AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧಶತಕದ ಸನಿಹದಲ್ಲಿ ಎಡವಿದ ಆರ್ಯವೀರ್ ಸೆಹ್ವಾಗ್ 

ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಎರಡನೇ ಯೂತ್ ಏಕದಿನ ಪಂದ್ಯದಲ್ಲಿ, ಭಾರತ ಅಂಡರ್-19 ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 341 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಶ್‌ಬರ್ಧನ್ ಚೌಹಾಣ್ ಶತಕ ಸಿಡಿಸಿದರೆ, ಆರ್ಯವೀರ್ ಸೆಹ್ವಾಗ್ ಅರ್ಧಶತಕದ ಅಂಚಿನಲ್ಲಿ ಎಡವಿದರು.

ಅರ್ಧಶತಕದ ಸನಿಹದಲ್ಲಿ ಎಡವಿದ ಆರ್ಯವೀರ್ ಸೆಹ್ವಾಗ್ 
ಆರ್ಯವೀರ್ ಸೆಹ್ವಾಗ್Image Credit source: BCCI
ಝಾಹಿರ್ ಯೂಸುಫ್
|

Updated on: Sep 21, 2026 | 2:08 PM

Share

ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ಪುತ್ರ  ಆರ್ಯವೀರ್ ಸೆಹ್ವಾಗ್, ಆಸ್ಟ್ರೇಲಿಯಾ ಅಂಡರ್-19 ವಿರುದ್ಧದ ಎರಡನೇ ಯೂತ್ ಏಕದಿನ ಪಂದ್ಯದಲ್ಲಿ ಕೇವಲ 3 ರನ್‌ಗಳಿಂದ ತಮ್ಮ ಚೊಚ್ಚಲ ಅರ್ಧಶತಕವನ್ನು ಮಿಸ್ ಮಾಡಿಕೊಂಡಿದ್ದಾರೆ. ರಾಜ್‌ಕೋಟ್‌ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಅವರು 47 ರನ್ ಗಳಿಸಿ ರನೌಟ್ ಆಗುವ ಮೂಲಕ ನಿರಾಸೆ ಮೂಡಿಸಿದರು.

ಸ್ಫೋಟಕ ಬ್ಯಾಟಿಂಗ್:

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಯವೀರ್, ತಂದೆ ವೀರೇಂದ್ರ ಸೆಹ್ವಾಗ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ನೆನಪಿಸುವಂತೆ ಬ್ಯಾಟ್ ಬೀಸಿದ್ದರು.

ಮೊದಲ ಪಂದ್ಯದಂತೆಯೇ ಈ ಪಂದ್ಯದಲ್ಲೂ ಎದುರಿಸಿದ ಮೊದಲನೇ ಚೆಂಡನ್ನೇ ಬೌಂಡರಿಗಟ್ಟುವ ಮೂಲಕ ರನ್ ಖಾತೆ ತೆರೆದ ಜೂನಿಯರ್ ಸೆಹ್ವಾಗ್, ಆಸೀಸ್ ಬೌಲರ್‌ಗಳನ್ನು ಮನಬಂದಂತೆ ಕಾಡಿದರು. ಕೇವಲ 48 ಎಸೆತಗಳನ್ನು ಎದುರಿಸಿದ ಅವರು 9 ಭರ್ಜರಿ ಬೌಂಡರಿಗಳ ನೆರವಿನಿಂದ 47 ರನ್ ಚಚ್ಚಿದರು. ಆದರೆ ದುರದೃಷ್ಟವಶಾತ್, ಆಸ್ಟ್ರೇಲಿಯಾದ ಜ್ಯಾಕ್ ಝೋಸ್ನೆಕ್ ಎಸೆದ ಅದ್ಭುತ ಥ್ರೋಗೆ ಸಿಲುಕಿ ರನೌಟ್ ರೂಪದಲ್ಲಿ ವಿಕೆಟ್ ಒಪ್ಪಿಸಿ ನಿರಾಸೆಯಿಂದ ಪೆವಿಲಿಯನ್ ಕಡೆ ಹೆಜ್ಜೆ ಹಾಕಬೇಕಾಯಿತು.

ಮೊದಲ ಪಂದ್ಯದಲ್ಲೂ ಮಿಂಚಿದ್ದ ಆರ್ಯವೀರ್:

ಇದೇ ಸರಣಿಯ ಮೊದಲ ಏಕದಿನ ಪಂದ್ಯದ ಮೂಲಕ ಭಾರತ ಅಂಡರ್-19 ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಆರ್ಯವೀರ್, ಆ ಪಂದ್ಯದಲ್ಲೂ 5 ಬೌಂಡರಿಗಳೊಂದಿಗೆ 26 ಎಸೆತಗಳಲ್ಲಿ 28 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು.

ತಮ್ಮ ಎರಡನೇ ಪಂದ್ಯದಲ್ಲೇ ಅರ್ಧಶತಕದ ಸನಿಹ ಬಂದು ರನೌಟ್ ಆಗಿರುವುದು ಅಭಿಮಾನಿಗಳಲ್ಲಿ ಸಣ್ಣ ಬೇಸರ ಮೂಡಿಸಿದ್ದರೂ, ಅವರ ಈ ಸ್ಫೋಟಕ ಬ್ಯಾಟಿಂಗ್ ಶೈಲಿ ಭಾರತೀಯ ಕ್ರಿಕೆಟ್‌ನ ಮುಂದಿನ ಭರವಸೆಯ ತಾರೆಯ ಮುನ್ಸೂಚನೆ ನೀಡಿದೆ.

ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ:

ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯಶ್‌ಬರ್ಧನ್ ಚೌಹಾಣ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ಯಶ್ ಇದಾದ ಬಳಿಕ ರನ್​ ವೇಗವನ್ನು ಹೆಚ್ಚಿಸಿದರು. ಈ ಮೂಲಕ 100 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 122 ರನ್​ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 341 ರನ್ ಕಲೆಹಾಕಿದೆ.

ಭಾರತ ಅಂಡರ್-19 ಪ್ಲೇಯಿಂಗ್ 11: ಲಕ್ಷ್ಯ ರಾಜೇಶ್ ರಾಯಚಂದನಿ (ನಾಯಕ ) ಆರ್ಯವೀರ್ ಸೆಹ್ವಾಗ್ , ಕುಶಾಗ್ರ ಓಜಾ , ಯಶ್​ಬರ್ಧನ್ ಚೌಹಾಣ್ , ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್) , ವಿ ಕೆ ವಿನೀತ್ , ಯಶ್ವೀರ್ ಗೌಡ್ , ಮನಲ್ ಚೌಹಾಣ್ , ಚಿಗುರುಪತಿ ವೆಂಕಟ , ಕಾವ್ಯಾ ಪಟೇಲ್ , ಮೋಹಿತ್ ಉಲ್ವಾ.

ಇದನ್ನೂ ಓದಿ: ಸೆಂಚುರಿ ಮೇಲೆ ಸೆಂಚುರಿ: ಹೊಸ ಇತಿಹಾಸ ಬರೆದ ಮಾಝ್ ಸದಾಕತ್!

ಆಸ್ಟ್ರೇಲಿಯಾ ಅಂಡರ್-19 ಪ್ಲೇಯಿಂಗ್ 11: ನೀಲ್ ಪಟೇಲ್ , ಹೇಡನ್ ಬಾರ್ಬುಲೋವಿಕ್ (ವಿಕೆಟ್ ಕೀಪರ್), ಜೆಡ್ ಹೋಲಿಕ್ , ಜ್ಯಾಕ್ ಜೋಸ್ನೆಕ್ (ನಾಯಕ) , ಬ್ಲೇಕ್ ಕ್ಯಾಟಲ್ , ಮ್ಯಾಥ್ಯೂ ಲೌಗ್ , ಕಾನರ್ ಗ್ರೆಗೊರಿ , ಜಾಕೋಬ್ ಪೀಟ್ಜ್ , ಪ್ಯಾಟ್ರಿಕ್ ಸುಲ್ಲಿವನ್ , ಥಾಮಸ್ ವಾಸಿಯೊ , ಥಿಯೋ ಸಿಂಗೋಸ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​