AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ.

IND A vs AFG A: ಭಾರತಕ್ಕೆ ಸೋಲುಣಿಸಿದ ಅಫ್ಘಾನಿಸ್ತಾನ್
India A
ಝಾಹಿರ್ ಯೂಸುಫ್
|

Updated on: Oct 26, 2024 | 7:37 AM

Share

ಒಮಾನ್​​ನ ಅಲ್​ ಎಮಿರಾತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಮರ್ಜಿಂಗ್​ ಏಷ್ಯಾಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ತಂಡಕ್ಕೆ ಅಫ್ಘಾನಿಸ್ತಾನ್ ಸೋಲುಣಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ಎ ತಂಡ ಫೈನಲ್​ಗೆ ಪ್ರವೇಶಿಸಿದರೆ, ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಆರಂಭಿಕರಾಗಿ ಕಣಕ್ಕಿಳಿದ ಝುಬೈದ್ ಅಕ್ಬರಿ (64) ಹಾಗೂ ಸೆದಿಖುಲ್ಲಾ ಅಟಲ್ (83) ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡಿದರು. ಇನ್ನು ಕರೀಮ್ ಜನ್ನತ್ 20 ಎಸೆತಗಳಲ್ಲಿ 41 ರನ್ ಬಾರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು.

207 ರನ್​ಗಳ ಕಠಿಣ ಗುರಿ ಪಡೆದ ಭಾರತ ಎ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಪ್ರಭ್​ ಸಿಮ್ರಾನ್ ಸಿಂಗ್ (19) ಹಾಗೂ ಅಭಿಷೇಕ್ ಶರ್ಮಾ (7) ಬೇಗನೆ ವಿಕೆಟ್ ಒಪ್ಪಿಸಿದರೆ, ಆ ಬಳಿಕ ಬಂದ ತಿಲಕ್ ವರ್ಮಾ 16 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ 31 ರನ್ ಬಾರಿಸಿದರೆ, ನೆಹಾಲ್ ವಧೇರಾ 20 ರನ್​ಗಳ ಕೊಡುಗೆ ನೀಡಿದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಮಣ್​ದೀಪ್ ಸಿಂಗ್ ಸ್ಪೋಟಕ ಇನಿಂಗ್ಸ್ ಆಡಿದರು.

ಕೇವಲ 34 ಎಸೆತಗಳನ್ನು ಎದುರಿಸಿದ ರಮಣ್​ದೀಪ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 64 ರನ್​ ಚಚ್ಚಿದರು. ಇದಾಗ್ಯೂ ಅವರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟದೊಂದಿಗೆ 186 ರನ್ ಬಾರಿಸಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತ ಎ ಪ್ಲೇಯಿಂಗ್ 11: ಪ್ರಭ್​ ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅಭಿಷೇಕ್ ಶರ್ಮಾ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ನೆಹಾಲ್ ವಧೇರಾ , ರಮಣ್​ದೀಪ್ ಸಿಂಗ್ , ನಿಶಾಂತ್ ಸಿಂಧು , ಅಂಶುಲ್ ಕಾಂಬೋಜ್ , ರಾಹುಲ್ ಚಹರ್ , ರಸಿಖ್ ದಾರ್ ಸಲಾಂ , ಆಕಿಬ್ ಖಾನ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಸೆದಿಖುಲ್ಲಾ ಅಟಲ್ , ಝುಬೈದ್ ಅಕ್ಬರಿ , ದರ್ವಿಶ್ ರಸೂಲಿ (ನಾಯಕ) , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಕರೀಂ ಜನ್ನತ್ , ಶಾಹಿದುಲ್ಲಾ ಕಮಾಲ್ , ಶರಫುದ್ದೀನ್ ಅಶ್ರಫ್ , ಅಬ್ದುಲ್ ರೆಹಮಾನ್ , ಅಲ್ಲಾ ಗಜನ್ಫರ್ , ಖೈಸ್ ಅಹ್ಮದ್ , ಬಿಲಾಲ್ ಸಮಿ.

ಫೈನಲ್ ಪೈಪೋಟಿ ಯಾವಾಗ?

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 7 ವಿಕೆಟ್​ಗಳ ಜಯ ಸಾಧಿಸಿದೆ. ಹಾಗೆಯೇ ಎರಡನೇ ಸೆಮಿಫೈನಲ್​ನಲ್ಲಿ ಭಾರತ ವಿರುದ್ಧ ಗೆಲುವು ದಾಖಲಿಸಿರುವ ಅಫ್ಘಾನಿಸ್ತಾನ್ ತಂಡವು ಫೈನಲ್​ಗೆ ಎಂಟ್ರಿಕೊಟ್ಟಿದೆ. ಅದರಂತೆ ಅಕ್ಟೋಬರ್ 27 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ.

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ