Aakash Chopra: ವಿರಾಟ್ ಕೊಹ್ಲಿ ಮತ್ತೆ RCB ಕ್ಯಾಪ್ಟನ್ ಆಗ್ತಾರೆ..!
IPL 2022 RCB Captain: RCB ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್.
ಐಪಿಎಲ್ ಸೀಸನ್ 15 ನಲ್ಲಿ (IPL 2022) ಆರ್‌ಸಿಬಿ (RCB) ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಮಾರ್ಚ್ 12 ರಂದು ಬಿಗ್ ಸರ್ಪ್ರೈಸ್ ನೀಡುವುದಾಗಿ ಆರ್‌ಸಿಬಿ ಕೂಡ ಘೋಷಿಸಿದೆ. ಈ ಮೂಲಕ ಆರ್‌ಸಿಬಿ ತಂಡದ ಹೊಸ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಇದಾಗ್ಯೂ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿಯೇ (Virat Kohli) ಮುನ್ನಡೆಸಲಿದ್ದಾರೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ. ವಿರಾಟ್ ಕೊಹ್ಲಿ ಈಗ ಅಂತಾರಾಷ್ಟ್ರೀಯ ತಂಡದ ನಾಯಕನಲ್ಲ. ಹೀಗಾಗಿ ಕಿಂಗ್ ಕೊಹ್ಲಿಯನ್ನೇ RCB ನಾಯಕನಾಗಿ ಆಯ್ಕೆ ಮಾಡಲಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚೋಪ್ರಾ, “ಕೊಹ್ಲಿ ಆರ್‌ಸಿಬಿ ನಾಯಕತ್ವವನ್ನು ತೊರೆದಾಗ, ಅವರು ಟೀಮ್ ಇಂಡಿಯಾ ನಾಯಕರಾಗಿದ್ದರು. ಈ ವೇಳೆ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸುವತ್ತ ಗಮನ ಹರಿಸುವುದಾಗಿ ತಿಳಿಸಿದ್ದರು. ಆದರೆ ಇದಾದ ಬಳಿಕ ಕೊಹ್ಲಿ ಏಕದಿನ ನಾಯಕನ ಸ್ಥಾನದಿಂದ ಕೆಳಗಿಳಿಸಲಾಯಿತು. ನಂತರ ಟೆಸ್ಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದರು. ಈಗ ಅವರು ನಾಯಕನಲ್ಲ. ಹೀಗಾಗಿ ಅವರಿಗೆ ಆರಾಮಾಗಿ ಆರ್‌ಸಿಬಿ ತಂಡವನ್ನು ಮುನ್ನಡೆಸಬಹುದು ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.
ನನ್ನ ಪ್ರಕಾರ ವಿರಾಟ್ ಕೊಹ್ಲಿ ಅವರೇ ಆರ್‌ಸಿಬಿ ನಾಯಕರಾಗಲಿದ್ದಾರೆ. ಏಕೆಂದರೆ ಅವರು ಐಪಿಎಲ್ ವೃತ್ತಿಜೀವನದುದ್ದಕ್ಕೂ RCB ಪರ ಆಡಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರನ್ನು ಇನ್ನೂ ಒಂದು ವರ್ಷ ಆರ್‌ಸಿಬಿಯ ನಾಯಕನಾಗಿ ಏಕೆ ಮಾಡಬಾರದು? ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ತಂಡವು ಪ್ಲೇಆಫ್ ತಲುಪುವುದರೊಂದಿಗೆ RCB ಯ ಪ್ರದರ್ಶನವು ಸುಧಾರಿಸಿದೆ. ಹೀಗಾಗಿ ಕೊಹ್ಲಿಗೆ ಕ್ಯಾಪ್ಟನ್ಸಿ ನೀಡುವುದು ಉತ್ತಮ ಎಂದಿದ್ದಾರೆ ಆಕಾಶ್ ಚೋಪ್ರಾ.
ಸದ್ಯ ಆರ್‌ಸಿಬಿ ಫ್ರಾಂಚೈಸಿ ಮಾರ್ಚ್ 12 ರಂದು ನಾಯಕನನ್ನು ಘೋಷಿಸಲಿದೆ. ನಾಯಕರುಗಳ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಫಾಫ್ ಡುಪ್ಲೆಸಿಸ್, ಹಾಗೂ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಅದರಲ್ಲೂ ಈ ಬಾರಿ ಆರ್‌ಸಿಬಿ ಡುಪ್ಲೆಸಿಸ್ ಅವರಿಗೆ ನಾಯಕತ್ವ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಹೊಸ ತಂಡ, ಹೊಸ ಜೆರ್ಸಿ ಹಾಗೂ ಹೊಸ ನಾಯಕನೊಂದಿಗೆ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.
RCB ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್ ಗೌತಮ್, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.
ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(Aakash Chopra on Virat Kohli captaining RCB again in IPL 2022)