AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

47ನೇ ವಯಸ್ಸಿನಲ್ಲಿ ವಿಶ್ವ ದಾಖಲೆ ಬರೆದ ಇಮ್ರಾನ್ ತಾಹಿರ್

ವಯಸ್ಸು ಕೇವಲ ಒಂದು ಅಂಕಿ ಅಷ್ಟೇ, ಸಾಧಿಸುವ ಛಲವಿದ್ದರೆ ನಿವೃತ್ತಿಯ ಅಂಚಿನಲ್ಲೂ ಇತಿಹಾಸ ಸೃಷ್ಟಿಸಬಹುದು ಎಂಬುದನ್ನು ಸೌತ್ ಆಫ್ರಿಕಾದ ಹಿರಿಯ ಲೆಗ್-ಸ್ಪಿನ್ನರ್ ಇಮ್ರಾನ್ ತಾಹಿರ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಯುವ ಕ್ರಿಕೆಟಿಗರು ಫಿಟ್​ನೆಸ್​ ಕಾಯ್ದುಕೊಳ್ಳಲು ಹೆಣಗಾಡುವ ಈ ಆಧುನಿಕ ಯುಗದಲ್ಲಿ, ತಮ್ಮ 47ನೇ ವಯಸ್ಸಿನಲ್ಲೂ ತಾಹಿರ್ ಜಾಗತಿಕ ದಾಖಲೆ ಬರೆಯುತ್ತಿರುವುದು ನಿಜಕ್ಕೂ ಅದ್ಭುತ.

47ನೇ ವಯಸ್ಸಿನಲ್ಲಿ ವಿಶ್ವ ದಾಖಲೆ ಬರೆದ ಇಮ್ರಾನ್ ತಾಹಿರ್
ಇಮ್ರಾನ್ ತಾಹಿರ್Image Credit source: CPL
ಝಾಹಿರ್ ಯೂಸುಫ್
|

Updated on: Sep 10, 2026 | 2:03 PM

Share

ಕ್ರಿಕೆಟ್ ಜಗತ್ತಿನಲ್ಲಿ 35 ವರ್ಷ ದಾಟುತ್ತಿದ್ದಂತೆ ಆಟಗಾರರು ನಿವೃತ್ತಿಯ ಬಗ್ಗೆ ಆಲೋಚಿಸಲು ಶುರು ಮಾಡುತ್ತಾರೆ. ಆದರೆ, ಸೌತ್ ಆಫ್ರಿಕಾದ ಹಿರಿಯ ಲೆಗ್-ಸ್ಪಿನ್ನರ್ ಇಮ್ರಾನ್ ತಾಹಿರ್ ವಿಷಯದಲ್ಲಿ ಇದು ಉಲ್ಟಾ! ತಮ್ಮ 47ನೇ ವಯಸ್ಸಿನಲ್ಲಿ ತಾಹಿರ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡದ ಹೊಸ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಇಮ್ರಾನ್ ತಾಹಿರ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಐದು ವಿಕೆಟ್ ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹೊಸ ವಿಶ್ವ ದಾಖಲೆ:

ಸೆಂಟ್ ಲೂಸಿಯಾ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಮ್ರಾನ್ ತಾಹಿರ್ ತಮ್ಮ ಸ್ಪಿನ್ ಜಾಲದ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಅಕ್ಷರಶಃ ನಡುಗಿಸಿದರು. ಕೇವಲ 4 ಓವರ್‌ಗಳಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಕುಕ್ ಐಲ್ಯಾಂಡ್ಸ್‌ನ ತೋಮಕನುತೆ ರಿತಾವಾ ಹೆಸರಿನಲ್ಲಿತ್ತು. ಅವರು 2022ರಲ್ಲಿ ತಮ್ಮ 46 ವರ್ಷ 299 ದಿನಗಳ ಪ್ರಾಯದಲ್ಲಿ 5 ವಿಕೆಟ್ ಪಡೆದಿದ್ದರು. ಇದೀಗ 47 ವರ್ಷದ ಇಮ್ರಾನ್ ತಾಹಿರ್ ಆ ದಾಖಲೆಯನ್ನು ಅಳಿಸಿ ಹಾಕಿ ಹೊಸ ವರ್ಲ್ಡ್​ ರೆಕಾರ್ಡ್​ ಬರೆದಿದ್ದಾರೆ.

ಕೇವಲ ಬೌಲಿಂಗ್ ಮಾತ್ರವಲ್ಲದೆ, ಇತ್ತೀಚೆಗಷ್ಟೇ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಸತತ ಗ್ಲೋಬಲ್ ಸೂಪರ್ ಲೀಗ್ (GSL) ಟಿ20 ಟ್ರೋಫಿ ಗೆದ್ದುಕೊಡುವ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನೂ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ.

ಪಂದ್ಯದ ಟರ್ನಿಂಗ್ ಪಾಯಿಂಟ್:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೆಂಟ್ ಲೂಸಿಯಾ ಕಿಂಗ್ಸ್​ ತಂಡವು ಒಂದು ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು. ಈ ಹಂತದಲ್ಲಿ ದಾಳಿಗಿಳಿದ ಇಮ್ರಾನ್ ತಾಹಿರ್ ತಮ್ಮ ಗೂಗ್ಲಿಗಳ ಮೂಲಕ ಎದುರಾಳಿ ಬ್ಯಾಟರ್​ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು. ಪರಿಣಾಮ ಸೆಂಟ್ ಲೂಸಿಯಾ ತಂಡವು 18.5 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಯಿತು.

ಇದನ್ನೂ ಓದಿ: ಫಿಟ್​ನೆಸ್ ಟೆಸ್ಟ್​ನಲ್ಲಿ ಫೇಲ್: ಟೀಮ್ ಇಂಡಿಯಾದಿಂದ ಯುವ ವೇಗಿ ಔಟ್!

120 ರನ್​ಗಳ ಸುಲಭ ಗುರಿ ಪಡೆದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 18.3 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 122 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ