AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಹೆಸರಲ್ಲ, ತನ್ನ ಆಟದಿಂದಲೇ ಗೌರವ ಗಳಿಸಿದ ಆರ್ಯವೀರ್: ಮಗನ ಸಾಧನೆಗೆ ಸೆಹ್ವಾಗ್ ಫಿದಾ

ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್, ಅಂಡರ್-19 ಏಷ್ಯಾಕಪ್‌ನಲ್ಲಿ 361 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೈನಲ್‌ನಲ್ಲಿ 58 ರನ್ ಗಳಿಸಿ ತಂಡದ ಗೆಲುವಿಗೆ ನೆರವಾಗಿದ್ದಾರೆ. ಮಗನ ಸಾಧನೆಗೆ ವೀರೇಂದ್ರ ಸೆಹ್ವಾಗ್ ಸಂತಸ ವ್ಯಕ್ತಪಡಿಸಿದ್ದು, ಟೀಕೆಗಳನ್ನು ಮೆಟ್ಟಿ ನಿಂತು ದೊಡ್ಡ ರನ್ ಗಳಿಸುವ ಸಾಮರ್ಥ್ಯ ಆರ್ಯವೀರ್‌ಗಿದೆ ಎಂದು ಹೆಮ್ಮೆಪಟ್ಟಿದ್ದಾರೆ. ಇದು ಆತನ ಭವಿಷ್ಯಕ್ಕೆ ಉತ್ತಮ ಆರಂಭ.

ತಂದೆಯ ಹೆಸರಲ್ಲ, ತನ್ನ ಆಟದಿಂದಲೇ ಗೌರವ ಗಳಿಸಿದ ಆರ್ಯವೀರ್: ಮಗನ ಸಾಧನೆಗೆ ಸೆಹ್ವಾಗ್ ಫಿದಾ
ವೀರೇಂದ್ರ ಸೆಹ್ವಾಗ್, ಆರ್ಯವೀರ್ ಸೆಹ್ವಾಗ್
ಪೃಥ್ವಿಶಂಕರ
|

Updated on: Nov 19, 2026 | 7:41 PM

Share

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಮಗ ಆರ್ಯವೀರ್ ಸೆಹ್ವಾಗ್, ಇದೀಗ ತಮ್ಮ ಅದ್ಭುತ ಆಟದ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಭಾರತದ ಅಂಡರ್-19 ತಂಡ ಏಷ್ಯಾಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ ಮಗನ ಸಾಧನೆಗೆ ಇದೀಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸಿದ್ಧ ಕುಟುಂಬದ ಹೆಸರಿನೊಂದಿಗೆ ಬರುವ ಟೀಕೆಗಳನ್ನು ತಡೆಯಲು ಸಾಧ್ಯವಿಲ್ಲ. ಆದರೆ, ಮೈದಾನದಲ್ಲಿ ದೊಡ್ಡ ಮೊತ್ತದ ರನ್ ಗಳಿಸುವ ಮೂಲಕ ಆರ್ಯವೀರ್ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲಿ ಆರ್ಯವೀರ್ 361 ರನ್ ಗಳಿಸುವ ಮೂಲಕ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು. ಇದರಲ್ಲಿ ಒಂದು ಶತಕ ಹಾಗೂ ಮೂರು ಅರ್ಧಶತಕಗಳು ಸೇರಿದ್ದವು. ಅಲ್ಲದೆ, ಪಾಕಿಸ್ತಾನ ವಿರುದ್ಧದ ಮಹತ್ವದ ಫೈನಲ್ ಪಂದ್ಯದಲ್ಲೂ 58 ರನ್ ಗಳಿಸಿ ತಂಡದ ಗೆಲುವಿಗೆ ನೆರವಾಗಿದ್ದರು.

ದೊಡ್ಡ ಮೊತ್ತದ ರನ್ ಗಳಿಸಬೇಕು

ಈ ಬಗ್ಗೆ ಮಾತನಾಡಿರುವ ಸೆಹ್ವಾಗ್, ‘ಭಾರತದ ಅಂಡರ್-19 ತಂಡ ಏಷ್ಯಾಕಪ್ ಗೆದ್ದಿರುವುದು ನನಗೆ ತುಂಬಾ ಸಂತಸ ತಂದಿದೆ. ಅದರಲ್ಲೂ ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್ಯವೀರ್ ನೀಡಿದ ಕೊಡುಗೆ ವಿಶೇಷವಾದದ್ದು. ಆತ ಕೇವಲ ರನ್ ಗಳಿಸಲಿಲ್ಲ, ದೊಡ್ಡ ಮೊತ್ತದ ರನ್ ಗಳಿಸಿದ. ಈ ಗೆಲುವಿಗಾಗಿ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಯಾವಾಗಲೂ ಆತನಿಗೆ ಒಂದು ಮಾತು ಹೇಳುತ್ತಿದ್ದೆ. ನಿನಗೆ ಗೌರವ ಸಿಗಬೇಕಾದರೆ ದೊಡ್ಡ ಮೊತ್ತದ ರನ್ ಗಳಿಸಬೇಕು ಎಂದು ಹೇಳುತ್ತಿದ್ದೆ. ಈ ಟೂರ್ನಿಯಲ್ಲಿ ಆತ ಅದನ್ನೇ ಮಾಡಿ ತೋರಿಸಿದ್ದಾನೆ.

ಟೀಕೆಗಳನ್ನು ಎದುರಿಸಬೇಕಾಯಿತು

‘ಒಬ್ಬ ಆಟಗಾರನ ಆಟವನ್ನು ಕಣ್ಣಾರೆ ನೋಡುವವರೆಗೂ ಜನರು ಆತನ ಹೆಸರಿನ ಆಧಾರದ ಮೇಲೆಯೇ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಆದರೆ, ಆತ ಉತ್ತಮ ಪ್ರದರ್ಶನ ನೀಡಿದಾಗ ಮಾತ್ರ ಪ್ರತಿಭೆಯನ್ನು ಗುರುತಿಸುತ್ತಾರೆ. ಆರ್ಯವೀರ್ ಕೂಡ ತನ್ನ ತಂದೆಯ ಹೆಸರಿನಿಂದಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಮುಂದೆಯೂ ಇಂತಹ ಟೀಕೆಗಳು ಎದುರಾಗಬಹುದು. ಆದರೆ, ಈಗ ಆತನಲ್ಲಿ ಪ್ರತಿಭೆಯಿದೆ ಮತ್ತು ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ದೇಶದ ಜನರಿಂದ ಆತನಿಗೆ ಪ್ರೀತಿ ಮತ್ತು ಬೆಂಬಲ ಸಿಗಲಿದೆ ಎಂಬ ವಿಶ್ವಾಸ ನನಗಿದೆ’ ಎಂದು ಸೆಹ್ವಾಗ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು