India vs England 5th Test: ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ರದ್ದು
India vs England 5th Test Cancelled: ಓವಲ್‌ನಲ್ಲಿ ನಡೆದ ಕೊನೆಯ ಟೆಸ್ಟ್ ವೇಳೆ ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದರ ನಂತರ ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ವರದಿಯೂ ಕೊರೋನಾ ಪಾಸಿಟಿವ್ ಆಗಿತ್ತು.
India vs England 5th Test Cancelled: ಭಾರತ ಮತ್ತು ಇಂಗ್ಲೆಂಡ್ (India vs England 5th Test) ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ರದ್ದು ಮಾಡಲಾಗಿದೆ. ಕೊರೋನಾ ಭೀತಿಯ ನಡುವೆ ಪಂದ್ಯವನ್ನು ನಡೆಸುವುದು ಸೂಕ್ತವಲ್ಲ ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುರುವಾರ ಮತ್ತು ಶುಕ್ರವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ನಡುವೆ ಸುದೀರ್ಘ ಚರ್ಚೆಯ ನಂತರ, ಶುಕ್ರವಾರದಿಂದ ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಬೇಕಿದ್ದ ಟೆಸ್ಟ್ ಪಂದ್ಯವನ್ನು ರದ್ದು ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಐದನೇ ಟೆಸ್ಟ್ ಪಂದ್ಯ ನಡೆಯುವುದಿಲ್ಲ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ. ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಾಗುವ ಭೀತಿಯಿಂದಾಗಿ ಸರಣಿ ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲಾಗಿದೆ.
ಐದನೇ ಟೆಸ್ಟ್ ಪಂದ್ಯ ಆಡುವವರೆಗೂ ಸರಣಿಯು ಭಾರತದ ಪರವಾಗಿ 2-1 ಮುನ್ನಡೆಯಲ್ಲೇ ಇರಲಿದೆ. ಸದ್ಯಕ್ಕೆ, ಭಾರತೀಯ ತಂಡವು ತಮ್ಮ ಇಂಗ್ಲೆಂಡ್ ಪ್ರವಾಸವನ್ನು ಮುಕ್ತಾಯಗೊಳಿಸಲಿದ್ದು, ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಾಗಿ ಯುಎಇಗೆ ಪ್ರಯಾಣ ಬೆಳೆಸಲಿದೆ. ಇದರೊಂದಿಗೆ ಭಾರತ-ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿ 2-1 ಅಂತರದಲ್ಲಿ ಅಂತ್ಯಗೊಂಡಂತಾಗಿದೆ. ಇದಾಗ್ಯೂ ಫಲಿತಾಂಶ ನಿರ್ಧರಿಸಲಾಗಿಲ್ಲ.
ಭಾರತ ತಂಡದ ಸಿಬ್ಬಂದಿಗಳಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಭಾರತಕ್ಕೆ ವಾಕ್ ಓವರ್ ನೀಡುವಂತೆ ಕೇಳಿಕೊಂಡಿತ್ತು. ಈ ಮೂಲಕ ಸರಣಿಯನ್ನು 2-2 ರಲ್ಲಿ ಪೂರ್ಣಗೊಳಿಸುವ ಬೇಡಿಕೆಯಿಟ್ಟಿತ್ತು. ಆದರೆ ಇದನ್ನು ಬಿಸಿಸಿಐ ನಿರಾಕರಿಸಿ ಐದನೇ ಟೆಸ್ಟ್ ಪಂದ್ಯವನ್ನಾಡುವ ಇಂಗಿತ ವ್ಯಕ್ತಪಡಿಸಿತ್ತು. ಇದೀಗ ಟೆಸ್ಟ್ ರದ್ದಾಗಿದೆ. ಅಲ್ಲದೆ ಈ ಪಂದ್ಯವನ್ನು ಮುಂದಿನ ಸರಣಿಯಲ್ಲಿ ಆಡುವ ಸಾಧ್ಯತೆಯಿದೆ.
Following ongoing conversations with the BCCI, the ECB can confirm that the fifth LV= Insurance Test at Emirates Old Trafford, due to start today, will be cancelled.
— England Cricket (@englandcricket) September 10, 2021
ಓವಲ್‌ನಲ್ಲಿ ನಡೆದ ಕೊನೆಯ ಟೆಸ್ಟ್ ವೇಳೆ ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದರ ನಂತರ ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ವರದಿಯೂ ಕೊರೋನಾ ಪಾಸಿಟಿವ್ ಆಗಿತ್ತು. ಅಷ್ಟೇ ಅಲ್ಲದೆ ಮ್ಯಾಂಚೆಸ್ಟರ್ ಟೆಸ್ಟ್‌ಗೆ ಮುನ್ನ, ತಂಡದ ಫಿಸಿಯೊ ಯೋಗೇಶ್ ಪರ್ಮಾರ್ ಅವರ ಕೊರೋನಾ ಸೋಂಕಿಗೆ ಒಳಗಾಗಿದ್ದರು.
ಇದನ್ನೂ ಓದಿ: MS Dhoni: 3 ವಿಶ್ವಕಪ್ ಮೇಲೆ ಬಿಸಿಸಿಐ ಕಣ್ಣು: ಟೀಮ್ ಇಂಡಿಯಾದ ಮುಂದಿನ ಕೋಚ್ ಧೋನಿ?
ಇದನ್ನೂ ಓದಿ: ವಿಚ್ಛೇದಿತ ಮಹಿಳೆಯರನ್ನು ಪ್ರೀತಿಸಿ ಮದುವೆಯಾದ ಭಾರತೀಯ ಕ್ರಿಕೆಟಿಗರು ಇವರೇ
ಇದನ್ನೂ ಓದಿ: Shardul Thakur: ಮುಂಬೈ ಲೋಕಲ್ ಟ್ರೈನ್ ಹುಡುಗ ಇದೀಗ ಟೀಮ್ ಇಂಡಿಯಾ ಸೆನ್ಸೇಷನ್
ಇದನ್ನೂ ಓದಿ: IPL 2022: ಐಪಿಎಲ್ನ 2 ಹೊಸ ತಂಡಗಳಿಗಾಗಿ 6 ನಗರಗಳ ಆಯ್ಕೆ
(India vs England 5th Test Cancelled)
Published On - 2:23 pm, Fri, 10 September 21