Team India: ಟೀಮ್ ಇಂಡಿಯಾದಲ್ಲಿ 12 ಬೌಲರ್​ಗಳು..!

| Updated By: ಝಾಹಿರ್ ಯೂಸುಫ್

Updated on: May 23, 2022 | 7:13 PM

India Squad: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ-ವಿಕೆಟ್ ಕೀಪರ್).

Team India: ಟೀಮ್ ಇಂಡಿಯಾದಲ್ಲಿ 12 ಬೌಲರ್​ಗಳು..!
Team India
Follow us on

ಐಪಿಎಲ್ (IPL 2022)​ ಬಳಿಕ ಟೀಮ್ ಇಂಡಿಯಾ (Team India) ಸೌತ್ ಆಫ್ರಿಕಾ ವಿರುದ್ದ ಟಿ20 ಸರಣಿ ಆಡಲಿದೆ. 5 ಪಂದ್ಯಗಳ ಸರಣಿಗಾಗಿ ಈಗಾಗಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ್ದು, ತಂಡದಲ್ಲಿ ಒಟ್ಟು 18 ಆಟಗಾರರಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ 18 ಮಂದಿಯಲ್ಲಿ 8 ಮಂದಿ ಬೌಲರ್​ಗಳು. ಅಂದರೆ ಕೇವಲ ಬೌಲರ್​ಗಳಾಗಿ 8 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಕೇವಲ ಬ್ಯಾಟ್ಸ್​ಮನ್​ಗಳಾಗಿ ಮೂವರು ಮಾತ್ರ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿದ್ದರೂ ಕೆಎಲ್ ರಾಹುಲ್ ಅವರನ್ನು ಬ್ಯಾಟ್ಸ್​ಮನ್​ ಪಟ್ಟಿಯಲ್ಲಿ ಆಯ್ಕೆ ಮಾಡಿದ್ದಾರೆ. ಇದಕ್ಕೆ ಕಾರಣ ಈ ಸರಣಿಯಲ್ಲಿ ರಾಹುಲ್ ತಂಡವನ್ನು ಮುನ್ನಡೆಸುತ್ತಿರುವುದು. ಹೀಗಾಗಿ ನಾಯಕ ಹಾಗೂ ಬ್ಯಾಟ್ಸ್​ಮನ್ ಜವಾಬ್ದಾರಿಯನ್ನು ಮಾತ್ರ ಕೆಎಲ್​ಆರ್​ಗೆ ವಹಿಸಲಾಗಿದೆ.

ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ 3 ಆಟಗಾರರು ಆಯ್ಕೆಯಾಗಿದ್ದಾರೆ. ಅದರಂತೆ ರಿಷಭ್ ಪಂತ್, ದಿನೇಶ್ ಕಾರ್ತಿಕ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ 4 ಮಂದಿ ಸ್ಥಾನ ಪಡೆದಿದ್ದಾರೆ. ಅಂದರೆ ಈ ಬಾರಿ ಟೀಮ್ ಇಂಡಿಯಾ ಬೌಲಿಂಗ್​ ಕಡೆಗೆ ಹೆಚ್ಚಿನ ಒತ್ತು ನೀಡಿರುವುದು ಸ್ಪಷ್ಟ. ಏಕೆಂದರೆ 8 ಬೌಲರ್​ಗಳು ಹಾಗೂ 4 ಮಂದಿ ಆಲ್​ರೌಂಡರ್​ಗಳನ್ನು ಆಯ್ಕೆ ಮಾಡುವ ಮೂಲಕ ಒಟ್ಟು 12 ಬೌಲರ್​​ಗಳಿಗೆ ಮಣೆಹಾಕಿದೆ.

ಅದರಂತೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದ ಬೌಲರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಆಯ್ಕೆಯಾಗಿದ್ದಾರೆ. ಇವರಲ್ಲಿ ಉಮ್ರಾನ್ ಮಲಿಕ್ ಹಾಗೂ ಅರ್ಷ್​ದೀಪ್ ಸಿಂಗ್ ಚೊಚ್ಚಲ ಬಾರಿಗೆ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇನ್ನು ತಂಡದಲ್ಲಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ವೇಗಿಗಳಾಗಿದ್ದರೆ, ಚಹಾಲ್, ಕುಲ್​ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ಸ್ಪಿನ್ನರ್​ಗಳಾಗಿ ಆಯ್ಕೆಯಾಗಿದ್ದಾರೆ. ಅಂದರೆ ತಂಡದಲ್ಲಿ ಐವರು ವೇಗಿಗಳು ಹಾಗೂ ಮೂವರು ಸ್ಪಿನ್ನರ್​ಗಳಿದ್ದಾರೆ.

ಹಾಗೆಯೇ ಮೀಡಿಯಂ ಫಾಸ್ಟ್ ಬೌಲಿಂಗ್ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ವೆಂಕಟೇಶ್ ಅಯ್ಯರ್ ಸ್ಥಾನ ಪಡೆದಿದ್ದಾರೆ. ಜೊತೆಗೆ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡಾ ಆಯ್ಕೆಯಾಗಿದ್ದಾರೆ. ಅದರಂತೆ ಈ ಬಾರಿ ಆಯ್ಕೆಯಾದ ಟೀಮ್ ಇಂಡಿಯಾದ 18 ಮಂದಿಯಲ್ಲಿ ಒಟ್ಟು 12 ಮಂದಿ ಬೌಲರ್​ಗಳಿರುವುದು ವಿಶೇಷ.

ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ-ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.