AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಸೂಪರ್ ಸ್ಟಾರ್ ಅಭಿಷೇಕ್ ಶರ್ಮಾಗೆ ಏಕದಿನ ತಂಡದಲ್ಲೂ ಸ್ಥಾನ; ರೋಹಿತ್,ಜೈಸ್ವಾಲ್​ ಕಥೆ ಏನು?

Abhishek Sharma: ಏಷ್ಯಾಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಟಿ20 ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸದ ಏಕದಿನ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಅವರ ಭರ್ಜರಿ ರನ್‌ಗಳ ಸುರಿಮಳೆ ಮತ್ತು ಅದ್ಭುತ ಸ್ಟ್ರೈಕ್ ರೇಟ್ ಬಿಸಿಸಿಐ ಆಯ್ಕೆ ಸಮಿತಿಯ ಗಮನ ಸೆಳೆದಿದೆ. ಆದರೆ, ಈ ಸೇರ್ಪಡೆಯಿಂದ ಯಾರು ತಂಡದಿಂದ ಹೊರಗುಳಿಯುತ್ತಾರೆ ಎಂಬುದು ಕುತೂಹಲಕಾರಿ ವಿಷಯ.

ಟಿ20 ಸೂಪರ್ ಸ್ಟಾರ್ ಅಭಿಷೇಕ್ ಶರ್ಮಾಗೆ ಏಕದಿನ ತಂಡದಲ್ಲೂ ಸ್ಥಾನ; ರೋಹಿತ್,ಜೈಸ್ವಾಲ್​ ಕಥೆ ಏನು?
Abhishek Sharma
ಪೃಥ್ವಿಶಂಕರ
|

Updated on: Sep 24, 2025 | 6:54 PM

Share

ಟಿ20 ಕ್ರಿಕೆಟ್​​ನಲ್ಲಿ ರನ್​ಗಳ ಮಳೆ ಸುರಿಸುತ್ತಿರುವ ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಶೀಘ್ರದಲ್ಲೇ ಏಕದಿನ ತಂಡಕ್ಕೂ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಏಷ್ಯಾಕಪ್‌ನಲ್ಲಿ (Asia Cup) ಪಾಕಿಸ್ತಾನ ವಿರುದ್ಧ ಭರ್ಜರಿ ಇನ್ನಿಂಗ್ಸ್ ಆಡಿದ ನಂತರ, ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದಲ್ಲಿ ಸೇರಿಸಿಕೊಳ್ಳಬಹುದು. ಬಿಸಿಸಿಐ (BCCI) ಆಯ್ಕೆ ಸಮಿತಿ ಈ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿದೆ ಎಂದು ವರದಿಯಾಗಿದೆ. ಟೀಂ ಇಂಡಿಯಾ ಪರ 21 ಟಿ20ಪಂದ್ಯಗಳನ್ನು ಆಡಿರುವ ಅಭಿಷೇಕ್ ಶರ್ಮಾ ಏಷ್ಯಾಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದನ್ನು ಪರಿಗಣಿಸಿ, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಪರಿಗಣಿಸಬಹುದು.

ಆಸ್ಟ್ರೇಲಿಯಾ ಪ್ರವಾಸಕ್ಕೆ ಅಭಿಷೇಕ್?

ವರದಿಗಳ ಪ್ರಕಾರ, ಮುಂದಿನ ತಿಂಗಳ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಸೇರಿಸಿಕೊಳ್ಳಬಹುದು. ಭಾರತ ಆಸ್ಟ್ರೇಲಿಯಾದಲ್ಲಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನು ಆಡಲಿದೆ. ಏಕದಿನ ಸರಣಿ ಅಕ್ಟೋಬರ್ 19 ರಂದು ಆರಂಭವಾಗಲಿದೆ.

ಟೈಮ್ಸ್ ಇಂಡಿಯಾ ವರದಿಗಳ ಪ್ರಕಾರ, ಟಿ20 ಕ್ರಿಕೆಟ್​​ನಲ್ಲಿ ಅಭಿಷೇಕ್ ಅವರ ಪ್ರದರ್ಶನದಿಂದ ಪ್ರಭಾವಿತರಾಗಿರುವ ತಂಡದ ಆಡಳಿತ ಮಂಡಳಿ ಅಭಿಷೇಕ್​ಗೆ ಏಕದಿನ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿವೆ. ಅಭಿಷೇಕ್ ಶರ್ಮಾ ಪ್ರಸ್ತುತ ಏಷ್ಯಾಕಪ್​ನಲ್ಲಿ ಅಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಆಡಿರುವ ನಾಲ್ಕು ಪಂದ್ಯಗಳಲ್ಲಿ 208.43 ಸ್ಟ್ರೈಕ್ ರೇಟ್​ನಲ್ಲಿ 173 ರನ್ ಗಳಿಸಿದ್ದಾರೆ.

ನೆಟ್ಸ್‌ನಲ್ಲಿ ಗಂಟೆಗಟ್ಟಲೆ ಅಭ್ಯಾಸ

ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ನೆಟ್ಸ್‌ನಲ್ಲಿ ಗಂಟೆಗಟ್ಟಲೆ ಅಭ್ಯಾಸ ಮಾಡುತ್ತಾರೆ. ಅವರ ಲಿಸ್ಟ್ ಎ ದಾಖಲೆಯೂ ಸಹ ಅದ್ಭುತವಾಗಿದೆ. ಆಡಿರುವ 61 ಪಂದ್ಯಗಳಲ್ಲಿ 35.33 ಸರಾಸರಿ ಮತ್ತು 99.21 ಸ್ಟ್ರೈಕ್ ರೇಟ್‌ನಲ್ಲಿ 2014 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 38 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ನ ಸೂಪರ್ ಫೋರ್ ಪಂದ್ಯದಲ್ಲಿ, ಅಭಿಷೇಕ್ ಶರ್ಮಾ ಮತ್ತು ಅವರ ಬಾಲ್ಯದ ಗೆಳೆಯ ಶುಭ್​ಮನ್ ಗಿಲ್ ಮೊದಲ ವಿಕೆಟ್‌ಗೆ ಕೇವಲ 9.5 ಓವರ್‌ಗಳಲ್ಲಿ 105 ರನ್‌ಗಳನ್ನು ಸೇರಿಸಿದರು. ಇದು ಭಾರತವು ಪಾಕಿಸ್ತಾನವನ್ನು ಸುಲಭವಾಗಿ ಸೋಲಿಸಲು ಸಹಾಯ ಮಾಡಿತು.

ICC T20 Ranking: ಟಿ20 ರ‍್ಯಾಂಕಿಂಗ್​ನಲ್ಲಿ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ತಂಡದಿಂದ ಯಾರು ಹೊರಗುಳಿಯುತ್ತಾರೆ?

ಅಭಿಷೇಕ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡಕ್ಕೆ ಸೇರಿಸಿದರೆ, ಯಾರನ್ನು ತಂಡದಿಂದ ಕೈಬಿಡಲಾಗುತ್ತದೆ? ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿದೆ. 2027 ರಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಆತಿಥ್ಯ ವಹಿಸಲಿರುವ ಮುಂದಿನ ಏಕದಿನ ವಿಶ್ವಕಪ್‌ಗೆ ಮೊದಲು ಭಾರತ ಇನ್ನೂ 27 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಏಕದಿನ ಪಂದ್ಯಗಳಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಶುಭ್​ಮನ್ ಗಿಲ್ ಮೊದಲ ಆಯ್ಕೆಯಾಗಿದ್ದಾರೆ.

ಈಗ, ಅಭಿಷೇಕ್ ಶರ್ಮಾ ಏಕದಿನದಲ್ಲಿ ಶುಭ್​ಮನ್ ಗಿಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸಿದರೆ, ರೋಹಿತ್ ಶರ್ಮಾ ಕಥೆ ಏನಾಗುತ್ತದೆ? ನಾಯಕ ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನ ಕೊನೆಗೊಳ್ಳುತ್ತದೆಯೇ? ಈ ವರ್ಷದ ಆರಂಭದಲ್ಲಿ ನಾಗ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್‌ ಅವರ ಕಥೆ ಏನು? ಎಂಬುದು ಇನ್ನೊಂದು ಪ್ರಶ್ನೆಯಾಗಿದೆ. ಅಭಿಷೇಕ್ ತಂಡಕ್ಕೆ ಸೇರ್ಪಡೆಯೊಂದಿಗೆ, ಆಯ್ಕೆದಾರರು ಮೂರು ಪಂದ್ಯಗಳ ಸರಣಿಗೆ ಎಷ್ಟು ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಆಯ್ಕೆ ಮಾಡುತ್ತಾರೆ? ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ