Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಿಂಪಿಕ್ಸ್​ನಲ್ಲಿ ಕೇವಲ 6 ತಂಡಗಳಿಗೆ ಮಾತ್ರ ಅವಕಾಶ: ಪಾಕಿಸ್ತಾನಕ್ಕೆ ಚಿಂತೆ ಶುರು

Los Angeles Olympics 2028: ಲಾಸ್ ಏಂಜಲೀಸ್​ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಕೂಡ ಆಡಲಾಗುತ್ತದೆ. ಇದಕ್ಕಾಗಿ 6 ತಂಡಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಖಚಿತಪಡಿಸಿದೆ. ಈ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನ್ ತಂಡಕ್ಕೆ ಚಿಂತೆ ಶುರುವಾಗಿದೆ.

ಒಲಿಂಪಿಕ್ಸ್​ನಲ್ಲಿ ಕೇವಲ 6 ತಂಡಗಳಿಗೆ ಮಾತ್ರ ಅವಕಾಶ: ಪಾಕಿಸ್ತಾನಕ್ಕೆ ಚಿಂತೆ ಶುರು
Ind Vs Pak
Follow us
ಝಾಹಿರ್ ಯೂಸುಫ್
|

Updated on:Apr 10, 2025 | 8:31 PM

2028 ರಲ್ಲಿ ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್ (Olympics) ಕ್ರೀಡಾಕೂಟದಲ್ಲಿ ಕೇವಲ 6 ಕ್ರಿಕೆಟ್ ತಂಡಗಳಿಗೆ ಮಾತ್ರ ಅವಕಾಶ ದೊರೆಯಲಿದೆ. 128 ವರ್ಷಗಳ ಇತಿಹಾಸ ಹೊಂದಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿ ಕ್ರಿಕೆಟ್ ಅನ್ನು ಪರಿಚಯಿಸಲಾಗುತ್ತಿದ್ದು, ಅದರಂತೆ ಪುರುಷರು ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ತಲಾ ಆರು ತಂಡಗಳು ಭಾಗವಹಿಸಲಿವೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC) ದೃಢಪಡಿಸಿದೆ.

ಇನ್ನು ಈ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಟಿ20 ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಹೀಗಾಗಿ ಐಸಿಸಿ ಟಿ20 ತಂಡಗಳ ಶ್ರೇಯಾಂಕಗಳ ಆಧಾರದ ಮೇಲೆ ತಂಡಗಳು ಅರ್ಹತೆ ಪಡೆಯಲಿವೆ. ಅಂದರೆ ಒಲಿಂಪಿಕ್ಸ್​ ಅರ್ಹತೆಗೆ ನಿಗದಿ ಮಾಡಲಾದ ಸಮಯದ ವೇಳೆ ಐಸಿಸಿ ತಂಡಗಳ ಶ್ರೇಯಾಂಕವನ್ನು ಪರಿಗಣಿಸಿ 6 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 12 ಪೂರ್ಣ ಸದಸ್ಯರ ತಂಡಗಳನ್ನು ಒಲಿಂಪಿಕ್ಸ್ ಸಮಿತಿಗೆ ಶಿಫಾರಸ್ಸು ಮಾಡಲಿದ್ದು, ಈ ತಂಡಗಳ ಶ್ರೇಯಾಂಕದ ಆಧಾರ ಮೇಲೆ 6 ತಂಡಗಳನ್ನು ಒಲಿಂಪಿಕ್ಸ್ ಅಂಗಳದಲ್ಲಿ ಕಣಕ್ಕಿಳಿಸಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
PSL​ನಲ್ಲಿ ಕಣಕ್ಕಿಳಿಯಲಿರುವ ವಿದೇಶಿ ಆಟಗಾರರ ಪಟ್ಟಿ ಪ್ರಕಟ
Image
ಮುಂಬೈ ಇಂಡಿಯನ್ಸ್ ಬಳಗಕ್ಕೆ ಕ್ವಿಂಟನ್ ಡಿಕಾಕ್ ಎಂಟ್ರಿ

ಐಸಿಸಿ ಪೂರ್ಣ ಸದಸ್ಯ ತಂಡಗಳು:

  1. ಭಾರತ
  2. ಅಫ್ಘಾನಿಸ್ತಾನ್
  3. ಆಸ್ಟ್ರೇಲಿಯಾ
  4. ಬಾಂಗ್ಲಾದೇಶ್
  5. ಇಂಗ್ಲೆಂಡ್
  6. ಐರ್ಲೆಂಡ್
  7. ನ್ಯೂಝಿಲೆಂಡ್
  8. ಪಾಕಿಸ್ತಾನ್
  9. ಸೌತ್ ಆಫ್ರಿಕಾ
  10. ಶ್ರೀಲಂಕಾ
  11. ವೆಸ್ಟ್ ಇಂಡೀಸ್
  12. ಝಿಂಬಾಬ್ವೆ

ಇದಾಗ್ಯೂ ಯಾವುದಾದರೂ ಸಹ ಸದಸ್ಯ ರಾಷ್ಟ್ರದ ತಂಡ ಮುಂದಿನ 2 ವರ್ಷಗಳ ಒಳಗೆ ಐಸಿಸಿ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯ ಟಾಪ್-6 ನಲ್ಲಿ ಕಾಣಿಸಿಕೊಂಡರೆ ಅವರು ಅರ್ಹತೆ ಪಡೆಯಲಿದ್ದಾರೆ.

ಪಾಕಿಸ್ತಾನ್ ತಂಡಕ್ಕೆ ನಡುಕ ಶುರು:

ಪ್ರಸ್ತುತ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ. ಐದನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದ್ದರೆ, ಆರನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದೆ.

ಇನ್ನು ಪಾಕಿಸ್ತಾನ್ ತಂಡ 7ನೇ ಸ್ಥಾನದಲ್ಲಿದೆ. ಅಂದರೆ ಒಲಿಂಪಿಕ್ಸ್​ಗೆ 6 ತಂಡಗಳು ಮಾತ್ರ ಅರ್ಹತೆ ಪಡೆಯಲಿದೆ. ಮುಂದಿನ ಒಂದು ವರ್ಷದೊಳಗೆ ಪಾಕಿಸ್ತಾನ್ ತಂಡ ಟಾಪ್-6 ನಲ್ಲಿ ಕಾಣಿಸಿಕೊಳ್ಳದಿದ್ದರೆ, ಒಲಿಂಪಿಕ್ಸ್​ನಿಂದ ಹೊರಬೀಳುವುದು ಖಚಿತ. ಹೀಗಾಗಿ ಪಾಕ್ ಪಡೆಗೆ ಮುಂಬರುವ ಟಿ20 ಸರಣಿಗಳು ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

ಅಮೆರಿಕ ತಂಡಕ್ಕೂ ಅವಕಾಶ:

2028ರ ಒಲಿಂಪಿಕ್ಸ್​ಗೆ ಯುಎಸ್​ಎ ಆತಿಥ್ಯವಹಿಸುತ್ತಿದೆ. ಹೀಗಾಗಿ ಆತಿಥೇಯ ರಾಷ್ಟ್ರವಾಗಿ ಅಮೆರಿಕ ತಂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಆತಿಥೇಯ ರಾಷ್ಟ್ರಕ್ಕೆ ಅವಕಾಶ ನೀಡಿದರೆ, ಐಸಿಸಿ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಿಂದ 5 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ರೀಜಿನಲ್ ರೆಪ್ರೆಸೆಂಟೇಶನ್ ನಿಯಮವನ್ನು ಪರಿಚಯಿಸುವ ಸಾಧ್ಯತೆ ಕೂಡ ಇದೆ. ಅಂದರೆ ಆಯಾ ಖಂಡಗಳಿಂದ 2 ತಂಡಗಳನ್ನು ಆಯ್ಕೆ ಮಾಡಬಹುದು. ಇದರಿಂದ ಏಷ್ಯಾ ಖಂಡದ ಎರಡು ಬಲಿಷ್ಠ ತಂಡಗಳು ಮಾತ್ರ ಒಲಿಂಪಿಕ್ಸ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಇದನ್ನೂ ಓದಿ: PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

ಐಸಿಸಿ ಟಿ20 ತಂಡಗಳ ಶ್ರೇಯಾಂಕ ಪಟ್ಟಿ:

ಸ್ಥಾನ ತಂಡ ಪಂದ್ಯಗಳು ಅಂಕಗಳು ರೇಟಿಂಗ್
1
ಭಾರತ
75 20170 269
2
ಆಸ್ಟ್ರೇಲಿಯಾ
48 12417 259
3
ಇಂಗ್ಲೆಂಡ್
50 12688 254
4
ನ್ಯೂಝಿಲೆಂಡ್
59 14652 248
5
ವೆಸ್ಟ್ ಇಂಡೀಸ್
59 14587 247
6
ಸೌತ್ ಆಫ್ರಿಕಾ
46 11345 247
7
ಪಾಕಿಸ್ತಾನ್
59 13845 235
8
ಶ್ರೀಲಂಕಾ
48 11159 232
9
ಬಾಂಗ್ಲಾದೇಶ್
56 12797 229
10
ಅಫ್ಗಾನಿಸ್ತಾನ್
42 9322 222
11
ಝಿಂಬಾಬ್ವೆ
58 11429 197
12
ಐರ್ಲೆಂಡ್
50 9775 196

Published On - 1:55 pm, Thu, 10 April 25

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್