IND vs ENG: ಅಭಿಷೇಕ್ ಆರ್ಭಟಕ್ಕೆ ತಲೆಬಾಗಿದ ಆಂಗ್ಲರು; ಭಾರತಕ್ಕೆ 7 ವಿಕೆಟ್ ಜಯ

IND vs ENG: ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಜಯ ಸಾಧಿಸಿದೆ. ಇಂಗ್ಲೆಂಡ್ ಕೇವಲ 132 ರನ್‌ಗಳಿಗೆ ಆಲೌಟ್ ಆದರೆ, ಭಾರತ 12.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟದೊಂದಿಗೆ ಗುರಿ ಮುಟ್ಟಿತು. ಅಭಿಷೇಕ್ ಶರ್ಮಾ ಅವರ 79 ರನ್‌ಗಳ ಸ್ಫೋಟಕ ಇನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಅವರ ಅದ್ಭುತ ಬೌಲಿಂಗ್ ಕೂಡ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

IND vs ENG: ಅಭಿಷೇಕ್ ಆರ್ಭಟಕ್ಕೆ ತಲೆಬಾಗಿದ ಆಂಗ್ಲರು; ಭಾರತಕ್ಕೆ 7 ವಿಕೆಟ್ ಜಯ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jan 22, 2025 | 10:23 PM

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಕೋಲ್ಕತ್ತಾದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 132 ರನ್ ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಭಾರತದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಅಭಿಷೇಕ್ ಶರ್ಮಾ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.

ಅರ್ಷದೀಪ್-ಚಕ್ರವರ್ತಿ ಬೌಲಿಂಗ್ ಮ್ಯಾಜಿಕ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಸಾಲ್ಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಬೆನ್ ಡಕೆಟ್​ ಕೂಡ 4 ರನ್​ಗಳಿಗೆ ಸುಸ್ತಾದರಯ. ಬ್ರೂಕ್ ಇನ್ನಿಂಗ್ಸ್ 17 ರನ್​​ಗಳಿಗೆ ಅಂತ್ಯವಾದರೆ, ಆ ನಂತರ ಬಂದ ಲಿವಿಂಗ್ಸ್ಟನ್ ಬಂದಷ್ಟೇ ವೇಗವಾಗಿ ಸೊನ್ನೆಗೆ ಪೆವಿಲಿಯನ್‌ ಸೇರಿಕೊಂಡರು. ಯುವ ಆಟಗಾರ ಬೆಥೆಲ್ ಕೂಡ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ಬಟ್ಲರ್ ಏಕಾಂಗಿ ಹೋರಾಟ

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಯಾವ ಬ್ಯಾಟರ್​ಗೂ ಭಾರತದ ಬೌಲರ್​ಗಳ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಇತ್ತ ಭಾರತದ ಪರ ಮಾರಕ ದಾಳಿ ನಡೆಸಿದ ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ಮಾಡಿದರು. ಅರ್ಷದೀಪ್ ಸಿಂಗ್ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್​ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಬೌಲಿಂಗ್ ಮಾಡಿ ತಲಾ 2 ವಿಕೆಟ್ ಪಡೆದರು.

ಭಾರತಕ್ಕೆ ಉತ್ತಮ ಆರಂಭ

ಇಂಗ್ಲೆಂಡ್ ನೀಡಿದ 132 ರನ್​ಗಳ ಕಡಿಮೆ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ, ಆರ್ಚರ್ ಮೊದಲು ಸ್ಯಾಮ್ಸನ್ (26) ಮತ್ತು ನಂತರ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಭಾರತದ ಇನ್ನಿಂಗ್ಸ್ ಅನ್ನು ಹಳಿತಪ್ಪಿಸಿದರು. ಆದರೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ನನ್ನು ದಂಡಿಸಿದ ಅಭಿಷೇಕ್ ಇದರೊಂದಿಗೆ ಅಂತರರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಜಂಟಿ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಅಭಿಷೇಕ್ ಅತಿ ವೇಗದ ಅರ್ಧಶತಕ

ಆದಿಲ್ ರಶೀದ್ ಎಸೆತದಲ್ಲಿ ವಿಕೆಟ್ ಒಪ್ಪಿಸುವುದಕ್ಕೂ ಮುನ್ನ ಅಭಿಷೇಕ್ ಕೇವಲ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್​ಗಳ ಸಹಿತ 79 ರನ್ ಕಲೆಹಾಕಿದರು. ಆ ನಂತರ ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು. ತಿಲಕ್ 16 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗಿ ಉಳಿದರೆ, ಹಾರ್ದಿಕ್ ನಾಲ್ಕು ಎಸೆತಗಳಲ್ಲಿ ಮೂರು ರನ್ ಗಳಿಸಿ ಅಜೇಯರಾಗಿ ಮರಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?