AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ; ದಕ್ಷಿಣ ಆಫ್ರಿಕಾ ತಂಡಕ್ಕೆ ಎಬಿ ಡಿವಿಲಿಯರ್ಸ್​ ನಾಯಕ..!

AB de Villiers Comeback: ಮಾಜಿ ದಕ್ಷಿಣ ಆಫ್ರಿಕಾ ನಾಯಕ ಎಬಿ ಡಿವಿಲಿಯರ್ಸ್ ಅವರು ಜುಲೈ 2025 ರಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ನ ಎರಡನೇ ಆವೃತ್ತಿಯಲ್ಲಿ 'ಗೇಮ್ ಚೇಂಜರ್ಸ್ ಸೌತ್ ಆಫ್ರಿಕಾ ಚಾಂಪಿಯನ್ಸ್' ತಂಡದ ನಾಯಕರಾಗಿ ಆಡಲಿದ್ದಾರೆ. ಇದು ಅವರ ಅಂತರಾಷ್ಟ್ರೀಯ ನಿವೃತ್ತಿಯ ನಂತರದ ಮಹತ್ವದ ಕಮ್‌ಬ್ಯಾಕ್ ಆಗಿದೆ. ಡಿವಿಲಿಯರ್ಸ್ ಸ್ವತಃ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ; ದಕ್ಷಿಣ ಆಫ್ರಿಕಾ ತಂಡಕ್ಕೆ ಎಬಿ ಡಿವಿಲಿಯರ್ಸ್​ ನಾಯಕ..!
ಎಬಿ ಡಿವಿಲಿಯರ್ಸ್​
ಪೃಥ್ವಿಶಂಕರ
|

Updated on:Jan 28, 2025 | 4:14 PM

Share

ತನ್ನ ಸೌಮ್ಯ ಸ್ವಭಾವ ಹಾಗೂ ಹೊಡಿಬಡಿ ಆಟದ ಮೂಲಕವೇ ಇಡೀ ಕ್ರಿಕೆಟ್ ಲೋಕದಲ್ಲಿ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ಧೈವ ಎನಿಸಿಕೊಂಡಿರುವ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಆರ್​ಸಿಬಿಯ ಆಪ್ಬಾಂಧವ ಖ್ಯಾತಿಯ ಎಬಿ ಡಿವಿಲಿಯರ್ಸ್ ಇದೀಗ ಮತ್ತೊಮ್ಮೆ ಕ್ರಿಕೆಟ್ ಲೋಕದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಸುಮಾರು 3 ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಎಬಿ ಡಿವಿಲಿಯರ್ಸ್ ಶೀಘ್ರದಲ್ಲೇ ಮೈದಾನದಲ್ಲಿ ಬೌಲರ್‌ಗಳ ಬೆವರಿಳಿಸಲು ನಾನು ಸಿದ್ದ ಎಂಬ ಖಚಿತ ಮಾಹಿತಿ ನೀಡಿದ್ದಾರೆ. ಅಷ್ಟಕ್ಕೂ ಎಬಿ ಡಿವಿಲಿಯರ್ಸ್ ಯಾವ ಟೂರ್ನಿಯಲ್ಲಿ ಆಡಲಿದ್ದಾರೆ? ಯಾವ ತಂಡದಲ್ಲಿ ಆಡಲಿದ್ದಾರೆ? ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿರಬಹುದು. ಅದಕ್ಕೆಲ್ಲ ಉತ್ತರ ಇಲ್ಲಿದೆ.

ನಾಯಕನಾಗಿ ಕಣಕ್ಕಿಳಿಯುವ ಡಿವಿಲಿಯರ್ಸ್

2021 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದ ಎಬಿ ಡಿವಿಲಿಯರ್ಸ್ ಇದೀಗ ಮತ್ತೊಮ್ಮೆ ಕ್ರಿಕೆಟ್​ಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಆದರೆ, ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿಲ್ಲ. ಬದಲಿಗೆ, ಮುಂಬರುವ ಜುಲೈ ತಿಂಗಳಲ್ಲಿ ನಡೆಯಲ್ಲಿರುವ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ನ ಎರಡನೇ ಆವೃತ್ತಿಯಲ್ಲಿ ‘ಗೇಮ್ ಚೇಂಜರ್ಸ್ ಸೌತ್ ಆಫ್ರಿಕಾ ಚಾಂಪಿಯನ್ಸ್’ ತಂಡದ ಪರ ಡಿವಿಲಿಯರ್ಸ್ ಆಡುವುದನ್ನು ಕಾಣಬಹುದಾಗಿದೆ. ಆಟಗಾರನಾಗಿ ಮಾತ್ರವಲ್ಲದೆ ಡಿವಿಲಿಯರ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಸ್ವತಃ ಈ ವಿಚಾರವನ್ನು ಎಬಿ ಡಿವಿಲಿಯರ್ಸ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಡಿವಿಲಿಯರ್ಸ್, ‘ಇದು ಅಧಿಕೃತವಾಗಿದೆ, ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರಲ್ಲಿ ನಾನು ದಕ್ಷಿಣ ಆಫ್ರಿಕಾ ತಂಡಕ್ಕಾಗಿ ಆಡುತ್ತೇನೆ. ನಿಮ್ಮ ಕ್ಯಾಲೆಂಡರ್‌ನಲ್ಲಿ ದಿನಾಂಕವನ್ನು ಗುರುತು ಹಾಕಿಕೊಳ್ಳಿ ಈ ಪಂದ್ಯಾವಳಿಯು ಜುಲೈ 18 ರಿಂದ ಆಗಸ್ಟ್ 2 ರವರೆಗೆ ನಡೆಯುತ್ತದೆ. ಇತರ ಐದು ದೇಶಗಳ ಸ್ಟಾರ್ ಆಟಗಾರರೊಂದಿಗೆ ಆಡುವ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಡಿವಿಲಿಯರ್ಸ್ ಅಂತರಾಷ್ಟ್ರೀಯ ವೃತ್ತಿಜೀವನ

ಡಿವಿಲಿಯರ್ಸ್ ದಕ್ಷಿಣ ಆಫ್ರಿಕಾದ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. 114 ಟೆಸ್ಟ್ ಪಂದ್ಯಗಳಲ್ಲಿ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವ ಡಿವಿಲಿಯರ್ಸ್ 22 ಶತಕಗಳ ಸಹಾಯದಿಂದ 8765 ರನ್ ಗಳಿಸಿದರೆ, ಹಾಗೆಯೇ ಏಕದಿನದಲ್ಲಿ ಆಡಿದ 218 ಇನ್ನಿಂಗ್ಸ್‌ಗಳಲ್ಲಿ 9577 ರನ್ ಗಳಿಸಿದ್ದಾರೆ. ಇದರಲ್ಲಿ 25 ಶತಕಗಳು ಸೇರಿವೆ. ಟಿ20 ಮಾದರಿಯಲ್ಲೂ 78 ಪಂದ್ಯಗಳನ್ನಾಡಿರುವ ಅವರು 10 ಅರ್ಧಶತಕಗಳ ಸಹಾಯದಿಂದ 1672 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲೂ ಅಬ್ಬರಿಸಿರುವ ಎಬಿಡಿ ಆಡಿರುವ 184 ಪಂದ್ಯಗಳಲ್ಲಿ 5162 ರನ್ ಗಳಿಸಿದ್ದು, ಇದರಲ್ಲಿ 3 ಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 28 January 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ