AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು

Iran-Israel Conflict: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಕ್ರಿಕೆಟ್ ಪಂದ್ಯ ರದ್ದುಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಕಾಳಜಿ ಈ ನಿರ್ಧಾರಕ್ಕೆ ಕಾರಣ. ದುಬೈ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿ ವಾಯು ಸಂಚಾರ ಸ್ಥಗಿತಗೊಳಿಸಿದೆ. ಆಟಗಾರರ ಸುರಕ್ಷತೆಗಾಗಿ ಇಸಿಬಿ ಈ ಕ್ರಮ ಕೈಗೊಂಡಿದ್ದು, ಇತರ ಸರಣಿಗಳಿಗೂ ಇದು ಅಡ್ಡಿಯಾಗಿದೆ.

ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು
Pak Vs Eng
ಪೃಥ್ವಿಶಂಕರ
|

Updated on:Mar 01, 2026 | 4:18 PM

Share

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ (Iran Israel conflict) ನಡುವಿನ ಯುದ್ಧದ ಪರಿಣಾಮದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ (Pakistan Shaheens vs England Lions) ನಡುವಿನ ಎರಡನೇ ಅನಧಿಕೃತ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪೂರ್ವ ನಿಗದಿಯಂತೆ ಈ ಪಂದ್ಯ ಮಾರ್ಚ್ 1, 2026 ರಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಇಂಗ್ಲೆಂಡ್-ಪಾಕಿಸ್ತಾನ ಪಂದ್ಯ ರದ್ದು

ದುಬೈ ಮತ್ತು ಅಬುಧಾಬಿಯ ಪ್ರಮುಖ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ವಾಯು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಭದ್ರತಾ ತಜ್ಞರು ಮತ್ತು ಸರ್ಕಾರದ ಸಲಹೆಯ ಆಧಾರದ ಮೇಲೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಪಂದ್ಯ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ತಂಡಗಳು ಮತ್ತು ಸಿಬ್ಬಂದಿಯ ಸುರಕ್ಷತೆಯೇ ಪ್ರಮುಖ ಆದ್ಯತೆ ಎಂದಿರುವ ಇಸಿಬಿ, ಎರಡೂ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ತಾವು ತಂಗಿರುವ ಹೋಟೆಲ್‌ಗಳಿಂದ ಹೊರಬರದಂತೆ ಆದೇಶ ಹೊರಡಿಸಿದೆ. ಹಾಗೆಯೇ ಸಧ್ಯದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ವಿಮಾನ ಹಾರಾಟ ಮರು ಆರಂಭವಾದ ನಂತರ ತಂಡಗಳು ಸರಣಿಗೆ ಮರಳುವ ಅಥವಾ ಸರಣಿಯನ್ನು ಮುಂದುವರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದೆ.

ಪ್ರವಾಸ ರದ್ದು?

ಐದು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಅಬುಧಾಬಿಯಲ್ಲಿ ನಡೆಯಬೇಕಿತ್ತು. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಲಯನ್ಸ್ ತಂಡ ಪಾಕಿಸ್ತಾನ ಶಹೀನ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಶಹೀನ್ಸ್ ತಂಡ 152 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸುಲಭವಾಗಿ ಜಯಗಳಿಸಿತು. ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು ಇಂಗ್ಲೆಂಡ್ 3-0 ಅಂತರದಿಂದ ಗೆದ್ದುಕೊಂಡಿತ್ತು. ಈ ಇಂಗ್ಲೆಂಡ್ ಪ್ರವಾಸವು ಮಾರ್ಚ್ 9 ರಂದು ಕೊನೆಗೊಳ್ಳಬೇಕಿತ್ತು. ಆದಾಗ್ಯೂ, ಇದನ್ನು ರದ್ದುಗೊಳಿಸಲಾಗುತ್ತದೆಯೇ ಅಥವಾ ಮರು ನಿಗದಿಪಡಿಸಲಾಗುತ್ತದೆಯೇ ಎಂಬುದರ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.

ಈ ಸರಣಿ ನಡೆಯುವುದು ಅನುಮಾನ

ಈ ಬಿಕ್ಕಟ್ಟಿನಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್ ಮಹಿಳಾ ತಂಡದ ತರಬೇತಿ ಶಿಬಿರವನ್ನು ಮುಂದೂಡಲಾಗಿದೆ. ಇದರ ಜೊತೆಗೆ ಮಾರ್ಚ್ 13 ರಂದು ಯುಎಇಯಲ್ಲಿ ಪ್ರಾರಂಭವಾಗಲಿರುವ ಅಫ್ಘಾನಿಸ್ತಾನ-ಶ್ರೀಲಂಕಾ ನಡುವಿನ ಟಿ20 ಮತ್ತು ಏಕದಿನ ಸರಣಿಗಳು ಸಹ ನಡೆಯುವುದು ಅನುಮಾನವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Sun, 1 March 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ