AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aaron Finch retires: ಕಳಪೆ ಫಾರ್ಮ್: ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಆ್ಯರೋನ್ ಫಿಂಚ್

Aaron Finch: ಆಸ್ಟ್ರೇಲಿಯಾ ಕ್ರಿಕೆಟ್ (Australia Cricket) ತಂಡದ ಸೀಮಿತ ಓವರ್​ಗಳ ನಾಯಕ ಆ್ಯರೊನ್ ಫಿಂಚ್ ಇದೀಗ ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಈ ವರ್ಷ ಆಸ್ಟ್ರೇಲಿಯಾದಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

Aaron Finch retires: ಕಳಪೆ ಫಾರ್ಮ್: ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಆ್ಯರೋನ್ ಫಿಂಚ್
Aaron Finch
TV9 Web
| Edited By: |

Updated on:Sep 10, 2022 | 7:56 AM

Share

ಸತತವಾಗಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ (Australia Cricket) ತಂಡದ ಸೀಮಿತ ಓವರ್​ಗಳ ನಾಯಕ ಆ್ಯರೊನ್ ಫಿಂಚ್ (Aaron Finch) ಇದೀಗ ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಸೆಪ್ಟಂಬರ್ 11 ಭಾನುವಾರದಂದು ಫಿಂಚ್ ನ್ಯೂಜಿಲೆಂಡ್ (New Zealand) ತಂಡದ ಎದುರು ಕೊನೆಯ ಏಕದಿನ ಪಂದ್ಯ ಆಡಲಿದ್ದು, ಇದಾದ ಬಳಿಕ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​​ನಿಂದ ಹೊರಗುಳಿಯಲಿದ್ದಾರೆ. ಆದರೆ, ಈ ವರ್ಷ ಆಸ್ಟ್ರೇಲಿಯಾದಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಆ್ಯರೋನ್ ಫಿಂಚ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆರಂಭಿಕ ಬ್ಯಾಟರ್​ಗಳಲ್ಲಿ ಒಬ್ಬರು. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟಿಂಗ್‌ ವಿಭಾಗದ ಪ್ರಮುಖ ಶಕ್ತಿಯಾಗಿದ್ದರು. ಆದರೆ, ಕಳೆದ ಕೆಲವು ತಿಂಂಗಳುಗಳಿಂದ ಸತತವಾಗಿ ರನ್ ಗಳಿಸಲು ವಿಫಲವಾಗುತ್ತಿರುವುದು ಟೀಕೆಗೆ ಗುರಿಯಾಗಿತ್ತು. ಫಿಂಚ್‌ ತಮ್ಮ ಕೊನೆಯ 7 ಏಕದಿನ ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 26 ರನ್ ಮಾತ್ರ ಮಾತ್ರ. ಇದರಲ್ಲಿ ಮೂರು ಬಾರಿ ಡಕ್‌ಔಟ್‌ ಆಗಿರುವುದು ಕೂಡ ಸೇರಿದೆ.

ಇದನ್ನೂ ಓದಿ
Image
Asia Cup 2022: ಏಷ್ಯಾಕಪ್‌ನಲ್ಲಿ ಭಾರತದ ಕಳಪೆ ಪ್ರದರ್ಶನ; ಟಿ20 ಕ್ರಿಕೆಟ್​ನಲ್ಲಿ ಲೆಜೆಂಡರಿ ಸ್ಪಿನ್ನರ್ ಯುಗಾಂತ್ಯ?
Image
1 ಕೋಟಿ ರೂ. ಕೊಟ್ಟರು ಕೊಹ್ಲಿ ನೀಡಿದ ಉಡುಗೂರೆಯನ್ನು ಮಾರುವುದಿಲ್ಲ ಎಂದ ಪಾಕಿಸ್ತಾನಿ ಅಭಿಮಾನಿ..!
Image
Virat Kohli: ಟಿ20 ಕ್ರಿಕೆಟ್​ನಲ್ಲಿ ರೋಹಿತ್ ದಾಖಲೆ ಮುರಿದ ಕೊಹ್ಲಿ; ಹೊಸ ದಾಖಲೆ ಯಾವುದು ಗೊತ್ತಾ?
Image
Virat Kohli: 6,6,6… ಟಿ20 ಕ್ರಿಕೆಟ್​ನಲ್ಲಿ ಟ್ರಿಪಲ್ ಸಿಕ್ಸರ್‌ ಬಾರಿಸಿದ ಕಿಂಗ್ ಕೊಹ್ಲಿ..! ಹೀಗೊಂದು ಕಾಕತಾಳೀಯ

ಫಿಂಚ್ ಈ ವರ್ಷ 13 ಏಕದಿನ ಇನ್ನಿಂಗ್ಸ್‌ಗಳಲ್ಲಿ ಕೇವಲ 13 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಜೊತೆಗೆ ಈ ಕ್ಯಾಲೆಂಡರ್ ವರ್ಷದಲ್ಲಿ ಫಿಂಚ್ ಬರೋಬ್ಬರಿ 5 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನದಲ್ಲಿ ಪುನಃ ಶೂನ್ಯಕ್ಕೆ ಔಟಾಗುವ ಮೂಲಕ ತಮ್ಮ ಹೆಸರಿನಲ್ಲಿ ಅನಗತ್ಯ ದಾಖಲೆಯನ್ನು ಮಾಡಿದರು. ಫಿಂಚ್ ಒಂದು ಕ್ಯಾಲೆಂಡರ್ ವರ್ಷದಲ್ಲಿ 0 ಗೆ ಹೆಚ್ಚು ಬಾರಿ ಔಟಾದ ಆಸ್ಟ್ರೇಲಿಯಾದ ನಾಯಕ ಎಂಬ ಕುಖ್ಯಾತಿಗೆ ಪಾತ್ರರಾದರು.

ಆಸ್ಟ್ರೇಲಿಯಾ ತಂಡದ ಪರ ಫಿಂಚ್​ ಒಟ್ಟು 145 ಏಕದಿನ ಪಂದ್ಯಗಳನ್ನಾಡಿದ್ದು, 5401 ರನ್​​​ಗಳಿಸಿದ್ದಾರೆ. ಇದರಲ್ಲಿ 17 ಶತಕ ಸೇರಿಕೊಂಡಿವೆ. 2020ರಲ್ಲಿ ಏಕದಿನ ಕ್ರಿಕೆಟ್​​ನ ಪ್ಲೇಯರ್​ ಆಫ್​ ದಿ ಇಯರ್​ ಪ್ರಶಸ್ತಿ ಗೆದ್ದಿದ್ದರು. ಜೊತೆಗೆ 2015ರಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ ವಿಜೇತ ತಂಡದ ಭಾಗವಾಗಿದ್ದರು. ಇವರು 2013 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದರು. ನಾಯಕನಾಗಿ 52 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಫಿಂಚ್ ತನ್ನ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ 52.08 ರ ಗೆಲುವಿನ ಶೇಕಡಾವಾರು ಪ್ರಮಾಣ ಹೊಂದಿದ್ದಾರೆ.

Published On - 7:55 am, Sat, 10 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್