IND vs UAE: 10.5 ಓವರ್​ಗಳಲ್ಲಿ ಪಂದ್ಯ ಗೆದ್ದು ಸೆಮಿಫೈನಲ್​ಗೆ ಕಾಲಿಟ್ಟ ಟೀಂ ಇಂಡಿಯಾ

Emerging Asia Cup 2024: ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡ 107 ರನ್​ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯದ ನಗೆ ಬೀರಿತು. ಈ ಗೆಲುವಿನೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿರುವ ಟೀಂ ಇಂಡಿಯಾ ಸೆಮಿಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

IND vs UAE: 10.5 ಓವರ್​ಗಳಲ್ಲಿ ಪಂದ್ಯ ಗೆದ್ದು ಸೆಮಿಫೈನಲ್​ಗೆ ಕಾಲಿಟ್ಟ ಟೀಂ ಇಂಡಿಯಾ
ಭಾರತ ಎ ತಂಡ
Follow us
ಪೃಥ್ವಿಶಂಕರ
|

Updated on:Oct 21, 2024 | 10:03 PM

ಒಮಾನ್​ನಲ್ಲಿ ನಡೆಯುತ್ತಿರುವ ಉದಯೋನ್ಮುಖ ಟೀಂ ಟಿ20 ಏಷ್ಯಾಕಪ್ 8ನೇ ಪಂದ್ಯದಲ್ಲಿ ಇಂದು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಒಮಾನ್‌ನ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯ ಉಭಯ ತಂಡಗಳಿಗೂ ಎರಡನೇ ಪಂದ್ಯವಾಗಿದ್ದು, ಇನ್ನು ಈ ಪಂದ್ಯವನ್ನು ಕೇವಲ 10.5 ಓವರ್​ಗಳಲ್ಲಿ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡ 107 ರನ್​ಗಳಿಗೆ ಆಲೌಟ್ ಆದರೆ, ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯದ ನಗೆ ಬೀರಿತು. ಈ ಗೆಲುವಿನೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿರುವ ಟೀಂ ಇಂಡಿಯಾ ಸೆಮಿಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಗುಂಪಿನಲ್ಲಿ ಟೀಂ ಇಂಡಿಯಾ ಅಲ್ಲದೆ, ಪಾಕಿಸ್ತಾನ, ಯುಎಇ ಹಾಗೂ ಒಮಾನ್ ತಂಡಗಳಿದ್ದು, ತಿಲಕ್ ವರ್ಮಾ ಪಡೆ ಲೀಗ್ ಹಂತದಲ್ಲಿ ತನ್ನ ಕೊನೆಯ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಆ ಬಳಿಕ ಸೆಮಿಫೈನಲ್ ಪಂದ್ಯಕ್ಕೆ ಅಣಿಯಾಗಲಿದೆ.

ರಾಸಿಖ್ ಸಲಾಂ ಮಾರಕ ದಾಳಿ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ 16.5 ಓವರ್‌ಗಳಲ್ಲಿ 107 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ರಾಹುಲ್ ಚೋಪ್ರಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ನಾಯಕ ಬಸಿಲ್ ಹಮೀದ್ ಕೂಡ 22 ರನ್​ಗಳ ಕಾಣಿಕೆ ನೀಡಿದರು. ಉಳಿದವರಂತೆ ಅಂತಹ ಪ್ರದರ್ಶನ ಕಂಡುಬರಲಿಲ್ಲ. ಭಾರತದ ಪರ ಮಿಂಚಿದ ವೇಗದ ಬೌಲರ್ ರಾಸಿಖ್ ಸಲಾಂ 2 ಓವರ್‌ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದರು. ರಾಸಿಖ್ ಸಲಾಂ ಅವರು ತಮ್ಮ ಮೊದಲ ಓವರ್‌ನಲ್ಲಿಯೇ ಈ ಮೂರು ವಿಕೆಟ್‌ಗಳನ್ನು ಪಡೆದರು. ಇವರಲ್ಲದೆ ರಮಣದೀಪ್ ಸಿಂಗ್ 2 ವಿಕೆಟ್ ಪಡೆದರೆ, ಅನ್ಶುಲ್ ಕಾಂಬೋಜ್, ವೈಭವ್ ಅರೋರಾ, ಅಭಿಷೇಕ್ ಶರ್ಮಾ ಮತ್ತು ನೆಹಾಲ್ ವಧೇರಾ ತಲಾ 1 ವಿಕೆಟ್ ಪಡೆದರು.

ಅಭಿಷೇಕ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್

ಪಂದ್ಯ ಗೆಲ್ಲಲು ಟೀಂ ಇಂಡಿಯಾ 108 ರನ್ ಗಳಿಸಬೇಕಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಅರ್ಧಶತಕ ದಾಖಲಿಸಿದರು. ಹೀಗಾಗಿ ಈ ಗುರಿಯನ್ನು ಟೀಂ ಇಂಡಿಯಾ ಕೇವಲ 10.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸಾಧಿಸಿತು. ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲಿ 241.66 ಸ್ಟ್ರೈಕ್ ರೇಟ್‌ನಲ್ಲಿ 58 ರನ್ ಗಳಿಸಿದರು. ಅಭಿಷೇಕ್ ಶರ್ಮಾ ಅವರ ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅದೇ ಸಮಯದಲ್ಲಿ ನಾಯಕ ತಿಲಕ್ ವರ್ಮಾ ಕೂಡ 18 ಎಸೆತಗಳಲ್ಲಿ 21 ರನ್​ಗಳ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Mon, 21 October 24

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್