IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!

AB de Villiers: ಎಬಿ ಡಿವಿಲಿಯರ್ಸ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಡೆಲ್ಲಿ ಕ್ಯಾಪಿಟಲ್ಸ್‌ನೊಂದಿಗೆ ಆರಂಭಿಸಿದ್ದರು. 2011 ರಲ್ಲಿ RCB ಸೇರಿದ್ದ ಎಬಿಡಿ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು.

IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
AB de Villiers
Follow us
| Edited By: Zahir Yusuf

Updated on:May 24, 2022 | 3:39 PM

ಟಿ20 ಕ್ರಿಕೆಟ್​ನ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ (AB De Villiers)​ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಮರಳುವುದಾಗಿ ಘೋಷಿಸಿದ್ದಾರೆ. ಈ ಹಿಂದೆಯೇ ಎಬಿಡಿ ಐಪಿಎಲ್​ಗೆ ಮರಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಅದರನ್ನು ಡಿವಿಲಿಯರ್ಸ್​ ಮಾತ್ರ ಖಚಿತಪಡಿಸಿರಲಿಲ್ಲ. ಆದರೀಗ ಖುದ್ದು ಎಬಿಡಿಯೇ ನಾನು ಮತ್ತೆ ಐಪಿಎಲ್​ಗೆ ಮರಳುತ್ತೇನೆ ಎಂದಿದ್ದಾರೆ. ಅದು ಕೂಡ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಎಂಬುದು ವಿಶೇಷ.

RCB ತಂಡದ ಆಪತ್ಭಾಂಧವರಾಗಿದ್ದ ಎಬಿ ಡಿವಿಲಿಯರ್ಸ್ ಈ ಬಾರಿಯ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಆರ್​ಸಿಬಿ ಪರ 157 ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಅಷ್ಟೇ ಯಾಕೆ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸುವ ಮೂಲಕ ಈ ಬಾರಿಯ ಐಪಿಎಲ್​ಗೂ ಮುನ್ನ ಎಲ್ಲರಿಗೂ ಶಾಕ್ ನೀಡಿದ್ದರು.

ಇದಾಗ್ಯೂ ಆರ್​ಸಿಬಿ ಜೊತೆಗಿನ ಎಬಿಡಿಯ ಒಡನಾಟ ಮಾತ್ರ ದೂರವಾಗಿರಲಿಲ್ಲ. ಏಕೆಂದರೆ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಎಬಿಡಿ ಬಗ್ಗೆ ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದರು. ನಾನು ಆರ್​ಸಿಬಿ ತಂಡದಲ್ಲಿ ಎಬಿ ಡಿವಿಲಿಯರ್ಸ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ಅವರೊಂದಿಗೆ ಮಾತನಾಡುತ್ತಿರುತ್ತೇನೆ. ವಿಶೇಷ ಎಂದರೆ ಎಬಿಡಿ ಈಗಲೂ ಆರ್​ಸಿಬಿ ತಂಡದ ಅಪ್​ಡೇಟ್​ಗಳನ್ನು ಪಡೆಯುತ್ತಿರುತ್ತಾರೆ ಎಂದು ಕೊಹ್ಲಿ ತಿಳಿಸಿದ್ದರು. ಅಲ್ಲದೆ ಮುಂದಿನ ವರ್ಷ ಅವರು ಹೊಸ ಪಾತ್ರದಲ್ಲಿ ತಂಡಕ್ಕೆ ಮರಳುವ ವಿಶ್ವಾಸವಿದೆ ಎಂದಿದ್ದರು.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇದೀಗ ವಿರಾಟ್ ಕೊಹ್ಲಿಯ ಈ ಹೇಳಿಕೆ ಬಗ್ಗೆ ಮಾತನಾಡಿರುವ ಎಬಿಡಿ, ನನ್ನ ಗೆಳೆಯ ಕೊಹ್ಲಿ ನಾನು ಮತ್ತೆ ಆರ್​ಸಿಬಿ ತಂಡವನ್ನು ಸೇರುವ ಬಗ್ಗೆ ಮಾತನಾಡಿದ್ದಕ್ಕೆ ನನಗೆ ಸಂತೋಷವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಮತ್ತೆ ಅಭಿಮಾನಿಗಳಿಂದ ತುಂಬಿ ತುಳುಕುವುದನ್ನು ನೋಡಲು ಬಯಸುತ್ತೇನೆ ಎಂದರು. ನಿಜ ಹೇಳಬೇಕೆಂದರೆ, ನಾನು ಇನ್ನೂ ಈ ಬಗ್ಗೆ ಏನನ್ನೂ ನಿರ್ಧರಿಸಿಲ್ಲ. ಆದರೆ ಮುಂದಿನ ವರ್ಷ ಐಪಿಎಲ್ ಇರಲಿದ್ದೇನೆ. ನನ್ನ ಪಾತ್ರ ಏನು ಎಂಬುದು ನನಗೆ ಗೊತ್ತಿಲ್ಲ. ಮುಂದಿನ ವರ್ಷ ಬೆಂಗಳೂರಿನಲ್ಲಿ ಕೆಲ ಪಂದ್ಯಗಳು ನಡೆಯಲಿದೆ ಎಂದು ಕೇಳಲ್ಪಟ್ಟೆ. ಹೀಗಾಗಿ ನನ್ನ ಎರಡನೇ ತವರಾಗಿರುವ ಬೆಂಗಳೂರಿಗೆ ಬರಲು ಬಯಸುತ್ತೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ಇದರೊಂದಿಗೆ ಎಬಿಡಿ ಐಪಿಎಲ್ 2023 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಇದಾಗ್ಯೂ ಅವರು ಆಟಗಾರನಾಗಿ ಇರಲಿದ್ದಾರಾ ಅಥವಾ ಮೆಂಟರ್ ಸ್ಥಾನ ಅಲಂಕರಿಸಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಎಬಿಡಿ ಮತ್ತೆ ಆರ್​ಸಿಬಿ ಪರ ಬ್ಯಾಟ್ ಬೀಸಿದರೂ ಅಚ್ಚರಿಪಡಬೇಕಿಲ್ಲ.

ಎಬಿ ಡಿವಿಲಿಯರ್ಸ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಡೆಲ್ಲಿ ಕ್ಯಾಪಿಟಲ್ಸ್‌ನೊಂದಿಗೆ ಆರಂಭಿಸಿದರು. 2011 ರಲ್ಲಿ RCB ಸೇರಿದ್ದ ಎಬಿಡಿ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು. ಅವರು RCB ಪರ 157 ಪಂದ್ಯಗಳಲ್ಲಿ 4522 ರನ್ ಗಳಿಸಿದ್ದಾರೆ. ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 38 ವರ್ಷದ ಡಿವಿಲಿಯರ್ಸ್ ಉತ್ತಮ ಟಿ20 ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಇದುವರೆಗೆ 340 ಟಿ20 ಪಂದ್ಯಗಳನ್ನಾಡಿರುವ ಎಬಿಡಿ 320 ಇನ್ನಿಂಗ್ಸ್‌ಗಳಲ್ಲಿ 37 ರ ಸರಾಸರಿಯಲ್ಲಿ 9424 ರನ್ ಗಳಿಸಿದ್ದಾರೆ. ಈ ವೇಳೆ 4 ಶತಕ ಮತ್ತು 69 ಅರ್ಧ ಶತಕ ಮೂಡಿಬಂದಿವೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:38 pm, Tue, 24 May 22

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ