AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವಕ್ಕೆ ಭಾರತ- ವಿಶ್ವ XI ನಡುವೆ ಕ್ರಿಕೆಟ್ ಕದನ; ಉಭಯ ತಂಡಗಳ ಸಂಭಾವ್ಯ XI ಹೀಗಿದೆ

ಟೀಮ್ ಇಂಡಿಯಾ ಮತ್ತು ವಿಶ್ವ ಇಲೆವೆನ್ ನಡುವಿನ ಪಂದ್ಯವನ್ನು ಆಯೋಜಿಸಲು ನಾವು ಭಾರತ ಸರ್ಕಾರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ವಿಶ್ವ ಇಲೆವೆನ್‌ಗೆ ಕನಿಷ್ಠ 13 ರಿಂದ 14 ಆಟಗಾರರು ಬೇಕಾಗಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವಕ್ಕೆ ಭಾರತ- ವಿಶ್ವ XI ನಡುವೆ ಕ್ರಿಕೆಟ್ ಕದನ; ಉಭಯ ತಂಡಗಳ ಸಂಭಾವ್ಯ XI ಹೀಗಿದೆ
Team India
TV9 Web
| Edited By: |

Updated on: Jul 12, 2022 | 8:01 AM

Share

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಬಲ ಪ್ರದರ್ಶನ ಆರಂಭವಾಗಿದೆ. ಅದರಲ್ಲೂ ಸಣ್ಣ ಸ್ವರೂಪದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ . ಟಿ20 ವಿಶ್ವಕಪ್‌ಗಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಆಟಗಾರರ ತಂಡವನ್ನು ಎದುರಿಸಬಹುದು. ಭಾರತ ಸರ್ಕಾರವು ಭಾರತ ಕ್ರಿಕೆಟ್ ತಂಡ ಮತ್ತು ವಿಶ್ವ XI (India vs Worl XI) ನಡುವೆ ಪಂದ್ಯವನ್ನು ಆಡಿಸಲು ಬಿಸಿಸಿಐ ಮುಂದೆ ಪ್ರಸ್ತಾವನೆ ಇಟ್ಟಿದೆ. ಮುಂದಿನ ತಿಂಗಳು ದೇಶದ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅದ್ದೂರಿಯಾಗಿ ನಡೆಯುತ್ತಿದ್ದು, ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸಲು ಸರ್ಕಾರ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲು ಮುಂದಾಗಿದೆ. ಪಿಟಿಐ ಪ್ರಕಾರ, ಭಾರತ ಸರ್ಕಾರವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲು ವಿವಿಧ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಯೋಜಿಸಿದೆ.

ಈ ಪಂದ್ಯ ಯಾವಾಗ ನಡೆಯಲಿದೆ?

ಕ್ರಿಕೆಟ್‌ನ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕ್ರಿಕೆಟ್ ಅನ್ನು ತನ್ನ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ಕ್ರಿಕೆಟ್ ಮಂಡಳಿಗೆ ಪ್ರಸ್ತಾವನೆ ಕಳುಹಿಸಿದ್ದು,. ಇದರಲ್ಲಿ ಭಾರತ ತಂಡ ಮತ್ತು ವಿಶ್ವ XI ನಡುವೆ ಆಗಸ್ಟ್ 22 ರಂದು ಪಂದ್ಯವನ್ನು ಆಯೋಜಿಸಲು ಪ್ರಸ್ತಾಪಿಸಲಾಗಿದೆ. ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಬಹುದು.

ಇದನ್ನೂ ಓದಿ
Image
Women’s Hockey World Cup 2022: ಕ್ವಾರ್ಟರ್‌ಫೈನಲ್‌ ರೇಸ್‌ನಿಂದ ಹೊರಬಿದ್ದ ಭಾರತ; ವಿಶ್ವಕಪ್ ಗೆಲ್ಲುವ ಕನಸು ಭಗ್ನ
Image
India Playing 11 vs Eng, 1st ODI: ಮೊದಲ ಏಕದಿನ ಕದನಕ್ಕೆ ಭಾರತ ರೆಡಿ; ತಂಡದ ಸಂಭಾವ್ಯ XI ಹೀಗಿದೆ

ಎಷ್ಟು ಆಟಗಾರರು ಬೇಕು?

“ಟೀಮ್ ಇಂಡಿಯಾ ಮತ್ತು ವಿಶ್ವ ಇಲೆವೆನ್ ನಡುವಿನ ಪಂದ್ಯವನ್ನು ಆಯೋಜಿಸಲು ನಾವು ಭಾರತ ಸರ್ಕಾರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ವಿಶ್ವ ಇಲೆವೆನ್‌ಗೆ ಕನಿಷ್ಠ 13 ರಿಂದ 14 ಆಟಗಾರರು ಬೇಕಾಗಿದ್ದಾರೆ. ಆ ಸಮಯದಲ್ಲಿ ಯಾರು ಲಭ್ಯವಿರುತ್ತಾರೆ ಎಂದು ನಾವು ತಿಳಿಯಬೇಕಾಗಿದೆ ಎಂದು ಬಿಸಿಸಿಐ ಮೂಲ ಪಿಟಿಐಗೆ ತಿಳಿಸಿದೆ.

ಭಾರತದ ಸಂಭಾವ್ಯ ತಂಡದ ಜಿಂಬಾಬ್ವೆ ಪ್ರವಾಸವು ಆಗಸ್ಟ್ 20 ರಂದು ಕೊನೆಗೊಳ್ಳುತ್ತದೆ. ಆದ್ದರಿಂದ ಜಿಂಬಾಬ್ವೆ ಪ್ರವಾಸಕ್ಕೆ ಹೋಗುವ ಆಟಗಾರರು ಆಗಸ್ಟ್ 22 ರಂದು ಲಭ್ಯವಿಲ್ಲದಿರಬಹುದು. ಬಿಸಿಸಿಐ ತನ್ನ ‘ಬಿ’ ತಂಡವನ್ನು ವಿವಿಎಸ್ ಲಕ್ಷ್ಮಣ್ ಅವರ ಕೋಚಿಂಗ್‌ನಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ಕಳುಹಿಸಬಹುದು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ಆಗಸ್ಟ್ 22 ರಂದು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇದು ಎರಡೂ ತಂಡಗಳ ಸಂಭಾವ್ಯ 11 ಆಗಿರಬಹುದು

ಭಾರತ ತಂಡ- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್,

ವಿಶ್ವ XI – ಕೇನ್ ವಿಲಿಯಮ್ಸನ್, ಜೋಸ್ ಬಟ್ಲರ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಶಕೀಬ್ ಅಲ್ ಹಸನ್, ಟ್ರೆಂಟ್ ಬೋಲ್ಟ್, ಪ್ಯಾಟ್ ಕಮಿನ್ಸ್, ಕಗಿಸೊ ರಬಾಡ, ರಶೀದ್ ಖಾನ್

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ