‘ನಾನು ಹೇಳಿದ್ದು ಸುಳ್ಳು’; ಕೊಹ್ಲಿ ವಿಚಾರದಲ್ಲಿ ಉಲ್ಟಾ ಹೊಡೆದ ಎಬಿ ಡಿವಿಲಿಯರ್ಸ್

|

Updated on: Feb 09, 2024 | 3:58 PM

AB de Villiers: ವಿರಾಟ್ ಕೊಹ್ಲಿ ರಜೆ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ್ದರು. ಡಿವಿಲಿಯರ್ಸ್ ನೀಡಿದ ಈ ಮಾಹಿತಿಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಉಂಟಾಗಿತ್ತು.

‘ನಾನು ಹೇಳಿದ್ದು ಸುಳ್ಳು’; ಕೊಹ್ಲಿ ವಿಚಾರದಲ್ಲಿ ಉಲ್ಟಾ ಹೊಡೆದ ಎಬಿ ಡಿವಿಲಿಯರ್ಸ್
ವಿರಾಟ್ ಕೊಹ್ಲಿ ದಂಪತಿ, ಎಬಿ ಡಿವಿಲಿಯರ್ಸ್​
Follow us on

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಅನುಷ್ಕಾ ಶರ್ಮಾ (Anushka Sharma) ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕೊಹ್ಲಿ ಪ್ರಸ್ತುತ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಕೊಹ್ಲಿಯ ಆಪ್ತ ಸ್ನೇಹಿತ ಎಬಿ ಡಿವಿಲಿಯರ್ಸ್ (AB de Villiers) ತಮ್ಮ ಹೇಳಿಕೆಯಿಂದ ಇದೀಗ ಯು ಟರ್ನ್​ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿವಿಲಿಯರ್ಸ್, ಕೊಹ್ಲಿ ವಿಚಾರದಲ್ಲಿ ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು. ಕೊಹ್ಲಿ ಏಕೆ ರಜೆ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಎಲ್ಲೇ ಇದ್ದರು ಆರೋಗ್ಯವಾಗಿರಲಿ ಹಾಗೂ ಇನ್ನಷ್ಟು ಬಲಿಷ್ಠವಾಗಿ ತಂಡಕ್ಕೆ ವಾಪಸ್ಸಾಗಲಿ ಎಂದು ಆಶಿಸುತ್ತೇನೆ ಎಂದು ಡಿವಿಲಿಯರ್ಸ್​ ಹೇಳಿಕೊಂಡಿದ್ದಾರೆ.

ಡಿವಿಲಿಯರ್ಸ್ ಹೇಳಿದ್ದೇನು?

ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ನಡೆದಿವೆ. ಆದರೆ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಆ ನಂತರ ವಿರಾಟ್ ಕೊಹ್ಲಿ ಇದಕ್ಕಿದ್ದಂತೆ ಟೆಸ್ಟ್ ಸರಣಿಯಿಂದ ಹೊರಗುಳಿಯಲು ಕಾರಣವೇನು ಎಂಬುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಈ ನಡುವೆ ವಿರಾಟ್ ಕೊಹ್ಲಿಯ ಆಪ್ತಸ್ನೇಹಿತರಾಗಿರುವ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಎಬಿ ಡಿವಿಲಿಯರ್ಸ್​ ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಮಾತನಾಡುವ ವೇಳಿ ಕೊಹ್ಲಿ ತಂಡದಿಂದ ಹೊರಗುಳಿದಿರುವ ಬಗ್ಗೆ ಹೇಳಿಕೆ ನೀಡಿದ್ದರು. ಆ ಬಳಿಕ ಡಿವಿಲಿಯರ್ಸ್​ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತ್ತು.

IND vs ENG: ವಿರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್​ಡೇಟ್

ಡಿವಿಲಿಯರ್ಸ್​ ಈ ಹಿಂದೆ ನೀಡಿದ್ದ ಹೇಳಿಕೆ

ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು

ವಿರಾಟ್ ಕೊಹ್ಲಿ ರಜೆ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕೊಹ್ಲಿ ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ ಎಂದು ಡಿವಿಲಿಯರ್ಸ್ ಮಾಹಿತಿ ನೀಡಿದ್ದರು. ಆದರೀಗ ತಮ್ಮ ಹೇಳಿಕೆನ್ನು ಸುಳ್ಳು ಎಂದಿರುವ ಡಿವಿಲಿರ್ಸ್​, ‘ನಾನು ಈ ಹಿಂದೆಯೇ ಹೇಳಿದಂತೆ ವಿರಾಟ್ ಕುಟುಂಬಕ್ಕೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ವಿರಾಟ್ ಕೊಹ್ಲಿ ಬಗ್ಗೆ ನಾನು ಈ ಹಿಂದೆ ತಪ್ಪು ಮಾಹಿತಿ ಹಂಚಿಕೊಂಡಿದ್ದೆ. ವಿರಾಟ್ ಕೊಹ್ಲಿ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ನಾನು ನೀಡಿದ್ದ ಹೇಳಿಕೆ ಸುಳ್ಳಾಗಿತ್ತು. ವಿರಾಟ್ ಕೊಹ್ಲಿ ಟೀಂ ಇಂಡಿಯಾದಿಂದ ಏಕೆ ರಜೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ವಿರಾಟ್ ಕೊಹ್ಲಿ ಎಲ್ಲೇ ಇದ್ದರೂ ಅವರು ಚೆನ್ನಾಗಿ ಮತ್ತು ಆರೋಗ್ಯವಾಗಿರಲಿ ಎಂದು ನಾನು ಭಾವಿಸುತ್ತೇನೆ. ವಿರಾಮಕ್ಕೆ ಕಾರಣ ಏನೇ ಇರಲಿ, ವಿರಾಟ್ ಇನ್ನಷ್ಟು ಬಲದೊಂದಿಗೆ ತಂಡಕ್ಕೆ ಮರಳುತ್ತಾರೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ಡಿವಿಲಿಯರ್ಸ್​ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Fri, 9 February 24