AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಭಿಷೇಕ್ ಪೊರೆಲ್ ಅತ್ಯಾಚಾರ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್ ಆದೇಶದಂತೆ ಬಂಧನಕ್ಕೊಳಗಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ ದೂರಿನನ್ವಯ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ, ಖಾಸಗಿ ಚಿತ್ರಗಳ ಬೆದರಿಕೆ ಹಾಗೂ ದೈಹಿಕ ಕಿರುಕುಳ ಆರೋಪಗಳಿವೆ. ಪೊಲೀಸರ ತನಿಖಾ ವಿಳಂಬದ ನಂತರ, ಹೈಕೋರ್ಟ್ ತಕ್ಷಣ ಬಂಧನಕ್ಕೆ ಆದೇಶ ನೀಡಿತ್ತು. ಇದು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ
ಅಭಿಷೇಕ್ ಪೊರೆಲ್ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on: Aug 11, 2026 | 5:10 PM

Share

ಕೋಲ್ಕತ್ತಾ, ಆ.11: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಪರ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಆಡುತ್ತಿರುವ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ (Abishek Porel) ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೊಗ್ರಾ ಠಾಣೆ ಪೊಲೀಸರು ಅಭಿಷೇಕ್ ಪೊರೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಜೂನ್ ತಿಂಗಳಲ್ಲಿ ಮೊಗ್ರಾ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ವಿರುದ್ಧ ದೂರು ನೀಡಿದ್ದರು. ಕಳೆದ 3.5 ವರ್ಷಗಳಿಂದ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ, ಈಗ ಮದುವೆಗೆ ನಿರಾಕರಿಸಿ ಮೋಸ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಖಾಸಗಿ ಕ್ಷಣಗಳ ಫೋಟೋ ಹಾಗೂ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು, ಅದನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಏಪ್ರಿಲ್ 2, 2026 ರಂದು ದೆಹಲಿಗೆ ಹೋದಾಗ ತನಗೆ ಕೊಠಡಿಯಲ್ಲಿ ಬಂದಿಸಿ, ಆಹಾರ ನೀಡದೆ ಕಿರುಕುಳ ನೀಡಿದ್ದರಿಂದ ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದೂ ಯುವತಿ ದೂರಿದ್ದಾರೆ.

ಪೊಲೀಸರು ತನಿಖೆಯಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಅಭಿಷೇಕ್ ಪೊರೆಲ್ ಅವರನ್ನು ತಕ್ಷಣ ಬಂಧಿಸಲು ಹಾಗೂ ಅವರ ಎಲ್ಲಾ ಇಂಟರ್ನೆಟ್/ಇಲೆಕ್ಟ್ರಾನಿಕ್ ಸಾಧನಗಳನ್ನು (Electronic devices) ವಶಕ್ಕೆ ಪಡೆಯುವಂತೆ ಜುಲೈ 14 ರಂದು ಆದೇಶಿಸಿತ್ತು. ಆದೇಶದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: “ಮುಗಿಸುವುದಾಗಿ” ಬೆದರಿಕೆ: ರಾತ್ರೋರಾತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಂಗೂಲಿ!

23 ವರ್ಷದ ಅಭಿಷೇಕ್ ಪೊರೆಲ್ ದೇಶೀಯ ಕ್ರಿಕೆಟ್‌ನಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ. 2023 ರಿಂದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡುತ್ತಿರುವ ಇವರು, ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ವಿಕೆಟ್‌ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಈ ಘಟನೆಯು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us