T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಟೀಂ ಇಂಡಿಯಾ ಸೃಷ್ಟಿಸಿರುವ ಪ್ರಮುಖ 5 ದಾಖಲೆಗಳಿವು

T20 World Cup: 2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆಲುವಿನ ರುಚಿ ಕಂಡಿದ್ದ ಭಾರತ, ಆ ಬಳಿಕ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಹೀಗಾಗಿ ಭಾರತ ವಿಶ್ವಕಪ್‌ ಗೆದ್ದು ಬರೋಬ್ಬರಿ 15 ವರ್ಷಗಳು ಕಳೆದಿದ್ದು, ಈ ಬಾರಿಯಾದರೂ ರೋಹಿತ್ ಪಡೆ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಟೀಂ ಇಂಡಿಯಾ ಸೃಷ್ಟಿಸಿರುವ ಪ್ರಮುಖ 5 ದಾಖಲೆಗಳಿವು
T20 World Cup 2022
Follow us
TV9 Web
| Updated By: ಪೃಥ್ವಿಶಂಕರ

Updated on: Oct 14, 2022 | 7:35 AM

ಸದ್ಯ ಭಾರತ ತಂಡ ಆಸ್ಟ್ರೇಲಿಯಾದಲ್ಲಿದ್ದು, ಈ ಬಾರಿಯ ಟಿ20 ವಿಶ್ವಕಪ್ (T20 World Cup) ಡಾನ್ ದೇಶದಲ್ಲಿ ನಡೆಯಲಿದೆ. ಅಕ್ಟೋಬರ್ 16 ರಂದು, ವಿಶ್ವಕಪ್‌ ಹಬ್ಬ ಆರಂಭವಾಗಲಿದ್ದು, ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾದ ವಿಶ್ವಕಪ್ ಪಯಣ ಅಕ್ಟೋಬರ್ 23 ರಂದು ಆರಂಭವಾಗಲಿದೆ. 2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆಲುವಿನ ರುಚಿ ಕಂಡಿದ್ದ ಭಾರತ, ಆ ಬಳಿಕ ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. ಹೀಗಾಗಿ ಭಾರತ ವಿಶ್ವಕಪ್‌ ಗೆದ್ದು ಬರೋಬ್ಬರಿ 15 ವರ್ಷಗಳು ಕಳೆದಿದ್ದು, ಈ ಬಾರಿಯಾದರೂ ರೋಹಿತ್ ಪಡೆ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದುವರೆಗೆ ನಡೆದ 7 ಆವೃತ್ತಿಗಳಲ್ಲಿ ಹಲವು ತಂಡಗಳು ಹಲವು ದಾಖಲೆಗಳನ್ನು ನಿರ್ಮಿಸಿವೆ. ಅದರಲ್ಲೂ ಟೀಂ ಇಂಡಿಯಾ ನಿರ್ಮಿಸಿರುವ ದಾಖಲೆಗಳನ್ನು ಇದುವರೆಗೂ ಯಾವ ತಂಡಕ್ಕೂ ಮುರಿಯಲು ಸಾಧ್ಯವಾಗಿಲ್ಲ.

  1. ಹೆಚ್ಚು ಮೇಡನ್ ಓವರ್‌ಗಳು – ಭಾರತದ ಮಾಜಿ ಸ್ಟಾರ್ ಆಫ್-ಸ್ಪಿನ್ನರ್ ಹರ್ಭಜನ್ ಸಿಂಗ್ T20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಭಜ್ಜಿ ಕೊನೆಯ ಬಾರಿಗೆ 2012 ರಲ್ಲಿ ಟಿ20 ವಿಶ್ವಕಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. 19 ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಭಜ್ಜಿ 4 ಮೇಡನ್‌ಗಳೊಂದಿಗೆ ಒಟ್ಟು 69 ಓವರ್‌ಗಳನ್ನು ಬೌಲ್ ಮಾಡಿದ್ದಾರೆ.
  2. ಅತಿ ವೇಗದ ಅರ್ಧಶತಕ – ಈ ದಾಖಲೆಯು ಭಾರತದ ಮಾಜಿ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದೆ. 2007ರ ಟಿ20 ವಿಶ್ವಕಪ್‌ನಲ್ಲಿ ಯುವಿ ಇಂಗ್ಲೆಂಡ್ ವಿರುದ್ಧ ಡರ್ಬನ್‌ನಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಆ ಸಮಯದಲ್ಲಿ ಅವರು ಸ್ಟೀವರ್ಟ್ ಬ್ರಾಡ್ ಅವರ ಒಂದು ಓವರ್‌ನಲ್ಲಿ ಆರು ಎಸೆತಗಳಲ್ಲಿ ಆರು ಸಿಕ್ಸರ್‌ಗಳನ್ನು ಹೊಡೆದಿದ್ದರು.
  3. ಒಂದೇ ಸೀಸನ್​ನಲ್ಲಿ ಅತಿ ಹೆಚ್ಚು ರನ್ – ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಸೀಸನ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. 2014ರ ವಿಶ್ವಕಪ್‌ನಲ್ಲಿ ಕೊಹ್ಲಿ 319 ರನ್ ಗಳಿಸಿದ್ದರು. ಆ ಆವೃತ್ತಿಯಲ್ಲಿ ಭಾರತ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋತಿತ್ತು. ವಿರಾಟ್ ಆರು ಪಂದ್ಯಗಳಲ್ಲಿ 106.33 ಸರಾಸರಿಯಲ್ಲಿ ಒಟ್ಟು 319 ರನ್ ಗಳಿಸಿದ್ದರು. ಇದರೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಅರ್ಧಶತಕ (10) ಬಾರಿಸಿದ ದಾಖಲೆಯನ್ನು ಸಹ ಕೊಹ್ಲಿ ಮಾಡಿದ್ದಾರೆ.
  4. ಅತ್ಯಂತ ಯಶಸ್ವಿ ನಾಯಕ – ನೀವು T20 ವಿಶ್ವಕಪ್ ಇತಿಹಾಸವನ್ನು ನೋಡಿದರೆ, ಅತ್ಯಂತ ಯಶಸ್ವಿ ನಾಯಕರ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಿದ್ದಾರೆ. ಮಾಹಿ ಆರು ಬಾರಿ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ (2007, 2009, 2010, 2012, 2014 ಮತ್ತು 2016).
  5. ಟಿ20 ವಿಶ್ವಕಪ್ ಇತಿಹಾಸದಲ್ಲಿ ಎಲ್ಲಾ ಆವೃತ್ತಿಗಳಲ್ಲಿ ಕನಿಷ್ಠ ಒಂದು ಪಂದ್ಯವನ್ನಾದರೂ ಆಡಿದ ಆಟಗಾರ ಎಂಬ ದಾಖಲೆಯನ್ನು ಭಾರತದ ನಾಯಕ ರೋಹಿತ್ ಶರ್ಮಾ ಹೊಂದಿದ್ದಾರೆ. ಟಿ20 ವಿಶ್ವಕಪ್ 2007 ರಿಂದ 2021 ರವರೆಗಿನ ಪ್ರತಿ ಆವೃತ್ತಿಯಲ್ಲಿ ಹಿಟ್‌ಮ್ಯಾನ್ ಕನಿಷ್ಠ ಒಂದು ಪಂದ್ಯವನ್ನು ಆಡಿದ್ದಾರೆ. ರೋಹಿತ್ ಜೊತೆಗೆ, ಈ ಪಟ್ಟಿಯಲ್ಲಿ ಡ್ವೇನ್ ಬ್ರಾವೋ, ಕ್ರಿಸ್ ಗೇಲ್ ಮತ್ತು ಶಕಿಬ್ ಅಲ್ ಹಸನ್ ಇದ್ದಾರೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ