IND vs ZIM: ಟೀಮ್ ಇಂಡಿಯಾಗೆ ಸ್ಪೋಟಕ ಆರಂಭಿಕ ಎಂಟ್ರಿ

India tour of Zimbabwe: ಝಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ಹೊರಗುಳಿದಿದ್ದಾರೆ. ಇದಾಗ್ಯೂ ಮೂರನೇ ಪಂದ್ಯದ ವೇಳೆ ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಹರ್ಷಿತ್ ರಾಣಾ, ಜಿತೇಶ್ ಶರ್ಮಾ ಹಾಗೂ ಸಾಯಿ ಸುದರ್ಶನ್ ಸ್ಥಾನ ಕಳೆದುಕೊಳ್ಳಬಹುದು.

IND vs ZIM: ಟೀಮ್ ಇಂಡಿಯಾಗೆ ಸ್ಪೋಟಕ ಆರಂಭಿಕ ಎಂಟ್ರಿ
Team India
Follow us
ಝಾಹಿರ್ ಯೂಸುಫ್
|

Updated on: Jul 06, 2024 | 8:30 AM

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಪಂದ್ಯವು ಇಂದಿನಿಂದ (ಜು.6) ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪರ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಈ ವಿದಾಯದ ಬೆನ್ನಲ್ಲೇ ನಡೆಯುತ್ತಿರುವ ಮೊದಲ ಟಿ20 ಪಂದ್ಯವಾಗಿರುವುದರಿಂದ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಇದ್ದೇ ಇದೆ. ಈ ಕುತೂಹಲಕಾರಿ ಪ್ರಶ್ನೆಗೆ ಸದ್ಯದ ಉತ್ತರ ಶುಭ್​ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ.

ಈ ಹಿಂದೆ ಶುಭ್​ಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿದಿರುವುದರಿಂದ ಝಿಂಬಾಬ್ವೆ ವಿರುದ್ಧ ಅವರೇ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೊದಲೆರಡು ಪಂದ್ಯಗಳಿಗೆ ಯಶಸ್ವಿ ಜೈಸ್ವಾಲ್ ಅಲಭ್ಯರಾಗಿದ್ದಾರೆ. ಹೀಗಾಗಿ ಎಡಗೈ ದಾಂಡಿಗ ಅಭಿಷೇಕ್ ಶರ್ಮಾಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಬಹುದು.

ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದರು. 16 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಅಭಿ, 42 ಸಿಕ್ಸ್ ಹಾಗೂ 36 ಫೋರ್​ಗಳೊಂದಿಗೆ 484 ರನ್ ಚಚ್ಚಿದ್ದರು.

ಅಲ್ಲದೆ ಪಂಜಾಬ್ ಪರ ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಗಿಲ್ ಜೊತೆ ಅಭಿಷೇಕ್ ಆರಂಭಿಕ ಜೋಡಿಯಾಗಿ ಇನಿಂಗ್ಸ್ ಆರಂಭಿಸುವುದು ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಭಾರತ ಟಿ20 ತಂಡ (ಮೊದಲೆರಡು ಪಂದ್ಯಗಳಿಗೆ): ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ.

ಭಾರತ vs ಝಿಂಬಾಬ್ವೆ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟಿ20, ಝಿಂಬಾಬ್ವೆ vs ಭಾರತ ಶನಿವಾರ, 6 ಜುಲೈ 2024 4:30 PM ಹರಾರೆ
2ನೇ ಟಿ20, ಝಿಂಬಾಬ್ವೆ vs ಭಾರತ ಭಾನುವಾರ, 7 ಜುಲೈ 2024 4:30 PM ಹರಾರೆ
3ನೇ ಟಿ20, ಝಿಂಬಾಬ್ವೆ vs ಭಾರತ ಬುಧವಾರ, 10 ಜುಲೈ 2024 9:30 PM ಹರಾರೆ
4ನೇ ಟಿ20, ಝಿಂಬಾಬ್ವೆ vs ಭಾರತ ಶನಿವಾರ, 13 ಜುಲೈ 2024 4:30 PM ಹರಾರೆ
5ನೇ ಟಿ20, ಝಿಂಬಾಬ್ವೆ vs ಭಾರತ ಭಾನುವಾರ, 14 ಜುಲೈ 2024 4:30 PM ಹರಾರೆ