
ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ, ಬೌಲಿಂಗ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಯುವ ಆಲ್ ರೌಂಡರ್, ಮುಂಬರುವ ದಿನಗಳಲ್ಲಿ “ಇನ್ನಷ್ಟು ಬಲಿಷ್ಠವಾಗಿ ಕಮ್‌ಬ್ಯಾಕ್” ಮಾಡುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಝಿಂಬಾಬ್ವೆ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಭಿಷೇಕ್ ಶರ್ಮಾ, ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಕಠಿಣ ಪರಿಶ್ರಮದೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಕಂಬ್ಯಾಕ್ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ಕಳಪೆ ಬ್ಯಾಟಿಂಗ್ ಪ್ರದರ್ಶನದ ಬೆನ್ನಲ್ಲೇ ಅಭಿಮಾನಿಗಳನ್ನು ಉದ್ದೇಶಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಅಭಿಷೇಕ್, “ಚಿನ್ನದಂತಹ ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ, ಆದರೆ ಇದು ಕಲಿಕೆಯ ಹಾದಿ. ಮುಂಬರುವ ದಿನಗಳಲ್ಲಿ ಕಠಿಣ ಪರಿಶ್ರಮದೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಕಂಬ್ಯಾಕ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇಂತಹದೊಂದು ಪೋಸ್ಟ್ ಹಂಚಿಕೊಳ್ಳಲು ಝಿಂಬಾಬ್ವೆ ವಿರುದ್ಧದ ಕಳಪೆ ಪ್ರದರ್ಶನವೇ ಕಾರಣ. ಏಕೆಂದರೆ ಮೂರು ಪಂದ್ಯಗಳಿಂದ ಅಭಿಷೇಕ್ ಶರ್ಮಾ ಕಲೆಹಾಕಿದ ಒಟ್ಟು ರನ್ಗಳು ಕೇವಲ 11 ಮಾತ್ರ.
ಮೂರು ಪಂದ್ಯಗಳಿಂದ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದ ಅಭಿಷೇಕ್ ಶರ್ಮಾ ಅವರ ಫಾರ್ಮ್ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಥಿರತೆಯ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.
ಬ್ಯಾಟಿಂಗ್ ಕೈಕೊಟ್ಟರೂ, ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ತಮ್ಮ ಅದ್ಭುತ ಎಡಗೈ ಸ್ಪಿನ್ ಬೌಲಿಂಗ್ ಮೂಲಕ ಇತಿಹಾಸ ನಿರ್ಮಿಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.
ಝಿಂಬಾಬ್ವೆಯ ಕೆಳ ಕ್ರಮಾಂಕದ ಬ್ಯಾಟರ್‌ಗಳನ್ನು ಕರಾರುವಾಕ್ ದಾಳಿಯ ಮೂಲಕ ಪೆವಿಲಿಯನ್ಗೆ ಕಳುಹಿಸಿದ್ದ ಅಭಿಷೇಕ್, 2.5 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದ್ದರು.
ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
ಈ ಮೂರು ವಿಕೆಟ್ಗಳೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಮೊದಲ ಭಾರತೀಯ ಆರಂಭಿಕ ಬ್ಯಾಟ್ಸ್‌ಮನ್ ಎಂಬ ಅಪರೂಪದ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.