The Hundred: 7 ಸಿಕ್ಸ್​, 3 ಫೋರ್: ಅತೀ ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದ ಯುವ ಬ್ಯಾಟ್ಸ್​ಮನ್

| Updated By: ಝಾಹಿರ್ ಯೂಸುಫ್

Updated on: Aug 15, 2022 | 11:00 AM

The Hundred: ಕೇವಲ 44 ಎಸೆತಗಳಲ್ಲಿ 3 ವಿಕೆಟ್​ ನಷ್ಟಕ್ಕೆ 147 ರನ್​ ಬಾರಿಸುವ ಮೂಲಕ ಲಂಡನ್ ಸ್ಪಿರಿಟ್​ ತಂಡವು ಭರ್ಜರಿ ಜಯ ಸಾಧಿಸಿತು.

The Hundred: 7 ಸಿಕ್ಸ್​, 3 ಫೋರ್: ಅತೀ ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದ ಯುವ ಬ್ಯಾಟ್ಸ್​ಮನ್
adam rossington
Follow us on

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ (The Hundred) ಸ್ಪೋಟಕ ಬ್ಯಾಟಿಂಗ್​ಗೆ ಸಾಕ್ಷಿಯಾಗುತ್ತಿದೆ. ದಿನಗಳ ಹಿಂದೆಯಷ್ಟೇ ವಿಲ್ ಸ್ಮೀಡ್ ಈ ಲೀಗ್​ನಲ್ಲಿ ಮೊದಲ ಶತಕ ಬಾರಿಸಿದ ದಾಖಲೆ ಬರೆದಿದ್ದರು. ಇದರ ಬೆನ್ನಲ್ಲೇ ವಿಲ್ ಜಾಕ್ಸ್ ಕೂಡ ಸ್ಪೋಟಕ ಸೆಂಚುರಿ ಸಿಡಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಇದೀಗ ಬಿರುಗಾಳಿಯ ಅರ್ಧಶತಕ ಬಾರಿಸಿ ಆ್ಯಡಂ ರೋಸಿಂಗ್​ಟನ್ ಎಲ್ಲರನ್ನು ದಂಗಾಗಿಸಿದ್ದಾರೆ. ಟೂರ್ನಿಯ 13ನೇ ಪಂದ್ಯದಲ್ಲಿ ಈ ಸಿಡಿಲಬ್ಬರದ ಅರ್ಧಶತಕ ಮೂಡಿಬಂದಿದ್ದು, ಈ ಪಂದ್ಯದಲ್ಲಿ ನಾರ್ಥನ್ ಸೂಪರ್​ ಚಾರ್ಜರ್ಸ್​ ಹಾಗೂ ಲಂಡನ್ ಸ್ಪಿರಿಟ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಫಾಫ್ ಡುಪ್ಲೆಸಿಸ್ ನಾಯಕತ್ವದ ಸೂಪರ್​ ಚಾರ್ಜರ್ಸ್​ ತಂಡವು ಉತ್ತಮ ಆರಂಭ ಪಡೆದಿತ್ತು.

ಆರಂಭಿಕನಾಗಿ ಕಣಕ್ಕಿಳಿದ ಡುಪ್ಲೆಸಿಸ್​ ಕೇವಲ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 56 ರನ್​ ಸಿಡಿಸಿದ್ದರು. ಇನ್ನು ಅಂತಿಮ ಹಂತದಲ್ಲಿ ಆ್ಯಡಂ ಹೂಸ್ ಕೇವಲ 14 ಎಸೆತಗಳಲ್ಲಿ 30 ರನ್ ಸಿಡಿಸುವ ಮೂಲಕ 100 ಎಸೆತಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 143 ಕ್ಕೆ ತಂದು ನಿಲ್ಲಿಸಿದರು.

ಸ್ಪರ್ಧಾತ್ಮಕ ಸವಾಲು ನೀಡುವ ಮೂಲಕ ಕಣಕ್ಕಿಳಿದ ನಾರ್ಥನ್ ಸೂಪರ್ ಚಾರ್ಜರ್ಸ್​ ತಂಡದ ಬೌಲರ್​ಗಳನ್ನು ಲಂಡನ್ ಸ್ಪಿರಿಟ್ ತಂಡದ ಆರಂಭಿಕ ಆಟಗಾರ ಆ್ಯಡಂ ರೋಸಿಂಗ್​ಟನ್ ಚೆಂಡಾಡಿದರು. ಆರಂಭದಿಂದಲೇ ಬಿರುಗಾಳಿ ಬ್ಯಾಟಿಂಗ್ ಪ್ರದರ್ಶಿಸಿದ ರೋಸಿಂಗ್​ಟನ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ದಿ ಹಂಡ್ರೆಡ್ ಲೀಗ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟ್ಸ್​ಮನ್ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಮತ್ತೊಂದೆಡೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ 25 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 43 ರನ್​ ಚಚ್ಚಿದರು. ಇತ್ತ ಕೇವಲ 25 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 66 ರನ್​ ಬಾರಿಸಿ ಆ್ಯಡಂ ರೋಸಿಂಗ್​ಟನ್ ಇನಿಂಗ್ಸ್​ ಅಂತ್ಯಗೊಳಿಸಿದರು. ಅಷ್ಟರಲ್ಲಾಗಲೇ ಲಂಡನ್ ಸ್ಪಿರಿಟ್ ತಂಡವು ಗೆಲುವಿನತ್ತ ಮುಖಮಾಡಿತು.

ಅಂತಿಮವಾಗಿ ಕೇವಲ 44 ಎಸೆತಗಳಲ್ಲಿ 3 ವಿಕೆಟ್​ ನಷ್ಟಕ್ಕೆ 147 ರನ್​ ಬಾರಿಸುವ ಮೂಲಕ ಲಂಡನ್ ಸ್ಪಿರಿಟ್​ ತಂಡವು ಭರ್ಜರಿ ಜಯ ಸಾಧಿಸಿತು. ಈ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ ಆ್ಯಡಂ ರೋಸಿಂಗ್​ಟನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.