AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರ್ತಿಯರೆಷ್ಟು? ಉಳಿದ ತಂಡಗಳ ಕಥೆ ಏನು?

WPL 2024, Retained and Released Players List: ಐದು ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ 21 ವಿದೇಶಿ ಆಟಗಾರ್ತಿಯರು ಸೇರಿದಂತೆ 60 ಕ್ರಿಕೆಟರ್​ಗಳನ್ನು ಹರಾಜಿಗೆ ಮುಂಚಿತವಾಗಿ ಉಳಿಸಿಕೊಂಡಿವೆ.

WPL 2024: ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರ್ತಿಯರೆಷ್ಟು? ಉಳಿದ ತಂಡಗಳ ಕಥೆ ಏನು?
ಮಹಿಳಾ ಪ್ರೀಮಿಯರ್ ಲೀಗ್
ಪೃಥ್ವಿಶಂಕರ
|

Updated on: Nov 25, 2023 | 11:47 AM

Share

ಮಹಿಳಾ ಪ್ರೀಮಿಯರ್ ಲೀಗ್​ನ 2024 ರ (Women’s Premier League) ಆವೃತ್ತಿಯ ಆಟಗಾರ್ತಿಯರ ಹರಾಜನ್ನು ಮುಂದಿನ ತಿಂಗಳು ಅಂದರೆ ಡಿಸೆಂಬರ್ 9 ರಂದು ಮುಂಬೈನಲ್ಲಿ ನಡೆಸಲು ಬಿಸಿಸಿಐ (BCCI) ತೀರ್ಮಾನಿಸಿದೆ. ಡಬ್ಲ್ಯುಪಿಎಲ್‌ನ ಎರಡನೇ ಆವೃತ್ತಿಯೂ ಮುಂದಿನ ವರ್ಷ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಗಳಿಗೆ. ಮುಂಬೈ ಇಂಡಿಯನ್ಸ್ ಹಾಲಿ ಚಾಂಪಿಯನ್ ಆಗಿದ್ದು, ಈ ವರ್ಷದ ಆರಂಭದಲ್ಲಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಐದು ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ 21 ವಿದೇಶಿ ಆಟಗಾರ್ತಿಯರು ಸೇರಿದಂತೆ 60 ಕ್ರಿಕೆಟರ್​ಗಳನ್ನು ಹರಾಜಿಗೆ ಮುಂಚಿತವಾಗಿ ಉಳಿಸಿಕೊಂಡಿವೆ. ಪ್ರಸ್ತುತ 5 ತಂಡಗಳು ಒಟ್ಟು 29 ಆಟಗಾರ್ತಿಯರನ್ನು ತಂಡದಿಂದ ಕೈಬಿಟ್ಟಿವೆ. ಹಾಗಿದ್ದರೆ ಯಾವ ತಂಡ ಯಾರನ್ನು ಉಳಿಸಿಕೊಂಡಿದೆ? ಯಾರನ್ನು ತಂಡದಿಂದ ಹೊರಹಾಕಿದೆ ಎಂಬುದನ್ನು ನೋಡುವುದಾದರೆ..

WPL 2024: ಡಬ್ಲ್ಯುಪಿಎಲ್ ಹರಾಜಿಗೆ ದಿನಾಂಕ ನಿಗದಿ; ಪರ್ಸ್​ ಗಾತ್ರದಲ್ಲೂ ಹೆಚ್ಚಳ

ದೆಹಲಿ ಕ್ಯಾಪಿಟಲ್ಸ್

ಉಳಿಸಿಕೊಂಡಿರುವ ಆಟಗಾರ್ತಿಯರು: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರಾಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನ್ಯಾ ಭಾಟಿಯಾ, ಟಿಟಾಸ್ ಸಾದು.

ತಂಡದಿಂದ ಕೈಬಿಟ್ಟ ಆಟಗಾರ್ತಿಯರು: ಅಪರ್ಣಾ ಮಂಡಲ್, ಜಸಿಯಾ ಅಖ್ತರ್, ತಾರಾ ನಾರ್ರಿಸ್.

ಗುಜರಾತ್ ಜೈಂಟ್ಸ್

ಉಳಿಸಿಕೊಂಡಿರುವ ಆಟಗಾರ್ತಿಯರು: ಆಶ್ಲೇ ಗಾರ್ಡ್ನರ್, ಬೆತ್ ಮೂನಿ, ಡೇಲಾನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್, ಶಬ್ನಮ್ ಶಕೀಲ್, ಸ್ನೇಹ ರಾಣಾ, ತನುಜಾ ಕನ್ವರ್.

ತಂಡದಿಂದ ಕೈಬಿಟ್ಟ ಆಟಗಾರ್ತಿಯರು: ಅನ್ನಾಬೆಲ್ ಸದರ್ಲ್ಯಾಂಡ್, ಅಶ್ವನಿ ಕುಮಾರಿ, ಜಾರ್ಜಿಯಾ ವೇರ್ಹ್ಯಾಮ್, ಹರ್ಲಿ ಗಾಲಾ, ಕಿಮ್ ಗಾರ್ತ್, ಮಾನ್ಸಿ ಜೋಶಿ, ಮೋನಿಕಾ ಪಟೇಲ್, ಪರುಣಿಕಾ ಸಿಸೋಡಿಯಾ, ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಸುಷ್ಮಾ ವರ್ಮಾ.

ಮುಂಬೈ ಇಂಡಿಯನ್ಸ್

ಉಳಿಸಿಕೊಂಡಿರುವ ಆಟಗಾರ್ತಿಯರು: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್, ಜಿಂತಿಮಣಿ ಕಲಿತಾ, ನಟಾಲಿ ಸ್ಕೈವರ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ.

ತಂಡದಿಂದ ಕೈಬಿಟ್ಟ ಆಟಗಾರ್ತಿಯರು: ಧಾರಾ ಗುಜ್ಜರ್, ಹೀದರ್ ಗ್ರಹಾಂ, ನೀಲಂ ಬಿಷ್ಟ್, ಸೋನಮ್ ಯಾದವ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಉಳಿಸಿಕೊಂಡಿರುವ ಆಟಗಾರ್ತಿಯರು: ಆಶಾ ಶೋಭನಾ, ದಿಶಾ ಕ್ಯಾಸತ್, ಎಲ್ಲಿಸ್ಸಾ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್.

ತಂಡದಿಂದ ಕೈಬಿಟ್ಟ ಆಟಗಾರ್ತಿಯರು: ಡೇನ್ ವ್ಯಾನ್ ನೀಕರ್ಕ್, ಎರಿನ್ ಬರ್ನ್ಸ್, ಕೋಮಲ್ ಜಂಜಾದ್, ಮೇಗನ್ ಶುಟ್, ಪೂನಂ ಖೇಮ್ನಾರ್, ಪ್ರೀತಿ ಬೋಸ್, ಸಹನಾ ಪವಾರ್.

ಯುಪಿ ವಾರಿಯರ್ಸ್

ಉಳಿಸಿಕೊಂಡಿರುವ ಆಟಗಾರ್ತಿಯರು: ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಕಿರಣ್ ನವಗಿರೆ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಪಾರ್ಶ್ವಿ ಚೋಪ್ರಾ, ರಾಜೇಶ್ವರಿ ಗಾಯಕ್ವಾಡ್, ಎಸ್. ಯಶಶ್ರೀ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್‌ಗ್ರಾತ್.

ತಂಡದಿಂದ ಕೈಬಿಟ್ಟ ಆಟಗಾರ್ತಿಯರು: ದೇವಿಕಾ ವೈದ್ಯ, ಶಬ್ನಿಮ್ ಇಸ್ಮಾಯಿಲ್, ಶಿವ್ಲಿ ಶಿಂಧೆ, ಸಿಮ್ರಾನ್ ಶೇಖ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ