AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಸಿಕ್ಸರ್, 9 ಬೌಂಡರಿ.. ಅತಿ ವೇಗದ ಶತಕ ಬಾರಿಸಿದ ಅಭಿಷೇಕ್ ಶರ್ಮಾ..!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ, ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯತ್ವ ಪಡೆದ ದೇಶದ ಆಟಗಾರನಿಂದ ದಾಖಲಾದ ಅತಿ ವೇಗದ ಶತಕವಾಗಿದೆ. ಅವರು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಅವರ 31 ಎಸೆತಗಳ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಐತಿಹಾಸಿಕ ಸಾಧನೆ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ.

11 ಸಿಕ್ಸರ್, 9 ಬೌಂಡರಿ.. ಅತಿ ವೇಗದ ಶತಕ ಬಾರಿಸಿದ ಅಭಿಷೇಕ್ ಶರ್ಮಾ..!
ಅಭಿಷೇಕ್ ಶರ್ಮಾImage Credit source: BCCI X
ಪೃಥ್ವಿಶಂಕರ
|

Updated on:Sep 17, 2026 | 8:45 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದ ಅಭಿಷೇಕ್ ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಪೂರ್ಣ ಸದಸ್ಯತ್ವ ಪಡೆದಿರುವ ದೇಶಗಳ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ. ಅಭಿಷೇಕ್ ಶರ್ಮಾಗಿಂತ ಮೊದಲು, ಎಬಿ ಡಿವಿಲಿಯರ್ಸ್ ವೆಸ್ಟ್ ಇಂಡೀಸ್ ವಿರುದ್ಧ 31 ಎಸೆತಗಳಲ್ಲಿ ಏಕದಿನ ಶತಕ ಬಾರಿಸಿದ್ದರು. ಇದೀಗ 30 ಎಸೆತಗಳಲ್ಲಿ ಈ ಸಾಧನೆ ಮಾಡಿರುವ ಅಭಿಷೇಕ್ ಶರ್ಮಾ ಖಾತೆಗೆ ಈ ದಾಖಲೆ ಸೇರಿದೆ.

34 ಎಸೆತಗಳಲ್ಲಿ 108 ರನ್

ಆರಂಭದಿಂದಲೂ ಅಫ್ಘಾನಿಸ್ತಾನ್ ಬೌಲರ್​ಗಳನ್ನು ಬೆಂಡೆತ್ತಿದ ಅಭಿಷೇಕ್ ಶರ್ಮಾ ಪವರ್‌ಪ್ಲೇನಲ್ಲಿಯೇ ಐದು ಸಿಕ್ಸರ್ ಮತ್ತು ಐದು ಬೌಂಡರಿಗಳ ಸಹಿತ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕ ತಲುಪಿದ ನಂತರ ಇನ್ನಷ್ಟು ಅಪಾಯಕಾರಿಯಾದ ಅಭಿಷೇಕ್ ಮುಂದಿನ 14 ಎಸೆತಗಳಲ್ಲಿ ಉಳಿದ 50 ರನ್​ಗಳನ್ನು ಕಲೆಹಾಕಿ ತಮ್ಮ ಶತಕವನ್ನು ಪೂರೈಸಿದರು. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ ಅಭಿಷೇಕ್ 10 ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳನ್ನು ಬಾರಿಸಿದರು. ಅಂತಿಮವಾಗಿ ಅಭಿಷೇಕ್ 34 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 9 ಬೌಂಡರಿ ಸಹಿತ 108 ರನ್ ಬಾರಿಸಿ ಔಟಾದರು.

ಅತಿ ವೇಗದ ಟಿ20 ಶತಕ

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯತ್ವ ಹೊಂದಿರುವ ತಂಡಗಳಲ್ಲಿ ಅತಿ ವೇಗದ ಟಿ20 ಶತಕದ ಬಾರಿಸಿದ ಆಟಗಾರನೆಂಬ ದಾಖಲೆ ಅಭಿಷೇಕ್ ಶರ್ಮಾ ಪಾಲಾಗಿದೆ. ಇದಕ್ಕೂ ಮೊದಲು, ಈ ದಾಖಲೆಯನ್ನು ಜಿಂಬಾಬ್ವೆ ಸಿಕಂದರ್ ರಾಝಾ ಮತ್ತು ಫಿನ್ ಅಲೆನ್ ಹೊಂದಿದ್ದರು. ಇವರಿಬ್ಬರು ತಲಾ 33 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದಾಗ್ಯೂ, ಪೂರ್ಣ ಸದಸ್ಯತ್ವ ಹೊಂದಿಲ್ಲದ ತಂಡಗಳನ್ನು ಸೇರಿಸಿದರೆ, ಟಿ20ಯಲ್ಲಿ ವೇಗದ ಶತಕ ಬಾರಿಸಿದ ದಾಖಲೆ ಎಸ್ಟೋನಿಯಾದ ಸಾಹಿಲ್ ಚೌಹಾಣ್ ಹೆಸರಿನಲ್ಲಿದೆ ಅವರು ಕೇವಲ 27 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ರೋಹಿತ್ ದಾಖಲೆ ಮುರಿದ ಅಭಿಷೇಕ್

ಇದರ ಜೊತೆಗೆ ಅಭಿಷೇಕ್ ಶರ್ಮಾ ಭಾರತ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ಮುರಿದಿದ್ದಾರೆ. ಈ ಮೊದಲು ಅಂದರೆ ಒಂಬತ್ತು ವರ್ಷಗಳ ಹಿಂದೆ ರೋಹಿತ್ ಶರ್ಮಾ ಈ ದಾಖಲೆಯನ್ನು ನಿರ್ಮಿಸಿದ್ದರು. 2017 ರಲ್ಲಿ ಇಂದೋರ್‌ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈಗ, ಅಭಿಷೇಕ್ ಶರ್ಮಾ 30 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಭಾರತ ಪರ ಅತಿ ವೇಗದ ಟಿ20 ಅಂತರರಾಷ್ಟ್ರೀಯ ಶತಕ ಸಿಡಿಸಿದ ದಾಖಲೆಯನ್ನು ಮುರಿದಿದ್ದಾರೆ.

ಶುಭ್​ಮನ್​ ಗಿಲ್​ಗೆ 5000 ರೂ. ಬಹುಮಾನ ನೀಡಿದ ಅಭಿಷೇಕ್ ಶರ್ಮಾ ತಂದೆ

ವೇಗದ ಟಿ20 ಶತಕ ಬಾರಿಸಿದ ಆಟಗಾರರು (ಪೂರ್ಣ ಸದಸ್ಯ ರಾಷ್ಟ್ರ)

  • 30 ಎಸೆತಗಳು: ಅಭಿಷೇಕ್ ಶರ್ಮಾ (ಭಾರತ) vs ಅಫ್ಘಾನಿಸ್ತಾನ; 2026
  • 33 ಎಸೆತಗಳು: ಸಿಕಂದರ್ ರಜಾ (ಜಿಂಬಾಬ್ವೆ) vs ಗ್ಯಾಂಬಿಯಾ; 2024
  • 33 ಎಸೆತಗಳು: ಫಿನ್ ಅಲೆನ್ (ನ್ಯೂಜಿಲೆಂಡ್) vs ದಕ್ಷಿಣ ಆಫ್ರಿಕಾ; 2026
  • 35 ಎಸೆತಗಳು: ಡೇವಿಡ್ ಮಿಲ್ಲರ್ (ದಕ್ಷಿಣ ಆಫ್ರಿಕಾ) vs ಬಾಂಗ್ಲಾದೇಶ; 2017
  • 35 ಎಸೆತಗಳು: ರೋಹಿತ್ ಶರ್ಮಾ (ಭಾರತ) vs ಶ್ರೀಲಂಕಾ; 2017

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Thu, 17 September 26

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ