AB de Villiers: ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಶಾಕ್: ಎಲ್ಲ ಮಾದರಿಯ ಕ್ರಿಕೆಟ್​ಗೆ ಎಬಿ ಡಿವಿಲಿಯರ್ಸ್ ವಿದಾಯ

AB de Villiers announces retirement: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರವಾಗಿ ಅನೇಕ ವರ್ಷಗಳಿಂದ ಎಬಿ ಡಿವಿಲಿಯರ್ಸ್ ಆಡುತ್ತಿದ್ದಾರೆ. ಆದರೆ, ಸದ್ಯ ಇವರು ಇನ್ನುಮುಂದೆ ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ.

AB de Villiers: ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಶಾಕ್: ಎಲ್ಲ ಮಾದರಿಯ ಕ್ರಿಕೆಟ್​ಗೆ ಎಬಿ ಡಿವಿಲಿಯರ್ಸ್ ವಿದಾಯ
AB de Villiers announces retirement
Follow us
TV9 Web
| Updated By: Vinay Bhat

Updated on:Nov 19, 2021 | 1:20 PM

ಕ್ರಿಕೆಟ್ ಲೋಕದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಮಿ. 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ (AB de Villiers) ಅವರು ಎಲ್ಲ ಮಾದರಿಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಎಬಿಡಿ (ABD) ಈ ಹಿಂದೆಯೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದರು. ಆದರೆ, ಇತರೆ ದೇಶೀಯ ಟೂರ್ನಮೆಂಟ್​ಗಳಲ್ಲಿ ಕಣಕ್ಕಿಳಿಯುತ್ತಿದ್ದರು. ಪ್ರಮುಖವಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರವಾಗಿ ಅನೇಕ ವರ್ಷಗಳಿಂದ ಆಡುತ್ತಿದ್ದಾರೆ. ಆದರೆ, ಸದ್ಯ ಇವರು ಇನ್ನುಮುಂದೆ ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದು, “ಇದು ನಂಬಲಾಗದ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಶುದ್ಧ ಆನಂದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ 37 ನೇ ವಯಸ್ಸಿನಲ್ಲಿ ಜ್ವಾಲೆಯು ಇನ್ನು ಮುಂದೆ ಪ್ರಕಾಶಮಾನವಾಗಿ ಉರಿಯುವುದಿಲ್ಲ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಟ್ವೀಟ್ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಈ ಬಗ್ಗೆ ಟ್ವೀಟ್ ಮಾಡಿದೆ.

ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟರ್ ಎಬಿ ಡಿವಿಲಿಯರ್ಸ್ 2018 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಸಂದರ್ಭ ದೇಶಿ ಪಂದ್ಯವನ್ನು ಹೊರತುಪಡಿಸಿ ಅಂತರರಾಷ್ಟ್ರೀಯ ಎಲ್ಲಾ ಮಾದರಿಯ ಕ್ರಿಕೆಟ್ ಆಟದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದಿದ್ದರು. ಅಂದರಂತೆ ಅವರು ಐಪಿಎಲ್ ಸೇರಿದಂತೆ ಇತರೆ ದೇಶೀಯ ಟೂರ್ನಿಯಲ್ಲಿ ಮಾತ್ರ ಆಟವಾಡುತ್ತಿದ್ದರು. ಅದರಲ್ಲೂ ಆರ್​ಸಿಬಿ ತಂಡಕ್ಕೆ ಎಬಿಡಿ ಕೊಡುಗೆ ಅಪಾರವಾಗಿದೆ. ಆದರೆ, ಆರ್​ಸಿಬಿ ತಂಡ ಕಪ್ ಗೆಲ್ಲುವ ಮುನ್ನವೇ ವಿದಾಯ ಘೋಷಿಸಿದ್ದಾರೆ ಎಂಬುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

“ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಪ್ರೀತಿ ತೋರಿದೆ. ಟೈಟಾನ್ಸ್, ಅಥವಾ ಪ್ರೋಟೀಸ್, ಅಥವಾ ಆರ್ ಸಿಬಿ, ಅಥವಾ ಪ್ರಪಂಚದಾದ್ಯಂತ ಆಡುತ್ತಿರಲಿ, ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ, ನಾನು ಯಾವಾಗಲೂ ಕೃತಜ್ಞನಾಗಿರುತ್ತೇನೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ ಎಂದು” ಎಂದು ಬರೆದುಕೊಂಡಿರುವ ಎಬಿ ಡಿವಿಲಿಯರ್ಸ್ ಹಿಂದಿ ಭಾಷೆಯಲ್ಲೂ ಧನ್ಯವಾದ ಎಂದು ಬರೆದಿದ್ದಾರೆ.

37ರ ಹರೆಯದ ಎಬಿಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಈವರೆಗೆ 114 ಟೆಸ್ಟ್, 228 ಏಕದಿನ ಮತ್ತು 78 ಟಿ-20 ಪಂದ್ಯಗಳನ್ನಾಡಿದ್ದಾರೆ. ಸುಮಾರು 17 ವರ್ಷಗಳ ಕಾಲ ವೃತ್ತಿ ಬದುಕನ್ನು ಕ್ರಿಕೆಟ್ ಮೈದಾನದಲ್ಲಿ ಕಳೆದಿರುವ ಸ್ಫೋಟಕ ಬ್ಯಾ ಡಿವಿಲಿಯರ್ಸ್, ನಿವೃತ್ತಿ ನೀಡಲು ಇದು ಸಕಾಲ ಎಂದಿದ್ದಾರೆ.

ಐಪಿಎಲ್​ನಲ್ಲಿ ಇವರು 184 ಪಂದ್ಯಗಳನ್ನು ಆಡಿದ್ದು 5162 ರನ್ ಬಾರಿಸಿದ್ದಾರೆ. ಒಟ್ಟು ಮೂರು ಶತಕ ಮತ್ತು 40 ಅರ್ಧಶತಕ ಕೂಡ ಸಿಡಿಸಿದ್ದಾರೆ. 251 ಸಿಕ್ಸರ್, 413 ಬೌಂಡರಿ ಬಾರಿಸಿದ ಸಾಧನೆ ಇವರದ್ದು.

Published On - 12:54 pm, Fri, 19 November 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್