AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಮೊದಲ ಪಂದ್ಯದಲ್ಲಿ ಸೊನ್ನೆ; 2ನೇ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್..!

Abhishek Sharma Maiden T20I Hundred: ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆಯಲ್ಲಿ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಅಂದರೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದ ಅಭಿಷೇಕ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ರೌದ್ರಾವತಾರ ತಾಳಿದ್ದಾರೆ.

IND vs ZIM: ಮೊದಲ ಪಂದ್ಯದಲ್ಲಿ ಸೊನ್ನೆ; 2ನೇ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್..!
ಅಭಿಷೇಕ್ ಶರ್ಮಾ
ಪೃಥ್ವಿಶಂಕರ
|

Updated on:Jul 07, 2024 | 6:02 PM

Share

ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆಯಲ್ಲಿ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಅಂದರೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದ ಅಭಿಷೇಕ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ರೌದ್ರಾವತಾರ ತಾಳಿದ್ದಾರೆ. ಈ ಪಂದ್ಯದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಖಾತೆ ತೆರೆದಿದ್ದ ಅಭಿಷೇಕ್ ಶರ್ಮಾ, ಸತತ ಮೂರು ಸಿಕ್ಸರ್​ ಸಿಡಿಸುವ ಮೂಲಕ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಪೂರೈಸಿದರು.

46 ಎಸೆತಗಳಲ್ಲಿ 100 ರನ್

ಅಭಿಷೇಕ್ ಶರ್ಮಾ ತಮ್ಮ ವೃತ್ತಿಜೀವನದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದರು. ಕೇವಲ 46 ಎಸೆತಗಳಲ್ಲಿ 100 ರನ್ ಗಳಿಸಿದ ಅಭಿಷೇಕ್ ತಮ್ಮ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಹೊಡೆದರು. ಇದಲ್ಲದೆ ಶರ್ಮಾ ಎರಡನೇ ವಿಕೆಟ್‌ಗೆ ಗಾಯಕ್ವಾಡ್ ಅವರೊಂದಿಗೆ 137 ರನ್‌ಗಳ ಜೊತೆಯಾಟವನ್ನು ನಡೆಸಿದರು.ಇದರೊಂದಿಗೆ ಅಭಿಷೇಕ್ ಶರ್ಮಾ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ

ಅದೇ ಸಮಯದಲ್ಲಿ, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ, ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ದಾಖಲೆಯೂ ಅವರ ಖಾತೆ ಸೇರಿಕೊಂಡಿದೆ. ಈ ಮೊದಲು ಈ ದಾಖಲೆ ದೀಪಕ್ ಹೂಡಾ ಹೆಸರಿನಲ್ಲಿತ್ತು. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಂತರ ಅವರು ಮೂರನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು.

ಭಾರತಕ್ಕೆ ಕಳಪೆ ಆರಂಭ

ಎಂದಿನಂತೆ ಈ ಪಂದ್ಯದಲ್ಲೂ ಶುಭ್‌ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ಆದರೆ ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ ಕೇವಲ 10 ರನ್ ಗಳಿಸುವಷ್ಟರಲ್ಲಿ ಶುಭ್‌ಮನ್ ಗಿಲ್ ರೂಪದಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಕೆಟ್ಟ ಆರಂಭದ ನಂತರ, ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದ ಇನ್ನಿಂಗ್ಸ್ ನಿಭಾಯಿಸಿ ತಮ್ಮ ಎರಡನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Sun, 7 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ