್ ಸಿಂಗ್ ಮಾನ್
Follow us
|

Updated on: Nov 10, 2023 | 8:55 PM

ಪ್ರಸ್ತುತ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಕಾಲಿಡುವ ತವಕದಲ್ಲಿದೆ. ಈ ನಡುವೆ ಟೀಂ ಇಂಡಿಯಾದ (Team India) ಆಟಗಾರನೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಟೀಂ ಇಂಡಿಯಾ ಪರ ಕೆಲವೇ ಕೆಲವು ಪಂದ್ಯಗಳಲ್ಲಿ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಪಂಜಾಬ್ ಮೂಲದ ಗುರುಕೀರತ್ ಸಿಂಗ್ ಮಾನ್ (Gurkeerat Singh Mann) ಇದ್ದಕ್ಕಿದ್ದಂತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಗುರುಕೀರತ್ ಸಿಂಗ್ ಮಾಹಿತಿ ಕೂಡ ನೀಡಿದ್ದಾರೆ.

ಮೂರು ಏಕದಿನ ಪಂದ್ಯ

2016ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದ ಗುರುಕೀರತ್ ಸಿಂಗ್ ಮಾನ್ ಶುಕ್ರವಾರ ಅಂತಾರಾಷ್ಟ್ರೀಯ ಮತ್ತು ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಪರ ಈ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದಲ್ಲದೆ, ಗುರುಕೀರತ್ ಆಫ್ ಸ್ಪಿನ್ನರ್ ಆಗಿ 10 ಓವರ್ ಕೂಡ ಬೌಲ್ ಮಾಡಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡ ಗುರುಕೀರತ್

ಪಂಜಾಬ್ ತಂಡದಲ್ಲಿ ಅವಕಾಶ ಸಿಗದ ಕಾರಣ ಮತ್ತು 2020 ರಿಂದ ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗದ ಕಾರಣ, ಗುರುಕೀರತ್ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ಗುರುಕೀರತ್, ‘ಇಂದು ನನ್ನ ಅವಿಸ್ಮರಣೀಯ ಕ್ರಿಕೆಟ್ ಪಯಣದ ಕೊನೆಯ ದಿನ. ಭಾರತವನ್ನು ಪ್ರತಿನಿಧಿಸುವುದು ಒಂದು ಗೌರವದ ಸಂಗತಿಯಾಗಿದೆ. ನನ್ನನ್ನು ಬೆಂಬಲಿಸಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು, ತರಬೇತುದಾರರು ಮತ್ತು ಸಹ ಆಟಗಾರರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನನ್ನ ವೃತ್ತಿ ಜೀವನದಲ್ಲಿ ನೀವೆಲ್ಲರೂ ಪ್ರಮುಖ ಪಾತ್ರ ವಹಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಭಾರತ ಟೆಸ್ಟ್ ತಂಡದಲ್ಲಿ ಅವಕಾಶ

2011ರಲ್ಲಿ ಸಿಕೆ ನಾಯುಡು ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿ ಜನರ ಗಮನ ಸೆಳೆದಿದ್ದ ಗುರುಕೀರತ್, ಇದಾದ ಬಳಿಕ 2015-16ರಲ್ಲಿ ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿಶತಕವನ್ನೂ ಬಾರಿಸಿದ್ದರು. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಕೂಡ ಪಡೆದರು. ಆದರೆ ಅವರಿಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ.

ಆರ್​ಸಿಬಿ ಪರ ಆಡಿದ್ದರು

ಇನ್ನು ಐಪಿಎಲ್‌ನಲ್ಲಿಯೂ ಹಲವು ತಂಡಗಳ ಪರ ಆಡಿರುವ ಗುರುಕೀರತ್, ಪಂಜಾಬ್ ಕಿಂಗ್ಸ್, ಡೆಲ್ಲಿ ಡೇರ್‌ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಅವರು 2022 ರಲ್ಲಿ ಪ್ರಶಸ್ತಿ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಭಾಗವೂ ಆಗಿದ್ದರು. ಆದರೆ ಆ ನಂತರ ಗುರುಕೀರತ್, ಯಾವುದೇ ಪಂದ್ಯವನ್ನು ಆಡಲಿಲ್ಲ.

ಐಪಿಎಲ್‌ನಲ್ಲಿ 41 ಪಂದ್ಯಗಳನ್ನಾಡಿರುವ ಗುರುಕೀರತ್ 121 ಸ್ಟ್ರೈಕ್ ರೇಟ್‌ನಲ್ಲಿ 511 ರನ್ ಕಲೆಹಾಕಿದ್ದಾರೆ. ಇತ್ತೀಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪಂಜಾಬ್ ಪರ ಪಂದ್ಯ ಆಡಿದ್ದ ಗುರುಕೀರತ್, ಇದೀಗ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತರಾದ ಬಳಿಕ ವಿದೇಶಿ ಟಿ20 ಲೀಗ್‌ಗಳಲ್ಲಿ ಆಡುವ ಸಾಧ್ಯತೆಗಳು ಹೆಚ್ಚಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು