IND vs SA: 6 ವರ್ಷ, 56 ಟಿ20 ಪಂದ್ಯ; ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ನಾಯಕನ ಚೊಚ್ಚಲ ಪಂದ್ಯವಿದು

IND vs SA: ಕೆಎಲ್ ರಾಹುಲ್ ಆಡಲಿರುವ ಅವರ ಟಿ20 ವೃತ್ತಿಜೀವನದ 57ನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯವಾಗಿದೆ. ಇದಕ್ಕೂ ಮೊದಲು, ಅವರು ಕಳೆದ 6 ವರ್ಷಗಳಲ್ಲಿ 12 ತಂಡಗಳ ವಿರುದ್ಧ 56 T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರು, ಆದರೆ ದಕ್ಷಿಣ ಆಫ್ರಿಕಾವನ್ನು ಎದುರಿಸಲಿಲ್ಲ.

IND vs SA: 6 ವರ್ಷ, 56 ಟಿ20 ಪಂದ್ಯ; ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ನಾಯಕನ ಚೊಚ್ಚಲ ಪಂದ್ಯವಿದು
Follow us
TV9 Web
| Updated By: ಪೃಥ್ವಿಶಂಕರ

Updated on:Jun 06, 2022 | 7:17 PM

ಕೆಎಲ್ ರಾಹುಲ್ (KL Rahul) ಪದಾರ್ಪಣೆ ಮಾಡಲಿದ್ದಾರೆ. ಈ ಮಾತನ್ನು ಕೇಳಿ ಒಮ್ಮೆ ಶಾಕ್ ಆಗಬಹುದು. ಹೌದು… ಅವರ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಲ್ಲ ಬದಲಿಗೆ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ (T20 cricket against South Africa). ವಾಸ್ತವವಾಗಿ, ಜೂನ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಮೊದಲ ಟಿ20 ದಕ್ಷಿಣ ಆಫ್ರಿಕಾ ವಿರುದ್ಧದ ಈ ಮಾದರಿಯ ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಅವರ ಮೊದಲ ಪಂದ್ಯವಾಗಿದೆ. ವಿಶೇಷವೆಂದರೆ ರಾಹುಲ್ ತಮ್ಮದೇ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಆಡಲಿದ್ದಾರೆ. ಅವರ T20 ವೃತ್ತಿಜೀವನದ 6 ವರ್ಷಗಳು ಕಳೆದಿರುವಾಗ ಅವರಿಗೆ ಈ ಅವಕಾಶ ಬಂದಿದೆ. ಆದರೆ ಈ ಪಂದ್ಯಕ್ಕೂ ಮೊದಲು ಅವರು 56 T20 ಪಂದ್ಯಗಳನ್ನು ಸಹ ಆಡಿದ್ದಾರೆ.

ಅದೇನೆಂದರೆ, ಕೆಎಲ್ ರಾಹುಲ್ ಆಡಲಿರುವ ಅವರ ಟಿ20 ವೃತ್ತಿಜೀವನದ 57ನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯವಾಗಿದೆ. ಇದಕ್ಕೂ ಮೊದಲು, ಅವರು ಕಳೆದ 6 ವರ್ಷಗಳಲ್ಲಿ 12 ತಂಡಗಳ ವಿರುದ್ಧ 56 T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರು, ಆದರೆ ದಕ್ಷಿಣ ಆಫ್ರಿಕಾವನ್ನು ಎದುರಿಸಲಿಲ್ಲ.

ಇದನ್ನೂ ಓದಿ:IND vs SA: ಆಟಗಾರನಾಗಿ ಕ್ಲಿಕ್, ನಾಯಕನಾಗಿ ಫ್ಲಾಪ್! ನಾಯಕನಾಗಿ ರಾಹುಲ್​ಗೆ ಇದು ಮಾಡು ಇಲ್ಲವೇ ಮಡಿ ಸರಣಿ

ಇದನ್ನೂ ಓದಿ
Image
ಭಾರತಕ್ಕೆ ಬಂದಾಗಲೆಲ್ಲ ಇಂಜುರಿಗೊಳಗಾಗುತ್ತೇನೆ; ಇಲ್ಲೇ ನನಗ್ಯಾವುದೋ ಶಾಪ ತಟ್ಟಿರಬೇಕು; ಮಿಚೆಲ್ ಮಾರ್ಷ್
Image
49 ಎಸೆತ, 15 ಸಿಕ್ಸರ್, 137 ರನ್! ಟಿ20 ಕ್ರಿಕೆಟ್​ನಲ್ಲಿ ಅಬ್ಬರಿಸಿದ 36 ವರ್ಷದ ಆಲ್​ರೌಂಡರ್
Image
Ranji Trophy: ಮೊದಲ ದಿನವೇ ಸುಸ್ತಾದ ಗಿಲ್, ಮಯಾಂಕ್, ಪೃಥ್ವಿ, ಜೈಸ್ವಾಲ್; ಸಂಕಷ್ಟಕ್ಕೆ ಸಿಲುಕಿದ ತಂಡಗಳು

ದಕ್ಷಿಣ ಆಫ್ರಿಕಾ ವಿರುದ್ಧ 5 ಟೆಸ್ಟ್, 4 ಏಕದಿನ ಪಂದ್ಯಗಳನ್ನು ಆಡಿದ್ದಾರೆ

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ, ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ಇದುವರೆಗೆ ಕೇವಲ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 10 ಇನ್ನಿಂಗ್ಸ್‌ಗಳಲ್ಲಿ 1 ಶತಕ ಮತ್ತು 1 ಅರ್ಧಶತಕದೊಂದಿಗೆ 256 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರ ಸರಾಸರಿ 25.60 ಆಗಿತ್ತು. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 4 ಏಕದಿನ ಪಂದ್ಯಗಳಲ್ಲಿ, ಅವರು 1 ಅರ್ಧಶತಕದೊಂದಿಗೆ 102 ರನ್ ಗಳಿಸಿದ್ದಾರೆ. ODIಗಳಲ್ಲಿ ಅವರ ಸರಾಸರಿ 25.5 ಆಗಿದೆ.

56 T20I ಗಳಲ್ಲಿ 142 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್

ಕೆಎಲ್ ರಾಹುಲ್ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಇದುವರೆಗೆ 56 ಪಂದ್ಯಗಳಲ್ಲಿ 142 ಸ್ಟ್ರೈಕ್ ರೇಟ್ ಹೊಂದಿದ್ದಾರೆ ಮತ್ತು 52 ಇನ್ನಿಂಗ್ಸ್‌ಗಳಲ್ಲಿ 1831 ರನ್ ಗಳಿಸಿದ್ದಾರೆ. 2 ಶತಕ ಹಾಗೂ 16 ಅರ್ಧ ಶತಕ ಬಾರಿಸಿದ್ದಾರೆ. ಒಟ್ಟಾರೆಯಾಗಿ, ಟಿ20ಯಲ್ಲಿ ರಾಹುಲ್ ದಾಖಲೆ ಉತ್ತಮವಾಗಿದ್ದು, ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20ಯಲ್ಲಿ ಅದನ್ನು ಉಳಿಸಿಕೊಳ್ಳಲು ಬಯಸಿದ್ದಾರೆ.

ದೆಹಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪದಾರ್ಪಣೆ, ದಾಖಲೆ ಗೊತ್ತಾ?

ದೆಹಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೆಎಲ್ ರಾಹುಲ್ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಬೇಕಿದೆ. ಇದು ದೆಹಲಿಯಲ್ಲಿ ಅವರ ಎರಡನೇ ಮತ್ತು ಭಾರತದ ಮೈದಾನದಲ್ಲಿ 27 ನೇ ಟಿ20 ಪಂದ್ಯವಾಗಿದೆ. ಅವರು ಭಾರತದಲ್ಲಿ ಆಡಿದ 26 T20I ಗಳಲ್ಲಿ 844 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 91 ರನ್ ಆಗಿದೆ. ಅದೇ ಸಮಯದಲ್ಲಿ, ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ನಲ್ಲಿ ಅವರು ಕೇವಲ 15 ರನ್ ಗಳಿಸಿದರು. ಈಗ ಈ ಅಂಕಿ ಅಂಶಗಳನ್ನು ಪರಿಗಣಿಸಿದರೆ ದಕ್ಷಿಣ ಆಫ್ರಿಕಾ ವಿರುದ್ಧ ರಾಹುಲ್ ಚೊಚ್ಚಲ ಪಂದ್ಯವೇನೂ ವಿಶೇಷ ಎನಿಸುವುದಿಲ್ಲ. ಆದರೆ ಇದುವರೆಗೆ ತಮ್ಮ ಮೊದಲ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಯಕತ್ವ ವಹಿಸಿದ್ದ ನಾಯಕರು ಗೆದ್ದಿರುವುದು ಒಳ್ಳೆಯ ಸಂಗತಿ.

Published On - 7:17 pm, Mon, 6 June 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್