AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIRAT KOHLI: ಈ ಸಲ ಕೊಹ್ಲಿ ಅಬ್ಬರಿಸಲಿದ್ದಾರೆ: ಬೌಲರ್​ಗಳಿಗೆ ಎಬಿಡಿ ಎಚ್ಚರಿಕೆ

IPL 2022: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಆಟಗಾರ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಇದುವರೆಗೆ ಐಪಿಎಲ್​ನಲ್ಲಿ 207 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 199 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ ಬರೋಬ್ಬರಿ 6283 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಐಪಿಎಲ್​ನಲ್ಲಿ 6 ಸಾವಿರ ರನ್​ ಪೂರೈಸಿದ ಏಕೈಕ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.

VIRAT KOHLI: ಈ ಸಲ ಕೊಹ್ಲಿ ಅಬ್ಬರಿಸಲಿದ್ದಾರೆ: ಬೌಲರ್​ಗಳಿಗೆ ಎಬಿಡಿ ಎಚ್ಚರಿಕೆ
AB De Villiers-virat kohli
TV9 Web
| Edited By: |

Updated on: Mar 30, 2022 | 8:09 PM

Share

ಐಪಿಎಲ್ ಸೀಸನ್ 15ನ (IPL 2022) ಮೊದಲ ಪಂದ್ಯದಲ್ಲಿ ಆರ್​ಸಿಬಿ (RCB) ಸೋಲನುಭವಿಸಿತು. ಆದರೆ ಈ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ (Virat Kohli) ಅಬ್ಬರಿಸಿದ್ದರು. ಅದರಲ್ಲೂ ಫಾರ್ಮ್​ ಸಮಸ್ಯೆಯಿಂದ ಬಳಲುತ್ತಿದ್ದ ಕೊಹ್ಲಿ ಕೇವಲ 29 ಎಸೆತಗಳಲ್ಲಿ 41 ಸಿಡಿಸಿದ್ದರು. ಇದೀಗ ಈ ಬಾರಿ ಕೊಹ್ಲಿಯನ್ನು ಕಟ್ಟಿಹಾಕಲು ಬೌಲರ್​​ಗಳಿಗೆ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (AB DE VILLIERS). ಐಪಿಎಲ್ ಸೀಸನ್ 15 ಬಗ್ಗೆ ಮಾತನಾಡಿರುವ ಎಬಿಡಿ, ಈ ಸೀಸನ್ ನಲ್ಲಿ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಲಿದ್ದಾರೆ. ಅವರನ್ನು ನಿಯಂತ್ರಿಸುವುದು ಬೌಲರ್​ಗಳಿಗೆ ಸವಾಲಾಗಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ.

ವಿರಾಟ್ ಕೊಹ್ಲಿಈ ಸೀಸನ್​ನಲ್ಲಿ ತಂಡದ ನಾಯಕನಲ್ಲ. ಇದರಿಂದ ಅವರ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಹೀಗಾಗಿ ಅವರು ನಿರಾಯಾಸವಾಗಿ ಬ್ಯಾಟಿಂಗ್ ಮಾಡಬೇಕಷ್ಟೇ. ಹಾಗಾಗಿ ವಿರಾಟ್ ಕೊಹ್ಲಿ ಈ ಸಲ ಸಾಕಷ್ಟು ರನ್ ಗಳಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ವರ್ಷ ಅವರ ಬ್ಯಾಟ್‌ನಿಂದ 600ಕ್ಕೂ ಹೆಚ್ಚು ರನ್ ಹರಿದು ಬರಲಿದೆ ಎಂಬ ನಿರೀಕ್ಷೆಯಿದೆ ಎಂದು ಎಬಿಡಿ ತಿಳಿಸಿದ್ದಾರೆ.

2016ರ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 16 ಪಂದ್ಯಗಳಲ್ಲಿ 973 ರನ್ ಗಳಿಸಿದ್ದರು. ಆ ವೇಳೆ 4 ಶತಕಗಳನ್ನು ಬಾರಿಸಿದ್ದರು. ಇದು ಐಪಿಎಲ್​ನ ದಾಖಲೆಯಾಗಿದೆ. ಹೀಗಾಗಿ ಈ ಬಾರಿ ವಿರಾಟ್ ಕೊಹ್ಲಿ 600ಕ್ಕೂ ಹೆಚ್ಚು ರನ್ ಗಳಿಸುವುದು ಕಷ್ಟವೇನಲ್ಲ. ಅದರಂತೆ ಈ ಬಾರಿ ಕೇವಲ ಬ್ಯಾಟ್ಸ್​ಮನ್ ಆಗಿ ಕಾಣಿಸಿಕೊಳ್ಳಲಿರುವ ವಿರಾಟ್ ಕೊಹ್ಲಿ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

ಐಪಿಎಲ್​ನಲ್ಲಿ (IPL Records) ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ದಾಖಲೆಗಳು: ಅತೀ ಹೆಚ್ಚು ರನ್​: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಆಟಗಾರ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಇದುವರೆಗೆ ಐಪಿಎಲ್​ನಲ್ಲಿ 207 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 199 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ ಬರೋಬ್ಬರಿ 6283 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಐಪಿಎಲ್​ನಲ್ಲಿ 6 ಸಾವಿರ ರನ್​ ಪೂರೈಸಿದ ಏಕೈಕ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.

ಅತ್ಯಧಿಕ ರನ್ ಬಾರಿಸಿದ ಕ್ಯಾಪ್ಟನ್: ಕಿಂಗ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ನಾಯಕ. ಅಂದರೆ 2013 ರಿಂದ 2021 ರವರೆಗೆ ಆರ್​ಸಿಬಿ ತಂಡದ ನಾಯಕರಾಗಿದ್ದ ಕೊಹ್ಲಿ 4881 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ.

ಅತ್ಯಧಿಕ ಶತಕ: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ಇದುವರೆಗೆ 5 ಶತಕಗಳನ್ನು ಸಿಡಿಸಿದ್ದಾರೆ.

ಅತ್ಯಧಿಕ ರನ್: ಐಪಿಎಲ್ ಸೀಸನ್​ವೊಂದರಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ 2016 ರಲ್ಲಿ 973 ರನ್​ ಕಲೆಹಾಕುವ ಮೂಲಕ ಈ ದಾಖಲೆ ಬರೆದಿದ್ದರು.

ಅತ್ಯಧಿಕ ಸಿಕ್ಸ್: ಐಪಿಎಲ್ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ಕೊಹ್ಲಿ 2016 ರಲ್ಲಿ 38 ಸಿಕ್ಸ್ ಬಾರಿಸುವ ಮೂಲಕ ಈ ದಾಖಲೆ ಬರೆದಿದ್ದರು.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!