AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಖರೀದಿಗೆ ಮುಂದಾದ ಪೂನವಾಲ

IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್​ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಹೀಗಾಗಿ ಆರ್​ಸಿಬಿ ತಂಡದ ಖರೀದಿಗೆ ದೊಡ್ಡ ಉದ್ಯಮಿಗಳ ನಡುವೆ ಪೈಪೋಟಿ ನಡೆಯುವ ಸಾಧ್ಯತೆಯಿದೆ.

RCB ತಂಡದ ಖರೀದಿಗೆ ಮುಂದಾದ ಪೂನವಾಲ
Adar Poonawalla
ಝಾಹಿರ್ ಯೂಸುಫ್
|

Updated on: Oct 02, 2025 | 12:35 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಇದರ ಬೆನ್ನಲ್ಲೇ ರಾಯಲ್ ಫ್ರಾಂಚೈಸಿ ಖರೀದಿಗೆ ಖ್ಯಾತ ಉದ್ಯಮ ಆದಾರ್ ಪೂನಾವಾಲ ಆಸಕ್ತಿ ತೋರಿದ್ದಾರೆ ಎಂದು ವರದಿಯಾಗಿದೆ.

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ ಈ ಬಗ್ಗೆ ಡಿಯಾಜಿಯೋ ಕಂಪೆನಿ ಜೊತೆ ಮಾತುಕತೆ ನಡೆಸಿದ್ದು, ಈ ಮಾತುಕತೆ ಯಶಸ್ವಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಪುಣೆ ಮೂಲದ ಉದ್ಯಮಿ ಪಾಲಾಗಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದೆ.

ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ವರದಿಯಾಗಿತ್ತು. ಅದು ಕೂಡ ಸುಮಾರು 2 ಬಿಲಿಯನ್ ಡಾಲರ್​ಗೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ.ಗೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸಲು ಖ್ಯಾತ ಉದ್ಯಮಿ ಆದಾರ್ ಪೂನಾವಾಲ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಮಾತುಕತೆ ಯಶಸ್ವಿಯಾದರೆ, ಐಪಿಎಲ್​ನ 19ನೇ ಆವೃತ್ತಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿಯು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಪಾಲಾಗಲಿದೆ.

ಸಂಪೂರ್ಣ ಶೇರು ಮಾರಾಟ:

ಐಪಿಎಲ್​ನ ಮಾಜಿ ಅಧ್ಯಕ್ಷರಾದ ಲಲಿತ್ ಮೋದಿ ಅವರ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಸಂಪೂರ್ಣ ಶೇರು ಮಾರಾಟ ಮಾಡಲಿದೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯನ್ನು 17 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: 15 ವರ್ಷಗಳ ಬಳಿಕ ದಿಗ್ಗಜರಿಲ್ಲದೇ ಕಣಕ್ಕಿಳಿದ ಟೀಮ್ ಇಂಡಿಯಾ

ಇತ್ತ ಹಾಲಿ ಐಪಿಎಲ್ ಚಾಂಪಿಯನ್ ಪಟ್ಟದೊಂದಿಗೆ ಅಪಾರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಖರೀದಿಗೆ ದೊಡ್ಡ ಉದ್ಯಮ ನಡುವೆ ಪೈಪೋಟಿ ನಡೆಯುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ