AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಸರಣಿಯಿಂದ ಹಿಂದೆ ಸರಿದ ಅಫ್ಘಾನ್: ಮತ್ತೊಂದು ತಂಡದ ಸೇರ್ಪಡೆ

Afghanistan vs Pakistan: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡರ್​​ನಲ್ಲಿ 12 ಪಾಕಿಸ್ತಾನ್ ಸೈನಿಕರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದರು.

ಪಾಕಿಸ್ತಾನ್ ಸರಣಿಯಿಂದ ಹಿಂದೆ ಸರಿದ ಅಫ್ಘಾನ್: ಮತ್ತೊಂದು ತಂಡದ ಸೇರ್ಪಡೆ
Afg Vs Pak
ಝಾಹಿರ್ ಯೂಸುಫ್
| Edited By: |

Updated on:Nov 11, 2025 | 12:41 PM

Share

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಟಿ20 ತ್ರಿಕೋನ ಸರಣಿಯಿಂದ ಅಫ್ಘಾನಿಸ್ತಾನ್ ಹಿಂದೆ ಸರಿದಿದೆ.  ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯಬೇಕಿತ್ತು. ಆದರೀಗ ಪಾಕ್ ವಿರುದ್ಧದ ಸರಣಿಯನ್ನು ಬಹಿಷ್ಕರಿಸಲು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.

ಪಾಕಿಸ್ತಾನ್ ಸೇನೆಯು ಪಕ್ತಿಕಾ ಪ್ರಾಂತ್ಯದ ಗಡಿಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿದ್ದರು. ಈ ದಾಳಿಯನ್ನು ಖಂಡಿಸಿ ಪಾಕ್ ವಿರುದ್ಧದ ಸರಣಿ ಆಡುವುದಿಲ್ಲ ಎಂದು ಅಘ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಅಕ್ಟೋಬರ್ 17 ರಂದು ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ಪಾಕ್ ಏರ್​ಫೋರ್ಸ್​ ದಾಳಿ ನಡೆಸಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದರು.

ಪಾಕ್ ದಾಳಿಯಿಂದಾಗಿ ದೇಶೀಯ ಕ್ರಿಕೆಟ್​ನಲ್ಲಿ ಗುರುತಿಸಿಕೊಂಡಿದ್ದ ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಮೃತಪಟ್ಟಿದ್ದರು.  ಈ ದಾಳಿ ಬೆನ್ನಲ್ಲೇ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ದೃಢ ನಿರ್ಧಾರ ತೆಗೆದುಕೊಂಡಿದ್ದು, ಮುಂಬರುವ ಸರಣಿಯಲ್ಲಿ ಪಾಕ್ ಅಫ್ಘಾನ್ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: IPL 2026: ಲೈಂಗಿನ ದೌರ್ಜನ್ಯ ಪ್ರಕರಣ: RCB ಆಟಗಾರ ಕಿಕ್ ಔಟ್ ಖಚಿತ

ಮತ್ತೊಂದು ತಂಡ ಸೇರ್ಪಡೆ:

ಅಫ್ಘಾನಿಸ್ತಾನ್ ತಂಡವು ಪಿಸಿಬಿ ಆಯೋಜಿಸಲಿರುವ ತ್ರಿಕೋನ ಸರಣಿಯಿಂದ ಹಿಂದೆ ಸರಿದಿರುವ ಕಾರಣ ಇದೀಗ ಝಿಂಬಾಬ್ವೆ ತಂಡವನ್ನು ಈ ಸರಣಿಗೆ ಸೇರ್ಪಡೆಗೊಳಿಸಲಾಗಿದೆ. ಅದರಂತೆ ಪಾಕಿಸ್ತಾನ್, ಶ್ರೀಲಂಕಾ ಹಾಗೂ ಝಿಂಬಾಬ್ವೆ ನಡುವೆ ತ್ರಿಕೋನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಎಲ್ಲಾ ತಂಡಗಳು 4 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಅಂಕ ಪಟ್ಟಿಯಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ಎರಡು ತಂಡಗಳು ಫೈನಲ್ ಆಡಲಿವೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಟ್ರೈ-ಸೀರೀಸ್ 2025 ವೇಳಾಪಟ್ಟಿ:

  • ನವೆಂಬರ್ 17: ಪಾಕಿಸ್ತಾನ್ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 18: ಶ್ರೀಲಂಕಾ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 22: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 23: ಪಾಕಿಸ್ತಾನ್ vs ಝಿಂಬಾಬ್ವೆ (ಲಾಹೋರ್)
  • ನವೆಂಬರ್ 25: ಶ್ರೀಲಂಕಾ v ಝಿಂಬಾಬ್ವೆ (ಲಾಹೋರ್)
  • ನವೆಂಬರ್ 27: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 29: ಫೈನಲ್ (ಲಾಹೋರ್)

Published On - 12:17 pm, Tue, 11 November 25

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್