AFG vs BAN: ಬಾಂಗ್ಲಾ ನೆಲದಲ್ಲಿ ಈ ದಾಖಲೆ ಬರೆದ 2ನೇ ತಂಡ ಅಫ್ಘಾನಿಸ್ತಾನ..!

AFG vs BAN: ಈ ಏಕದಿನ ಸರಣಿ ಗೆಲುವಿನೊಂದ ಅಫ್ಘಾನಿಸ್ತಾನ ತಂಡ ಬಾಂಗ್ಲಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ್ದು, ಕಳೆದ 8 ವರ್ಷಗಳಲ್ಲಿ ಬಾಂಗ್ಲಾದೇಶದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

AFG vs BAN: ಬಾಂಗ್ಲಾ ನೆಲದಲ್ಲಿ ಈ ದಾಖಲೆ ಬರೆದ 2ನೇ ತಂಡ ಅಫ್ಘಾನಿಸ್ತಾನ..!
ಅಫ್ಘಾನಿಸ್ತಾನ ತಂಡ
Follow us
ಪೃಥ್ವಿಶಂಕರ
|

Updated on:Jul 09, 2023 | 12:06 PM

ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಅಫ್ಘಾನಿಸ್ತಾನ (Afghanistan beat Bangladesh) ತಂಡ ವಶಪಡಿಸಿಕೊಂಡಿದೆ. ಈ ಏಕದಿನ ಸರಣಿ ಗೆಲುವಿನೊಂದಿಗೆ ಅಫ್ಘಾನಿಸ್ತಾನ ತಂಡ ಬಾಂಗ್ಲಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ್ದು, ಕಳೆದ 8 ವರ್ಷಗಳಲ್ಲಿ ಬಾಂಗ್ಲಾದೇಶದಲ್ಲಿ ಏಕದಿನ ಸರಣಿ (ODI series) ಗೆದ್ದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಗೆಲುವಿನೊಂದಿಗೆ ಲಂಕಾ ವಿರುದ್ಧದ ಅವಮಾನಕರ ಸರಣಿ ಸೋಲನ್ನು ಸರಿದೂಗಿಸಿದೆ. ಮೊದಲ ಏಕದಿನ ಪಂದ್ಯವನ್ನು 17 ರನ್‌ಗಳಿಂದ ಗೆದ್ದಿದ್ದ ಅಫ್ಘಾನಿಸ್ತಾನ, ಎರಡನೇ ಏಕದಿನ ಪಂದ್ಯವನ್ನು 142 ರನ್‌ಗಳಿಂದ ಗೆದ್ದುಕೊಂಡು ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 331 ರನ್ ಕಲೆಹಾಕಿತು. ತಂಡದ ಪರ ರಹಮಾನುಲ್ಲಾ ಗುರ್ಬಾಜ್ 145 ಮತ್ತು ಇಬ್ರಾಹಿಂ ಜದ್ರಾನ್ 100 ರನ್ ಬಾರಿಸಿ ಮಿಂಚಿದರು. ಅಲ್ಲದೆ ಇವರಿಬ್ಬರ ನಡುವೆ ಮೊದಲ ವಿಕೆಟ್‌ಗೆ 256 ರನ್‌ಗಳ ದಾಖಲೆಯ ಜೊತೆಯಾಟವಿತ್ತು. ಇದು ಅಫ್ಘಾನಿಸ್ತಾನ ತಂಡ ಏಕದಿನ ಮಾದರಿಯಲ್ಲಿ ಕಲೆ ಹಾಕಿದ ಅತಿದೊಡ್ಡ ಜೊತೆಯಾಟವಾಗಿದೆ.

IND vs BAN: 4 ತಿಂಗಳ ಬಳಿಕ ಅಖಾಡಕ್ಕೆ; ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ ಬಾಂಗ್ಲಾ ಎದುರಾಳಿ..!

ಗುರ್ಬಾಜ್ ದಾಖಲೆ

ಈ ಪಂದ್ಯದಲ್ಲಿ 145 ರನ್​ಗಳ ಇನ್ನಿಂಗ್ಸ್ ಆಡಿದ ಗುರ್ಬಾಜ್, ಅಫ್ಘಾನಿಸ್ತಾನ ಪರ ಏಕದಿನದಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇವರಿಬ್ಬರನ್ನು ಬಿಟ್ಟರೆ ಅಫ್ಘಾನಿಸ್ತಾನದ ಯಾವ ಬ್ಯಾಟ್ಸ್‌ಮನ್‌ ಹೆಚ್ಚು ರನ್ ಕಲೆಹಾಕಲಿಲ್ಲ. 332 ರನ್‌ಗಳ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ತಂಡ 43.2 ಓವರ್‌ಗಳಲ್ಲಿ 189 ರನ್‌ಗಳಿಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ಮುಶ್ಫಿಕರ್ ರಹೀಮ್ ಗರಿಷ್ಠ 69 ರನ್ ಬಾರಿಸಿದರು. ಫಜಲ್ಹಕ್ ಫಾರೂಕಿ, ಮುಜೀಬ್ ಉರ್ ರೆಹಮಾನ್ ತಲಾ 3 ವಿಕೆಟ್ ಪಡೆದರು. ರಶೀದ್ ಖಾನ್ 2 ವಿಕೆಟ್ ಪಡೆದರು.

ಉಭಯ ತಂಡಗಳು

ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ಮುಜೀಬ್ ಉರ್ ರಹಮಾನ್, ಅಜ್ಮತುಲ್ಲಾ ಉಮರ್ಜಾಯ್ ಮತ್ತು ಮೊಹಮ್ಮದ್ ಸಲೀಮ್.

ಬಾಂಗ್ಲಾದೇಶ: ಲಿಟನ್ ದಾಸ್ (ನಾಯಕ), ಮೊಹಮ್ಮದ್ ನಯೀಮ್, ನಜ್ಮುಲ್ ಹುಸೇನ್ ಶಾಂಟೊ, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹುಸೇನ್, ಮೆಹದಿ ಹಸನ್ ಮಿರಾಜ್, ಹಸನ್ ಮಹಮೂದ್, ಇಬಾದತ್ ಹುಸೇನ್ ಮತ್ತು ಮುಸ್ತಾಫಿಜುರ್ ರಹಮಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Sun, 9 July 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ