AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಿನಿ ಹರಾಜಿಗೂ ಮುನ್ನ ಚೆನ್ನೈ ತಂಡದಿಂದ ಈ ನಾಲ್ಕು ಆಟಗಾರರಿಗೆ ಗೇಟ್​ಪಾಸ್..?

Chennai Super Kings: ಈ ವರ್ಷದ ಮಿನಿ ಹರಾಜಿಗೆ ಮುಂಚಿತವಾಗಿ ಚೆನ್ನೈ ಯಾವ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

IPL 2023: ಮಿನಿ ಹರಾಜಿಗೂ ಮುನ್ನ ಚೆನ್ನೈ ತಂಡದಿಂದ ಈ ನಾಲ್ಕು ಆಟಗಾರರಿಗೆ ಗೇಟ್​ಪಾಸ್..?
ಚೆನ್ನೈ ತಂಡ
TV9 Web
| Updated By: ಪೃಥ್ವಿಶಂಕರ|

Updated on:Nov 09, 2022 | 2:31 PM

Share

ಟಿ20 ವಿಶ್ವಕಪ್ (T20 World Cup 2022) ಬಳಿಕ ಭಾರತದಲ್ಲಿ ಐಪಿಎಲ್ (IPL 2023) ಸದ್ದು ಮಾಡಲಿದೆ. ವಾಸ್ತವವಾಗಿ ಇದೇ ಡಿಸೆಂಬರ್​ನಲ್ಲಿಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಈ ಹರಾಜಿಗೂ ಮುನ್ನ ಎಲ್ಲಾ ತಂಡಗಳು ತಮ್ಮ ತಂಡದಲ್ಲಿ ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಮಂಡಳಿಗೆ ನೀಡಬೇಕಾಗಿದೆ. ಇದರ ಅಂಗವಾಗಿ ಚೆನ್ನೈ ಸೂಪರ್ ಕಿಂಗ್ಸ್ (Chennai Super King) ಫಾಂಚೈಸಿ ಕೂಡ ತಂಡದಿಂದ ಕೈಬಿಡುವ ಆಟಗಾರರ ಬಗ್ಗೆ ಒಂದು ತೀರ್ಮಾನಕ್ಕೆ ಬಂದಿದೆ ಎಂದು ವರದಿಯಾಗಿದೆ. ಈ ಹಿಂದೆ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರನ್ನು ತಂಡದಿಂದ ಕೈಬಿಡಲಾಗುತ್ತಿದೆ ಎಂದು ವರದಿಗಳು ಬಂದಿದ್ದವು. ಆದರೆ ಈ ಎಲ್ಲಾ ಊಹಾಪೋಹಗಳನ್ನು ಮಂಡಳಿ ಅಲ್ಲಗಳೆದಿತ್ತು. ಈಗ ಈ ವರ್ಷದ ಮಿನಿ ಹರಾಜಿಗೆ ಮುಂಚಿತವಾಗಿ ಚೆನ್ನೈ ಯಾವ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಕ್ರಿಸ್ ಜೋರ್ಡಾನ್

ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ಇಂಗ್ಲೆಂಡ್ ವೇಗದ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 3.60 ಕೋಟಿ ರೂ.ಗೆ ಖರೀದಿಸಿತ್ತು. ಜೋರ್ಡಾನ್ ಐಪಿಎಲ್ 2022 ರಲ್ಲಿ ಚೆನ್ನೈ ಪರ ಒಟ್ಟು 4 ಪಂದ್ಯಗಳನ್ನು ಆಡಿ, ಅದರಲ್ಲಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದರು. ಹಾಗೆಯೇ 10 ಕ್ಕಿಂತ ಹೆಚ್ಚು ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟು ತುಂಬಾ ದುಬಾರಿಯಾಗಿದ್ದರು. ಆದ್ದರಿಂದ ಈ ವರ್ಷದ ಮಿನಿ ಹರಾಜಿನ ಮೊದಲು CSK ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಆಡಮ್ ಮಿಲ್ನೆ..

2022 ರ ಮೆಗಾ ಹರಾಜಿನಲ್ಲಿ, ಕಿವೀಸ್ ವೇಗದ ಬೌಲರ್ ಆಡಮ್ ಮಿಲ್ನೆ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ರೂ. 1.90 ಕೋಟಿಗೆ ಖರೀದಿಸಿತ್ತು. ಐಪಿಎಲ್ 2022 ರಲ್ಲಿ, ಅವರು ಚೆನ್ನೈ ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದರು. ಅದರಲ್ಲಿ ಅವರು ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಈ ಬಾರಿ ಮಿನಿ ಹರಾಜಿಗೂ ಮುನ್ನ ಅವರನ್ನು ಬಿಡುಗಡೆ ಮಾಡಲು ಸಿಎಸ್​ಕೆ ಮುಂದಾಗಿದೆ.

ಇದನ್ನೂ ಓದಿ: Virat Kohli Injured: ಭಾರತಕ್ಕೆ ಮತ್ತೊಂದು ಆಘಾತ; ಅಭ್ಯಾಸದ ವೇಳೆ ಕೊಹ್ಲಿಗೆ ಗಾಯ..! ವಿಡಿಯೋ ನೋಡಿ

ನಾರಾಯಣ ಜಗದೀಶನ್

2022 ರ ಮೆಗಾ ಹರಾಜಿನಲ್ಲಿ, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ನಾರಾಯಣ ಜಗದೀಶನ್ ಅವರನ್ನು ರೂ. 20 ಲಕ್ಷಗಳ ಮೂಲ ಬೆಲೆಗೆ CSK ಖರೀದಿಸಿತ್ತು. ಕಳೆದ ವರ್ಷ ನಾರಾಯಣ್ ಚೆನ್ನೈ ಪರ ಒಟ್ಟು 2 ಪಂದ್ಯಗಳನ್ನು ಆಡಿದ್ದರು. ಅದರಲ್ಲಿ ಅವರು 40 ರನ್ ಗಳಿಸಿದರು. ಈ ವರ್ಷದ ಮಿನಿ ಹರಾಜಿಗೂ ಮುನ್ನ ನಾರಾಯಣ್ ಜಗದೀಶನ್ ಅವರನ್ನು ಬಿಡುಗಡೆ ಮಾಡಲು ಸಿಎಸ್‌ಕೆ ಯೋಜಿಸುತ್ತಿದೆಯಂತೆ.

ಮಿಚೆಲ್ ಸ್ಯಾಂಟ್ನರ್

ನ್ಯೂಜಿಲೆಂಡ್ ಬೌಲಿಂಗ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಅವರನ್ನು ಮೆಗಾ ಹರಾಜಿನಲ್ಲಿ 1.9 ಕೋಟಿ ರೂಗಳಿಗೆ ತೆಗೆದುಕೊಳ್ಳಲಾಗಿತ್ತು. 2022 ರಲ್ಲಿ ಚೆನ್ನೈ ಪರ ಒಟ್ಟು 6 ಪಂದ್ಯಗಳನ್ನು ಆಡಿದ್ದ ಅವರು 4 ವಿಕೆಟ್ಗಳನ್ನು ಪಡೆದಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಬಿಡುಗಡೆ ಮಾಡಲು ಚೆನ್ನೈ ಮುಂದಾಗಿದೆಯಂತೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Wed, 9 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ