
ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 2026 ರ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲದಿರಬಹುದು, ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 2026 ರ ಐಪಿಎಲ್ನಲ್ಲೂ (IPL 2026) ಅದೇ ಆಟವನ್ನು ಮುಂದುವರೆಸಲು ಅಭಿಷೇಕ್ ಶರ್ಮಾ ಸಜ್ಜಾಗಿದ್ದಾರೆ. ಲೀಗ್ನ ಮೊದಲ ಪಂದ್ಯದಲ್ಲೇ ಆರ್ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (RCB vs SRH) ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಆದರೆ ಅದಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ 94 ರನ್ಗಳ ಅಬ್ಬರದ ಇನ್ನಿಂಗ್ಸ್ ಆಡಿದರು.
ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 21 ರ ಶನಿವಾರದಂದು ತಮ್ಮ ತವರು ಮೈದಾನವಾದ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಮೊದಲ ಅಭ್ಯಾಸ ಪಂದ್ಯವನ್ನು ಆಡಿತು. ತಂಡದ ಸದಸ್ಯರ ನಡುವೆ ನಡೆದ ಈ ಪಂದ್ಯದಲ್ಲಿ ಅಭಿಷೇಕ್ , ಇಶಾನ್, ಹೆನ್ರಿಕ್ ಕ್ಲಾಸೆನ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್‌ರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ಎಲ್ಲರೂ ಒಂದೇ ತಂಡದಲ್ಲಿದ್ದರು.
ಎಸ್ಆರ್ಹೆಚ್ ಎ ಮತ್ತು ಎಸ್ಆರ್ಹೆಚ್ ಬಿ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಹೆಚ್ ಎ ತಂಡದ ಪರ ಇಶಾನ್ ಕಿಶನ್ ಮತ್ತು ಅಭಿಷೇಕ್ ಜೋಡಿ ಇನ್ನಿಂಗ್ಸ್ ಆರಂಭಿಸಿತು. ಆದಾಗ್ಯೂ ಇಶಾನ್ ಕಿಶನ್ 14 ಎಸೆತಗಳಲ್ಲಿ ಕೇವಲ 18 ರನ್‌ಗಳಿಸಿ ಔಟಾದರು. ಇತ್ತ ಅಬ್ಬರದ ಆರಂಭ ಪಡೆದ ಅಭಿಷೇಕ್ ಶರ್ಮಾ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಇದರ ಪರಿಣಾಮವಾಗಿ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಶತಕದಂಚಿನಲ್ಲಿ ಎಡವಿದ ಅಭಿಷೇಕ್ ಕೇವಲ 42 ಎಸೆತಗಳಲ್ಲಿ 94 ರನ್ ಗಳಿಸಿದರು.
ಅಭಿಷೇಕ್ ಶರ್ಮಾ ಜೊತೆಗೆ ಹೆನ್ರಿಕ್ ಕ್ಲಾಸೆನ್ ಕೂಡ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರ ಆಟದಿಂದಾಗಿ ಈ ಎಸ್ಆರ್ಹೆಚ್ ಎ ತಂಡವು ಕೇವಲ 13 ಓವರ್‌ಗಳಲ್ಲಿ 160 ಕ್ಕಿಂತ ಹೆಚ್ಚು ಸ್ಕೋರ್ ಕಲೆಹಾಕಿತು. ಅಂತಿಮವಾಗಿ 21 ಓವರ್‌ಗಳಲ್ಲಿ ಎಸ್ಆರ್ಹೆಚ್ ಎ ತಂಡ 9 ವಿಕೆಟ್ಗಳ ನಷ್ಟಕ್ಕೆ 253 ರನ್ ಕಲೆಹಾಕಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:32 pm, Sat, 21 March 26