ಟೀಮ್ ಇಂಡಿಯಾವನ್ನು ವೈಟ್​ವಾಶ್ ಮಾಡಿ ಕಳಿಸ್ತೀವಿ: ನಾಥನ್ ಲಿಯಾನ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, 2ನೇ ಪಂದ್ಯಕ್ಕೆ ಅಡಿಲೇಡ್ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿದೆ. ಅಂದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ.

ಟೀಮ್ ಇಂಡಿಯಾವನ್ನು ವೈಟ್​ವಾಶ್ ಮಾಡಿ ಕಳಿಸ್ತೀವಿ: ನಾಥನ್ ಲಿಯಾನ್
Nathan Lyon
Follow us
ಝಾಹಿರ್ ಯೂಸುಫ್
|

Updated on: Sep 18, 2024 | 12:45 PM

ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ವೈಟ್​ವಾಶ್​ನಲ್ಲೇ ಸೋಲಿಸುತ್ತೀವಿ. ಹೀಗಂದಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್. ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಲಿಯಾನ್ ಈ ಸಲ ಆಸ್ಟ್ರೇಲಿಯಾ ತಂಡವು ಭಾರತವನ್ನು 5-0 ಅಂತರದಿಂದ ಸೋಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ನಾವು ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದು ಹತ್ತು ವರ್ಷಗಳಾಗಿವೆ. ಭಾರತ – ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ನಾನು ಈ ಬಗ್ಗೆ ಯೋಚಿಸಲು ಆರಂಭಿಸಿದ್ದೇನೆ. ಇದೀಗ ಈ ಸರಣಿಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಏಕೆಂದರೆ ನಾನು ಟೆಸ್ಟ್ ಪಂದ್ಯವನ್ನು ಪ್ರೀತಿಸುತ್ತೇನೆ. ಅಲ್ಲದೆ ಯೋಗ್ಯವಾದ ಟೆಸ್ಟ್ ಪಂದ್ಯವಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿಯೇ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮೇಲೆ ಬಹಳ ಸಮಯದಿಂದ ಕಣ್ಣಿಟ್ಟಿದ್ದೇನೆ ಎಂದು ವಿಲೋ ಟಾಕ್ ಪಾಡ್‌ಕ್ಯಾಸ್ಟ್‌ನಲ್ಲಿ ನಾಥನ್ ಲಿಯಾನ್ ಹೇಳಿದ್ದಾರೆ.

ಮಾತು ಮುಂದುವರೆಸಿದ ನಾಥನ್ ಲಿಯಾನ್, ಈ ಸಲ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯನ್ನು ನಾವೇ ಗೆಲ್ಲುತ್ತೇವೆ. ಅದು ಸಹ 5-0 ಅಂತರದಿಂದ ಗೆಲ್ಲಲಿದ್ದೇವೆ. ಟೀಮ್ ಇಂಡಿಯಾವನ್ನು ಈ ಸಲ ವೈಟ್ ವಾಶ್​ನೊಂದಿಗೆ ಸೋಲಿಸಿ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ ಎಂದು ಲಿಯಾನ್ ಭವಿಷ್ಯ ನುಡಿದಿದ್ದಾರೆ.

ಅಂದಹಾಗೆ ಆಸ್ಟ್ರೇಲಿಯಾ ತಂಡವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಕೊನೆಯ ಬಾರಿಗೆ ಗೆದ್ದಿರುವುದು 2014-15 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಸರಣಿ ಜಯಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಕಳೆದ ಎರಡು ಸರಣಿಗಳನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದಿರುವುದು ವಿಶೇಷ.

ಈ ಮೂಲಕ ಕಳೆದ ಒಂದು ದಶಕದಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಇದೀಗ ಈ ಪಾರುಪತ್ಯಕ್ಕೆ ಬ್ರೇಕ್ ಹಾಕಲು ಆಸ್ಟ್ರೇಲಿಯಾ ತಂಡವು ಪ್ಲ್ಯಾನ್ ರೂಪಿಸುತ್ತಿದೆ. ಅದರಲ್ಲೂ ಸರಣಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ಆಟಗಾರರು ಮೈಂಡ್ ಗೇಮ್ ಆರಂಭಿಸಿದ್ದಾರೆ. ಅದರ ಭಾಗವಾಗಿ ಇದೀಗ ತಂಡದ ಪ್ರಮುಖ ಸ್ಪಿನ್ನರ್ ಆಗಿರುವ ನಾಥನ್ ಲಿಯಾನ್ ಈ ಬಾರಿ ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಲಿದ್ದೇವೆ ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ವಿಶೇಷ ಎಂದರೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳಲ್ಲಿ ಲಿಯಾನ್ ಕೂಡ ಒಬ್ಬರು. ಭಾರತದ ವಿರುದ್ಧ ಆಡಿದ 27 ಟೆಸ್ಟ್ ಪಂದ್ಯಗಳಲ್ಲಿ ನಾಥನ್ ಲಿಯಾನ್ ಒಟ್ಟು 121 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಬಾರಿ ಕೂಡ ತವರಿನಲ್ಲಿ ಟೀಮ್ ಇಂಡಿಯಾ ವಿರುದ್ಧ ಸ್ಪಿನ್ ಮೋಡಿ ಮಾಡುವ ವಿಶ್ವಾಸದಲ್ಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ