Virat Kohli: ವಿರಾಟ್ ಕೊಹ್ಲಿಯನ್ನು ಕಿಚಾಯಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶ

India vs Pakistan: ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

Virat Kohli: ವಿರಾಟ್ ಕೊಹ್ಲಿಯನ್ನು ಕಿಚಾಯಿಸಿದ ಚಕ್ರವರ್ತಿ ಸೂಲಿಬೆಲೆ: ಅಭಿಮಾನಿಗಳ ಆಕ್ರೋಶ
Chakravarthy Sulibele - Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2022 | 8:24 PM

T20 World Cup 2022: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ್ (India vs Pakistan) ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾಗೆ (Team India) ವಿರಾಟ್ ಕೊಹ್ಲಿ (Virat Kohli) ಭರ್ಜರಿ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಮೂಲಕ ಭಾರತೀಯರ ದೀಪಾವಳಿ ಸಂಭ್ರಮವನ್ನು ಹೆಚ್ಚಿಸಿದ್ದರು. ಆದರೆ ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿಯನ್ನು ಕಿಚಾಯಿಸುವ ಮೂಲಕ ಪ್ರಮುಖ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ, ಪಂದ್ಯ ಗೆಲ್ಲಿಸಿದಕ್ಕಾಗಿ ವಿರಾಟ್ ಕೊಹ್ಲಿಯವರಿಗೆ ಅಭಿನಂದನೆಗಳು. ಆದರೆ ಈ ಗೆಲುವನ್ನು ಸಂಭ್ರಮಿಸುವುದು ಹೇಗೆ? ಏಕೆಂದರೆ ಪಟಾಕಿ ರಹಿತ ದೀಪಾವಳಿ ಆಚರಿಸಲು ನೀವು ಸಲಹೆ ನೀಡಿದ್ದೀರಿ ಎಂದು ಕಿಚಾಯಿಸಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಅಂದರೆ ಈ ಹಿಂದೆ ವಿರಾಟ್ ಕೊಹ್ಲಿ ಯಾವುದೇ ಪಟಾಕಿ ಸಿಡಿಸದೇ ಅರ್ಥಪೂರ್ಣವಾಗಿ ದೀಪಾವಳಿ ಆಚರಿಸಿ ಎಂದು ಮನವಿ ಮಾಡಿದ್ದರು. ಅಲ್ಲದೆ ಮಾಲಿನ್ಯ ಮುಕ್ತ ದೀಪಾವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದನ್ನೇ ಪರೋಕ್ಷವಾಗಿ ಪ್ರಸ್ತಾಪಿಸುವ ಮೂಲಕ ದೀಪಾವಳಿ ಸಂದರ್ಭದಲ್ಲಿ ಈ ಗೆಲುವನ್ನು ಹೇಗೆ ಸಂಭ್ರಮಿಸಬೇಕೆಂದು ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರ ಈ ಟ್ವೀಟ್​ಗೆ ವಿರಾಟ್ ಕೊಹ್ಲಿಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಪ್ರತಿಕ್ರಿಯಿಸಿದ್ದಾರೆ.

ದಯವಿಟ್ಟು, ಈಗ ಇದೆಲ್ಲಾ ಬೇಡ. ಇಂತಹ ವಿಷಯಗಳನ್ನು ಇದನ್ನೆಲ್ಲಾ ಬದಿಗಿಟ್ಟು, ಪಾಕಿಸ್ತಾನದ ವಿರುದ್ಧದ ಭಾರತದ ಐತಿಹಾಸಿಕ ಗೆಲುವನ್ನು ಸಂಭ್ರಮಿಸೋಣ ಎಂದು ದೊಡ್ಡ ಗಣೇಶ್ ಪ್ರತಿಕ್ರಿಯಿಸಿದ್ದಾರೆ. ಇತ್ತ ಕರ್ನಾಟಕದ ಮಾಜಿ ಆಟಗಾರನ ಪ್ರತ್ಯುತ್ತರಕ್ಕೂ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸದ್ಯ ಚಕ್ರವರ್ತಿ ಸೂಲಿಬೆಲೆ ಅವರ ಟ್ವೀಟ್ ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದೆ.

ಟೀಮ್ ಇಂಡಿಯಾಗೆ ರೋಚಕ ಜಯ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ