AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕ ಬಾರಿಸಿ ಓಂ ನಮಃ ಶಿವಾಯ ಮಂತ್ರ ಜಪಿಸಿದ ಅಭಿಷೇಕ್; ವಿಡಿಯೋ ನೋಡಿ

ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ದಾಖಲೆಯ ಶತಕ ಬಾರಿಸಿ ಇತಿಹಾಸ ನಿರ್ಮಿಸಿದರು. 34 ಎಸೆತಗಳಲ್ಲಿ 108 ರನ್ ಗಳಿಸಿದ ನಂತರ, ಅವರು 'ಓಂ ನಮಃ ಶಿವಾಯ' ಮಂತ್ರ ಜಪಿಸುವ ಮೂಲಕ ವಿಶಿಷ್ಟವಾಗಿ ಸಂಭ್ರಮಿಸಿದರು. ದೈನಂದಿನ ಧ್ಯಾನವು ಅವರ ಏಕಾಗ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಕ್ರೀಸ್‌ನಲ್ಲಿ ದೊಡ್ಡ ಹೊಡೆತಗಳನ್ನು ಹೊಡೆಯಲು ಅವರ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.

ಶತಕ ಬಾರಿಸಿ ಓಂ ನಮಃ ಶಿವಾಯ ಮಂತ್ರ ಜಪಿಸಿದ ಅಭಿಷೇಕ್; ವಿಡಿಯೋ ನೋಡಿ
ಅಭಿಷೇಕ್ ಶರ್ಮಾ
ಪೃಥ್ವಿಶಂಕರ
|

Updated on: Sep 17, 2026 | 9:44 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ರನ್​ಗಳ ಮಳೆ ಹರಿಸಿದರು. ಕೇವಲ 30 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಅಭಿಷೇಕ್ ಹೊಸ ಇತಿಹಾಸವನ್ನು ಸೃಷ್ಟಿಸಿದರು. ಅಭಿಷೇಕ್ ತಮ್ಮ ಇನ್ನಿಂಗ್ಸ್‌ನಲ್ಲಿ 34 ಎಸೆತಗಳನ್ನು ಎದುರಿಸಿದ ಅಭಿಷೇಕ್ 11 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳ ಸಹಿತ 108 ರನ್ ಬಾರಿಸಿದರು. ಈ ಪಂದ್ಯದಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಸಿಡಿಸುವುದರ ಮೇಲೆ ಹೆಚ್ಚು ಗಮನ ಹರಿಸಿದ್ದ ಅಭಿಷೇಕ್​ಗೆ ತಾನು ಶತಕ ಬಾರಿಸಿದರ ಅರಿವೂ ಇರಲಿಲ್ಲ. ಇಡೀ ಕ್ರೀಡಾಂಗಣದಲ್ಲಿ ನೆರೆದಿದ್ದವರೆಲ್ಲ ಎದ್ದು ನಿಂತು ಚಪ್ಪಾಳೆ ತಟ್ಟುವುದನ್ನು ಅಚ್ಚರಿಯಿಂದ ನೋಡಿದ ಅಭಿಷೇಕ್​ಗೆ ಅದಾದ ಬಳಿಕ ತಾನು ಶತಕ ಪೂರೈಸಿರುವುದು ಅರಿವಿಗೆ ಬಂತು.

30 ಎಸೆತಗಳಲ್ಲಿ ದಾಖಲೆಯ ಶತಕ ಬಾರಿಸಿದ ಅಭಿಷೇಕ್ ಈ ಬಾರಿ ವಿಭಿನ್ನವಾಗಿ ಶತಕವನ್ನು ಸಂಭ್ರಮಿಸಿದರು. ವಾಸ್ತವವಾಗಿ, ಅಭಿಷೇಕ್ ಶತಕ ಗಳಿಸಿದ ತಕ್ಷಣ ಮೈದಾನದಲ್ಲಿ ಕುಳಿತು ಓಂ ನಮಃ ಶಿವಾಯ ಮಂತ್ರವನ್ನು ಜಪಿಸಲು ಪ್ರಾರಂಭಿಸಿದರು. ಇದೇ ಮೊದಲ ಬಾರಿಗೆ ಅಭಿಷೇಕ್ ಈ ರೀತಿಯಾಗಿ ಶತಕವನ್ನು ಆಚರಿಸಿದ್ದು. ಅಷ್ಟಕ್ಕೂ ಅಭಿಷೇಕ್ ಶರ್ಮಾ ಏಕೆ ಹೀಗೆ ಆಚರಿಸಿದರು ಎಂಬುದಕ್ಕೆ ಕಾರಣವೂ ಇದೆ.

ಏಕಾಗ್ರತೆಗಾಗಿ ಧ್ಯಾನದ ಮೊರೆ

ಅಭಿಷೇಕ್ ಶರ್ಮಾ ಈಗ ಧ್ಯಾನ ಮಾಡಲು ಪ್ರಾರಂಭಿಸಿದ್ದಾರೆ. ಪ್ರತಿದಿನ ಧ್ಯಾನ ಮಾಡುವ ಮೂಲಕ ಅಭಿಷೇಕ್ ತಮ್ಮ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಅವರು ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು ಧ್ಯಾನ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಅಭಿಷೇಕ್ ಶರ್ಮಾ ಬ್ಯಾಟಿಂಗ್​ಗೆ ಬರುವುದಕ್ಕೂ ಮೊದಲು ತಮ್ಮ ಬ್ಯಾಟ್‌ನಿಂದ ಚೆಂಡನ್ನು ಹೊಡೆಯುತ್ತಲೇ ಇರುತ್ತಾರೆ. ಅವರ ಗಮನವು ಚೆಂಡಿನ ಮೇಲೆ ಮಾತ್ರ ಇರುತ್ತದೆ. ಚೆಂಡಿನ ಮೇಲೆ ಕೇಂದ್ರೀಕರಿಸುವ ಈ ಕೌಶಲ್ಯವೇ ಅವರು ಕ್ರೀಸ್‌ಗೆ ಹೆಜ್ಜೆ ಹಾಕಿದ ತಕ್ಷಣ ದೊಡ್ಡ ಹೊಡೆತಗಳನ್ನು ಹೊಡೆಯಲು ಸಹಾಯ ಮಾಡುತ್ತದೆ.

11 ಸಿಕ್ಸರ್, 9 ಬೌಂಡರಿ.. ಅತಿ ವೇಗದ ಶತಕ ಬಾರಿಸಿದ ಅಭಿಷೇಕ್ ಶರ್ಮಾ..!

ಭಾರತದ ಇನ್ನಿಂಗ್ಸ್ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಭಾರತದ ಪರ ಅಭಿಷೇಕ್ ಶರ್ಮಾ 108 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ಸಂಜು ಸ್ಯಾಮ್ಸನ್ 50 ರನ್ ಬಾರಿಸಿದರು. ನಾಯಕ ಶ್ರೇಯಸ್ ಅಯ್ಯರ್ 29 ರನ್​ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಅಫ್ಘಾನಿಸ್ತಾನ ಪರ ಅಜ್ಮತುಲ್ಲಾ ಒಮರ್‌ಜೈ 2 ವಿಕೆಟ್ ಪಡೆದರೆ, ರಶೀದ್ ಖಾನ್ ಮತ್ತು ಅಬ್ದುಲ್ಲಾ ತಲಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್