ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆಯಲ್ಲಿ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಅಂದರೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದ ಅಭಿಷೇಕ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ರೌದ್ರಾವತಾರ ತಾಳಿದ್ದಾರೆ. ಈ ಪಂದ್ಯದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಖಾತೆ ತೆರೆದಿದ್ದ ಅಭಿಷೇಕ್ ಶರ್ಮಾ, ಸತತ ಮೂರು ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಪೂರೈಸಿದರು.
ಅಭಿಷೇಕ್ ಶರ್ಮಾ ತಮ್ಮ ವೃತ್ತಿಜೀವನದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದರು. ಕೇವಲ 46 ಎಸೆತಗಳಲ್ಲಿ 100 ರನ್ ಗಳಿಸಿದ ಅಭಿಷೇಕ್ ತಮ್ಮ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಹೊಡೆದರು. ಇದಲ್ಲದೆ ಶರ್ಮಾ ಎರಡನೇ ವಿಕೆಟ್‌ಗೆ ಗಾಯಕ್ವಾಡ್ ಅವರೊಂದಿಗೆ 137 ರನ್‌ಗಳ ಜೊತೆಯಾಟವನ್ನು ನಡೆಸಿದರು.ಇದರೊಂದಿಗೆ ಅಭಿಷೇಕ್ ಶರ್ಮಾ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
Starting off in a way he is best known for 🔥🙌#SonySportsNetwork #ZIMvIND #TeamIndia | @IamAbhiSharma4 pic.twitter.com/10TXtOta1N
— Sony Sports Network (@SonySportsNetwk) July 7, 2024
ಅದೇ ಸಮಯದಲ್ಲಿ, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ, ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ದಾಖಲೆಯೂ ಅವರ ಖಾತೆ ಸೇರಿಕೊಂಡಿದೆ. ಈ ಮೊದಲು ಈ ದಾಖಲೆ ದೀಪಕ್ ಹೂಡಾ ಹೆಸರಿನಲ್ಲಿತ್ತು. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಂತರ ಅವರು ಮೂರನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು.
Abhishek Sharma has arrived on the big stage 🔥
A sensational 💯 in just his second T20I 🤩#SonySportsNetwork #ZIMvIND #TeamIndia pic.twitter.com/3Zq0JkdqHR
— Sony Sports Network (@SonySportsNetwk) July 7, 2024
ಎಂದಿನಂತೆ ಈ ಪಂದ್ಯದಲ್ಲೂ ಶುಭ್‌ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ಆದರೆ ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ ಕೇವಲ 10 ರನ್ ಗಳಿಸುವಷ್ಟರಲ್ಲಿ ಶುಭ್‌ಮನ್ ಗಿಲ್ ರೂಪದಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಕೆಟ್ಟ ಆರಂಭದ ನಂತರ, ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದ ಇನ್ನಿಂಗ್ಸ್ ನಿಭಾಯಿಸಿ ತಮ್ಮ ಎರಡನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Sun, 7 July 24