IPL 2022: ಐಪಿಎಲ್​ನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​ಮೆನ್ಸ್​ಗೆ 48 ಲಕ್ಷ ರೂ. ಬಹುಮಾನ

IPL 2022: ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಬ್ರಬೋರ್ನ್ ಸ್ಟೇಡಿಯಂ), ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಮುಂಬೈನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದರು.

IPL 2022: ಐಪಿಎಲ್​ನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​ಮೆನ್ಸ್​ಗೆ 48 ಲಕ್ಷ ರೂ. ಬಹುಮಾನ
IPL
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 22, 2022 | 3:08 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಸೀಸನ್ 15 ರಲ್ಲಿ ದಣಿವರಿಯದೇ ಕೆಲಸ ಮಾಡಿದ 48 ಗ್ರೌಂಡ್ಸ್‌ಮೆನ್‌ಗಳಿಗೆ ಬಹುಮಾನ ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ನಿರ್ಧರಿಸಿದೆ . ಕೊರೊನಾ ಸಾಂಕ್ರಾಮಿಕ ರೋಗದ ಭೀತಿ ಹಿನ್ನೆಲೆಯಲ್ಲಿ, ಬಿಸಿಸಿಐ ಈ ಬಾರಿ ಮುಂಬೈ-ಪುಣೆಯಲ್ಲಿ ಐಪಿಎಲ್​ನ ಲೀಗ್ ಪಂದ್ಯಗಳನ್ನು ಆಯೋಜಿಸಿತ್ತು. ಈ ವೇಳೆ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್‌ಮೆನ್‌ಗಳಿಗೆ ತಲಾ 1 ಲಕ್ಷ ರೂಪಾಯಿ ನೀಡಲು ಎಂಸಿಎ ಮುಂದಾಗಿದೆ. ಈಗಾಗಲೇ ಈ ಬಗ್ಗೆ ಚರ್ಚಿಸಲಾಗಿದ್ದು, ಎಂಸಿಎಯ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಿದೆ.

ಈ ಬಾರಿಯ ಐಪಿಎಲ್​ ಮುಂಬೈನ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಪುಣೆಯ ಎಂಸಿಎ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಿತು. ಈ ವೇಳೆ 48 ಗ್ರೌಂಡ್ಸ್​ಮೆನ್​ಗಳು ದಣಿವರಿಯದೇ ಕೆಲಸ ಮಾಡಿದ್ದರು. ಐಪಿಎಲ್ ವೇಳೆ ಅನೇಕ ಸಿಬ್ಬಂದಿಗಳು ಅಭ್ಯಾಸ ಮತ್ತು ಪಂದ್ಯದ ಪಿಚ್ ತಯಾರಿಗಾಗಿ ರಾತ್ರಿಯ ಪಾಳಿಯಲ್ಲೂ ಕಾರ್ಯ ನಿರ್ವಹಿಸಿದ್ದರು. ಏಪ್ರಿಲ್-ಮೇ ಬಿಸಿಲಿನ ತಾಪದಲ್ಲಿ ದೈನಂದಿನ ಪಂದ್ಯಗಳು ನಡೆಯುತ್ತಿದ್ದರೂ ಪಿಚ್‌ಗಳ ಬಗ್ಗೆ ಒಂದೇ ಒಂದು ದೂರು ಬಂದಿಲ್ಲ ಎಂದು ಎಂಸಿಎ ಸಂತಸ ವ್ಯಕ್ತಪಡಿಸಿದೆ. ಹೀಗಾಗಿ ಗ್ರೌಂಡ್ಸ್‌ಮೆನ್‌ಗಳ ಶ್ರಮಕ್ಕೆ ವಿಶೇಷ ಪ್ರತಿಫಲವಾಗಿ ಬಹುಮಾನ ಮೊತ್ತವನ್ನು ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ ಮುಂದಾಗುತ್ತಿದೆ.

ಇನ್ನು ಐಪಿಎಲ್ ಸಮಯದಲ್ಲಿ, ಎಂಸಿಎ ಖಾಸಗಿ ಕಂಪನಿ ಕ್ಯಾಡ್ಬರಿಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಇದರಿಂದ ಕೂಡ ಮುಂಬೈ ಕ್ರಿಕೆಟ್​ ಸಂಸ್ಥೆಗೆ ಉತ್ತಮ ಆದಾಯ ಬಂದಿದೆ. ಇದಲ್ಲದೇ ಪಂದ್ಯದ ದಿನಗಳಲ್ಲಿ ಗ್ರೌಂಡ್ಸ್‌ಮನ್‌ಗೆ ತಂಗಲು ಮತ್ತು ಪ್ರಯಾಣಿಸಲು ಕ್ಯಾಡ್ಬರಿ ಕಂಪನಿಯು ವ್ಯವಸ್ಥೆ ಮಾಡಿತ್ತು. ಇದೀಗ ಹೆಚ್ಚುವರಿಯಾಗಿ ತಲಾ ಒಂದು ಲಕ್ಷ ರೂ. ನೀಡುವುದಾಗಿ ಮುಂಬೈ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಬಿಸಿಸಿಐ ಉಡುಗೊರೆ: ಐಪಿಎಲ್ 2022 ರ ನಂತರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕ್ಯುರೇಟರ್ ಮತ್ತು ಗ್ರೌಂಡ್ಸ್‌ಮೆನ್‌ಗಳಿಗೆ ಬಹುಮಾನವನ್ನು ಘೋಷಿಸಿದ್ದರು. ಕ್ಯುರೇಟರ್ ಮತ್ತು ಗ್ರೌಂಡ್ಸ್‌ಮೆನ್‌ಗೆ 1.25 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ನೀಡುವುದಾಗಿ ಬಿಸಿಸಿಐ ಟ್ವಿಟರ್‌ನಲ್ಲಿ ತಿಳಿಸಿತ್ತು. ಅಲ್ಲದೆ ಆರು ಕ್ರೀಡಾಂಗಣಗಳಿಗೆ ವಿವಿಧ ಬಹುಮಾನದ ಮೊತ್ತವನ್ನು ಘೋಷಿಸಲಾಗಿತ್ತು. ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಬ್ರಬೋರ್ನ್ ಸ್ಟೇಡಿಯಂ), ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಮುಂಬೈನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದರು.

ಹಾಗೆಯೇ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮತ್ತು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ತಲಾ 12.5 ಲಕ್ಷ ರೂಪಾಯಿ ನೀಡುವ ಬಗ್ಗೆ ಚರ್ಚೆ ನಡೆದಿದೆ. ಏಕೆಂದರೆ ಐಪಿಎಲ್ 2022 ರ ಕ್ವಾಲಿಫೈಯರ್-ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆದಿದ್ದವು. ಹಾಗೆಯೇ ಫೈನಲ್ ಪಂದ್ಯವು ಅಹಮದಾಬಾದ್ ಮೈದಾನದಲ್ಲಿ ನಡೆಯಿತು. ಹೀಗಾಗಿ ಈ ಸ್ಟೇಡಿಯಂಗಳಿಗೂ ಅನುದಾನ ನೀಡಲು ಬಿಸಿಸಿಐ ಮುಂದಾಗಿದೆ. ಹಾಗೆಯೇ ಐಪಿಎಲ್​ ನಡೆದ ಮೈದಾನದಲ್ಲಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಬಿಸಿಸಿಐ 1.25 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದರ ಹೊರತಾಗಿ ಇದೀಗ ಮುಂಬೈ ಕ್ರಿಕೆಟ್ ಸಂಸ್ಥೆಯು ತನ್ನ ಅಧೀನದಲ್ಲಿರುವ ಸ್ಟೇಡಿಯಂನಲ್ಲಿ ಕಾರ್ಯ ನಿರ್ವಹಿಸಿದ ಗ್ರೌಂಡ್ಸ್​​ಮೆನ್​ಗಳಿಗೆ ತಲಾ ಒಂದೊಂದು ಲಕ್ಷ ರೂ. ನೀಡಲು ಮುಂದಾಗಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ